Ashok Gehlot

ನಮ್ಮ ಸರ್ಕಾರಕ್ಕೆ ಬಹುಮತ ಇದೆ, ತನಿಖಾ ಸಂಸ್ಥೆಗಳ ದಾಳಿಗೆ ಹೆದರುವುದಿಲ್ಲ: ಅಶೋಕ್ ಗೆಹ್ಲೋಟ್
ಕಾಂಗ್ರೆಸ್ ಕೇಂದ್ರ ತನಿಖಾ ಸಂಸ್ಥೆಗಳ ಇಂತಹ ದಾಳಿಗಳಿಗೆಲ್ಲ ಹೆದರುವುದಿಲ್ಲ, ತಮ್ಮ ಸರ್ಕಾರಕ್ಕೆ ಬಹುಮತವಿದೆ ಎಂದು ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಪುನರುಚ್ಛರಿಸಿದ್ದಾರೆ.

ಆಡಿಯೋ ಕ್ಲಿಪ್ ಅಸಲಿಯಾಗಿದ್ದು, ಬೇಕಾದರೆ ವಿಧಿವಿಜ್ಞಾನ ಪರೀಕ್ಷೆಗೆ ವಿದೇಶಕ್ಕೆ ಕಳುಹಿಸಿ: ರಾಜಸ್ಥಾನ ಸಿಎಂ
ಜನರಿಂದ ಚುನಾಯಿತರಾದ ಸರ್ಕಾರವನ್ನು ಉರುಳಿಸುವ ಪ್ರಯತ್ನಕ್ಕೆ ಸಂಬಂಧಿಸಿದ ಆಡಿಯೋ ಕ್ಲಿಪ್ ಅಸಲಿಯಾಗಿದ್ದು, ಬೇಕಾದರೆ ಅದನ್ನು ವಿಧಿವಿಜ್ಞಾನ ಪರೀಕ್ಷೆಗಾಗಿ ವಿದೇಶಕ್ಕೆ ಕಳುಹಿಸಲಿ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ತಿರುಗೇಟು ನೀಡಿದ್ದಾರೆ.

ಅಶೋಕ್ ಗೆಹ್ಲೋಟ್ v/s ಸಚಿನ್ ಪೈಲಟ್: ಇಂದು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ
ಸಚಿನ್ ಪೈಲಟ್ ಮತ್ತು ಇತರ 18 ಮಂದಿ ಶಾಸಕರ ಅನರ್ಹತೆ ಪ್ರಕರಣವನ್ನು ವಿಳಂಬ ಮಾಡುತ್ತಿರುವ ಹೈಕೋರ್ಟ್ ಕ್ರಮವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿರುವ ರಾಜಸ್ತಾನ ವಿಧಾನಸಭೆ ಸ್ಪೀಕರ್ ಸಿ ಪಿ ಜೋಶಿ ಅವರ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಗುರುವಾರ ನಡೆಸಲಿದೆ.

ಸರ್ಕಾರ ಉರುಳಿಸಲು ಹಲವು ನಾಯಕರ ಸಂಚು: ಪ್ರಧಾನಿ ಮೋದಿಗೆ ರಾಜಸ್ತಾನ ಸಿಎಂ ಅಶೋಕ್ ಗೆಹ್ಲೋಟ್ ಪತ್ರ!
ತಮ್ಮ ಸರ್ಕಾರವನ್ನು ಉರುಳಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಅದರಲ್ಲಿ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೆಸರನ್ನು ಪ್ರಸ್ತಾಪಿಸಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ರಸಗೊಬ್ಬರ ಹಗರಣ: ಅಶೋಕ್ ಗೆಹ್ಲೊಟ್ ಸೋದರನ ಕಂಪೆನಿ ಮೇಲೆ ಜಾರಿ ನಿರ್ದೇಶನಾಲಯ ದಾಳಿ, ದೇಶಾದ್ಯಂತ ಶೋಧ
ರಸಗೊಬ್ಬರ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಅವರ ಸೋದರನಿಗೆ ಸೇರಿದ ಆಸ್ತಿ ಮೇಲೆ ಬುಧವಾರ ದಾಳಿ ನಡೆಸಿದೆ. ದೇಶದ ಹಲವು ಭಾಗಗಳಲ್ಲಿ ಇಂದು ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯ ಶೋಧ ಕಾರ್ಯ ಮುಂದುವರಿಸಿದೆ.

ಸಿಬಿಐ ತನಿಖೆಗೆ ಪೂರ್ವಾನುಮತಿ ಕಡ್ಡಾಯ: ರಾಜಸ್ಥಾನ ಸಿಎಂ ಗೆಹ್ಲೋಟ್ ಆದೇಶ
ರಾಜಸ್ಥಾನದಲ್ಲಿನ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೈ ಶಾಸಕರು ಬಂಡಾಯವೆದ್ದಿದ್ದಾರೆ. ಇನ್ನು ರಾಜ್ಯದಲ್ಲಿ ಕುದುರೆ ವ್ಯಾಪಾರ ಕುರಿತು ಕಾಂಗ್ರೆಸ್ ಆರೋಪಿಸಿದ್ದು ಇದಕ್ಕೆ ಪ್ರತಿಯಾಗಿ ಬಿಜೆಪಿ ಸಿಬಿಐ ತನಿಖೆಗೆ ಆಗ್ರಹಿಸುತ್ತಿದೆ.

ಸಚಿನ್ ಪೈಲಟ್ 'ನಿಷ್ಪ್ರಯೋಜಕ' ಅಂತ ಗೊತ್ತಿತ್ತು, ಆದರೆ ಪಕ್ಷದ ಹಿತಕ್ಕಾಗಿ ಸುಮ್ಮನಿದ್ದೆ: ಗೆಹ್ಲೋಟ್
ಕಾಂಗ್ರೆಸ್ ಬಂಡಾಯ ನಾಯಕ ರಾಜಸ್ಥಾನ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಒಬ್ಬ 'ನಿಷ್ಪ್ರಯೋಜಕ' ಏನನ್ನು ಮಾಡುತ್ತಿರಲಿಲ್ಲ. ಆದರೆ ಪಕ್ಷದ ಹಿತದೃಷ್ಟಿಯಿಂದ ನಾನು ಅವರನ್ನು ಪ್ರಶ್ನೆ ಮಾಡಲಿಲ್ಲ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಸೋಮವಾರ ಹೇಳಿದ್ದಾರೆ.

ಫೋನ್ ಟ್ಯಾಪಿಂಗ್ ಆರೋಪ: ರಾಜಸ್ತಾನ ಸರ್ಕಾರ ಬಳಿ ವರದಿ ಕೇಳಿದ ಕೇಂದ್ರ ಗೃಹ ಸಚಿವಾಲಯ
ರಾಜಸ್ತಾನ ರಾಜಕೀಯದಲ್ಲಿ ಮುಂದುವರಿದಿರುವ ರಾಜಕೀಯ ಅನಿಶ್ಚಿತತೆ ಮಧ್ಯೆ, ರಾಜಕೀಯ ನಾಯಕರ ಅದರಲ್ಲೂ ವಿರೋಧ ಪಕ್ಷ ಬಿಜೆಪಿ ನಾಯಕರ ಫೋನ್ ಸಂಭಾಷಣೆಗಳನ್ನು ಕದ್ದಾಲಿಸಲಾಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ರಾಜಸ್ತಾನ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಬಳಿ ವರದಿ ಕೇಳಿದೆ.

ರಾಜಸ್ತಾನ ಆಡಿಯೊ ಟೇಪ್ ಆರೋಪ:ತನಿಖೆಗೆ ವಿಶೇಷ ಪೊಲೀಸ್ ತಂಡ ರಚನೆ
ರಾಜಸ್ತಾನದಲ್ಲಿ ಅಶೋಕ್ ಗೆಹ್ಲೊಟ್ ನೇತೃತ್ವದ ಸರ್ಕಾರವನ್ನು ಉರುಳಿಸಲು ಪಿತೂರಿ ನಡೆಸಿದ್ದರು ಎನ್ನಲಾದ ಆಡಿಯೊ ಟೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ದಾಖಲಿಸಿರುವ ಕೇಸಿನ ಬಗ್ಗೆ ತನಿಖೆ ನಡೆಸಲು ರಾಜಸ್ತಾನ ಪೊಲೀಸರ ವಿಶೇಷ ತಂಡವನ್ನು ರಚಿಸಲಾಗಿದೆ.

