arun somanna

ಜೀವ ಬೆದರಿಕೆ-ವಂಚನೆ ಪ್ರಕರಣ: ಕೇಂದ್ರ ಸಚಿವ ಸೋಮಣ್ಣ ಪುತ್ರ ಅರುಣ್ ಸೇರಿ ಮೂವರಿಗೆ ನಿರೀಕ್ಷಣಾ ಜಾಮೀನು ಮಂಜೂರು
ಉದ್ಯಮದಲ್ಲಿ ವಂಚಿಸಿ, ಜೀವ ಬೆದರಿಕೆ ಹಾಕಿದ ಆರೋಪ ಸಂಬಂಧಿತ ಪ್ರಕರಣದಲ್ಲಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ ಸೋಮಣ್ಣ ಪುತ್ರ ಡಾ. ಬಿ ಎಸ್ ಅರುಣ್ ಸೇರಿದಂತೆ ಮೂವರಿಗೆ ಬೆಂಗಳೂರಿನ ಸತ್ರ ನ್ಯಾಯಾಲಯ ಶನಿವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಕೇಂದ್ರ ಸಚಿವ ವಿ ಸೋಮಣ್ಣ ಪುತ್ರ ವಿರುದ್ಧ FIR: ವಂಚನೆ, ಜೀವ ಬೆದರಿಕೆ ಆರೋಪದಡಿ ಅರುಣ್ ಸೋಮಣ್ಣಗೆ ಬಂಧನ ಭೀತಿ!
ಇತ್ತೀಚೆಗಷ್ಟೇ ಪ್ರಮಾಣ ವಚನ ಸ್ವೀಕರಿಸಿ ಕೇಂದ್ರ ಸಚಿವರಾದ ವಿ ಸೋಮಣ್ಣಗೆ ಆಘಾತ ಎದುರಾಗಿದ್ದು, ವಂಚನೆ, ಜೀವಬೆದರಿಕೆ ಆರೋಪದಡಿ ಅವರ ಪುತ್ರ ಅರುಣ್ ಸೋಮಣ್ಣ ಸೇರಿ ಮೂವರ ವಿರುದ್ಧ FIR ದಾಖಲಾಗಿದೆ.

ಗುಬ್ಬಿ ಕ್ಷೇತ್ರದಿಂದ ಅರುಣ್ ಗೆ ಟಿಕೆಟ್ ಕೇಳಿರುವುದು ನಿಜ; ಎಂಟಿಬಿ - ಕಾರಜೋಳ ಸಹ ಪುತ್ರರಿಗೆ ಟಿಕೆಟ್ ಬೇಡಿಕೆ: ಸೋಮಣ್ಣ
ಚಾಮರಾಜನಗರದ ಯಾವುದಾದರೂ ಕ್ಷೇತ್ರದಿಂದ ವಸತಿ ಸಚಿವ ವಿ.ಸೋಮಣ್ಣ ಹಾಗೂ ಅವರ ಪುತ್ರ ಡಾ.ಅರುಣ್ ಸೋಮಣ್ಣ ಅವರನ್ನು ಗುಬ್ಬಿಯಿಂದ ಕಣಕ್ಕಿಳಿಸಲು ಭಾರತೀಯ ಜನತಾ ಪಕ್ಷದ ಹೈಕಮಾಂಡ್ ರಣತಂತ್ರ ರೂಪಿಸಿದೆ ಎನ್ನಲಾಗಿದೆ.

ಡಾ. ಅರುಣ್ ಸೋಮಣ್ಣಗೆ ಬಿಜೆಪಿಯಲ್ಲಿ ಸ್ಥಾನ: ತಣ್ಣಗಾಯ್ತು ವಸತಿ ಸಚಿವರ ಅಸಮಾಧಾನ!
ವಸತಿ ಮತ್ತು ಮೂಲಸೌಕರ್ಯ ಸಚಿವ ವಿ.ಸೋಮಣ್ಣ ಅವರ ಅಸಮಾಧಾನಕ್ಕೆ ಮದ್ದು ಅರೆದಿರುವ ಬಿಜೆಪಿ, ಅವರ ಪುತ್ರ ಡಾ.ಅರುಣ್ ಸೋಮಣ್ಣ ಅವರನ್ನು ಪಕ್ಷದ ತುಮಕೂರು ಜಿಲ್ಲಾ ಘಟಕ ಉಪಾಧ್ಯಕ್ಷರನ್ನಾಗಿ ನೇಮಿಸಿದೆ.

ಒಂದು ಚುನಾವಣೆ ಗೆದ್ದ ತಕ್ಷಣ ಮರಿಹುಲಿ ಎಂದು ಕರೆದರೆ ಹೇಗೆ? ನಮ್ಮನ್ನು ತುಳಿಯಲು ಬಂದರೆ ಸುಮ್ಮನಿರಲ್ಲ: ವಿಜಯೇಂದ್ರಗೆ ಅರುಣ್ ಸೋಮಣ್ಣ ವಾರ್ನಿಂಗ್
ಪಕ್ಷಕ್ಕೆ ಸೋಮಣ್ಣ ಅವರ ಕೊಡುಗೆ ದೊಡ್ಡದು. ನನ್ನ ತಂದೆಗೆ ಅವಮಾನ ಆದ್ರೆ ಸಹಿಸುವುದಿಲ್ಲ. ಹೀಗಾಗಿ ನಾನು ಮಾತನಾಡಿದ್ದೇನೆ. 2008 ಮತ್ತು 2013 ರ ವಿಧಾನಸಭಾ ಚುನಾವಣೆಯಲ್ಲಿ ಸೋಮಣ್ಣ ಅವರ ಸೋಲಿಗೆ ಕಾರಣರು ಯಾರು? ಈ ಬಗ್ಗೆ ಚರ್ಚೆಗೆ ನಾನು ಸಿದ್ಧನಿದ್ದೇನೆ.

ನನಗೆ 72 ವರ್ಷ, ನಾನು ನಿಂತ ನೀರಲ್ಲ, ಹರಿಯುವ ನೀರು: ಮಗನ ರಾಜಕೀಯ ಹಿತಾಸಕ್ತಿ ನಿರ್ಲಕ್ಷಿಸಿದರೆ ಬಿಜೆಪಿಗೆ ಸೋಮಣ್ಣ ಗುಡ್ ಬೈ?
ವಸತಿ ಸಚಿವ ವಿ ಸೋಮಣ್ಣ ಅವರು ಒಂದೆರಡು ವಾರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಸಾಧ್ಯತೆಯಿದೆ, ಅವರ ಈ ಕ್ರಮದಿಂದ ಕಾಂಗ್ರೆಸ್ ಗೆ ಸಹಾಯವಾಗಲಿದೆ. ಆದರೆ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಕೇಸರಿ ಪಕ್ಷದ ಮಹತ್ವಾಕಾಂಕ್ಷೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ.

ಮಗನ ರಾಜಕೀಯ ಪ್ರವೇಶಕ್ಕೆ ಬಿಜೆಪಿ ಅಡ್ಡಗಾಲು: ನಡ್ಡಾ ರಥಯಾತ್ರೆ ಪಂಕ್ಚರ್ ಮಾಡಿದ್ರಾ ಸೋಮಣ್ಣ? ವಸತಿ ಸಚಿವರ ಚಿತ್ತ ಕಾಂಗ್ರೆಸ್ ನತ್ತ!
ಬಿಜೆಪಿ ಮೇಲೆ ಮುನಿಸಿಕೊಂಡಿರುವ ವಿ.ಸೋಮಣ್ಣ ಚಾಮರಾಜನಗರದಲ್ಲಿ ನಡೆದ ಜೆ.ಪಿ ನಡ್ಡಾ ಕಾರ್ಯಕ್ರಮಕ್ಕೆ ಗೈರಾಗುವ ಮೂಲಕ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ ಎನ್ನಲಾಗಿದೆ.

