Ashok Gehlot

ಕಾಂಗ್ರೆಸ್ ಅಧ್ಯಕ್ಷೀಯ ಅಭ್ಯರ್ಥಿಗಳ ಬಗ್ಗೆ ಇನ್ನೂ ಕುತೂಹಲ: ಅಶೋಕ್ ಗೆಹ್ಲೊಟ್ ಇಂದು ಸೋನಿಯಾ ಭೇಟಿ ಸಾಧ್ಯತೆ
ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ, ರಾಜಸ್ತಾನದ ಹಠಾತ್ ರಾಜಕೀಯ ಬೆಳವಣಿಗೆಗಳ ಮಧ್ಯೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನಡುವಿನ ಬಹುನಿರೀಕ್ಷಿತ ಸಭೆ ಇಂದು ಗುರುವಾರಕ್ಕೆ ಮುಂದೂಡಲ್ಪಟ್ಟಿದೆ.

ಅಡಕತ್ತರಿಯಲ್ಲಿ ಸಿಎಂ ಅಶೋಕ್ ಗೆಹ್ಲೋಟ್: ಸೋನಿಯಾ ಭೇಟಿಯಲ್ಲೇನಾಗಲಿದೆ?
ಅಶೋಕ್ ಗೆಹ್ಲೋಟ್ ನೇತೃತ್ವದಲ್ಲಿ ಕಾಂಗ್ರೆಸ್ ಕೆಲಸ ಮಾಡುತ್ತದೆ. ಅವರ ರಾಜೀನಾಮೆ ಬಗ್ಗೆ ನಾವು ಚರ್ಚಿಸಿಲ್ಲ. ಅವರು ಇಂದು ರಾಜೀನಾಮೆ ನೀಡುತ್ತಿಲ್ಲ, ಮುಂದೆಯೂ ಅವರು ರಾಜೀನಾಮೆ ನೀಡುವುದಿಲ್ಲ...

ರಾಜಸ್ಥಾನ ಬಿಕ್ಕಟ್ಟು: ಸಿಎಂ ಸ್ಥಾನಕ್ಕೆ ಗೆಹ್ಲೋಟ್ ರಾಜಿನಾಮೆ?; ಹೈಕಮಾಂಡ್ ಸಂದೇಶ ರವಾನೆಗೆ ಕಮಲ್‌ನಾಥ್ ನೇಮಕ
ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿರುವಂತೆಯೇ, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವ ಮೊದಲು ರಾಜಸ್ಥಾನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಅಶೋಕ್ ಗೆಹ್ಲೋಟ್ ಅವರನ್ನು ಮನವೊಲಿಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೋಮವಾರ ಪಕ್ಷದ ಹಿರಿಯ ನಾಯಕ ಕಮಲ್ ನಾಥ್ ಅವರನ್ನು ನಿಯೋಜಿಸಲು ನಿರ್ಧರಿಸಿದ್ದಾರೆ.

ಪೈಲಟ್ ಮುಖ್ಯಮಂತ್ರಿಯಾಗಲು ಗೆಹ್ಲೋಟ್ ಬಣ ಅಡ್ಡಿ; ರಾಜಸ್ಥಾನದ ಬಿಕ್ಕಟ್ಟು ಶಮನಕ್ಕೆ ಕಮಲ್ ನಾಥ್ ಮುಂದಾಗುವ ಸಾಧ್ಯತೆ
ರಾಜಸ್ಥಾನ ರಾಜ್ಯ ಉಸ್ತುವಾರಿ ಅಜಯ್ ಮಾಕೆನ್ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಪ್ರಯತ್ನಗಳು ವಿಫಲವಾದ ನಂತರ ರಾಜಸ್ಥಾನದಲ್ಲಿ ಪೂರ್ಣ ಪ್ರಮಾಣದ ರಾಜಕೀಯ ಬಿಕ್ಕಟ್ಟನ್ನು ಶಮನಗೊಳಿಸಲು ಹಿರಿಯ ಕಾಂಗ್ರೆಸ್ ನಾಯಕ ಕಮಲ್ ನಾಥ್ ಅವರು ಕಣಕ್ಕಿಳಿಯುವ ಸಾಧ್ಯತೆಯಿದೆ ಎಂದು ಮೂಲವೊಂದು ಸೋಮವಾರ ತಿಳಿಸಿದೆ.

ರಾಜಸ್ಥಾನ ರಾಜಕೀಯ ಬಿಕ್ಕಟ್ಟು: ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ರೇಸ್ ನಿಂದ ಗೆಹ್ಲೋಟ್ ಹೊರಗಿಡುವಂತೆ ಸಿಡಬ್ಲ್ಯೂಸಿ ಸದಸ್ಯರ ಒತ್ತಾಯ
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಉತ್ತರಾಧಿಕಾರಿ ನೇಮಕ ವಿಚಾರವಾಗಿ ರಾಜಸ್ಥಾನದಲ್ಲಿ ತೀವ್ರ ರಾಜಕೀಯ ಬಿಕ್ಕಟ್ಟು ತಲೆದೋರಿರುವಂತೆಯೇ, ಎಐಸಿಸಿ ಅಧ್ಯಕ್ಷೀಯ ಸ್ಥಾನದ ರೇಸ್ ನಿಂದ ಅಶೋಕ್ ಗೆಹ್ಲೋಟ್ ಅವರನ್ನು ಹೊರಗಿಟ್ಟು, ಮತ್ತೋರ್ವ ಅಭ್ಯರ್ಥಿಯನ್ನು ಆಯ್ಕೆ ಮಾಡುವಂತೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರು ಒತ್ತಾಯಿಸಿದ್ದಾರೆ.

ರಂಗೇರಿದ ರಾಜಸ್ತಾನ ರಾಜಕೀಯ; ಸಿಎಂ ಹುದ್ದೆಗಾಗಿ ಸಚಿನ್ ಪೈಲಟ್ ತೀವ್ರ ಲಾಬಿ; ಗೆಹ್ಲೋಟ್ ಉತ್ತರಾಧಿಕಾರಿ ಯಾರು?
ಕಾಂಗ್ರೆಸ್ ಪಕ್ಷದ ಮುಂದಿನ ಅಧ್ಯಕ್ಷರ ಆಯ್ಕೆಗೆ ಚುನಾವಣೆ ಸಮೀಪಿಸುತ್ತಿರುವಂತೆಯೇ, ರಾಜಸ್ಥಾನದ ಹೊಸ ಮುಖ್ಯಮಂತ್ರಿ ಯಾರಾಗುತ್ತಾರೆ ಎಂದು ತಿಳಿಯಲು ಎಲ್ಲರೂ ಈಗ ಉತ್ಸುಕರಾಗಿದ್ದಾರೆ.

'ರಾಹುಲ್ ಗಾಂಧಿ ನನಗೆ ಹೇಳಿದ್ದಾರೆ...': ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಬಗ್ಗೆ ಅಶೋಕ್ ಗೆಹ್ಲೋಟ್ ಮಾತು!
ಗಾಂಧಿ ಕುಟುಂಬದ ಯಾರೊಬ್ಬರು ಮುಂದಿನ ಕಾಂಗ್ರೆಸ್ ಅಧ್ಯಕ್ಷರಾಗಬಾರದು ಎಂದು ಪಕ್ಷದ ನಾಯಕ ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ರಾಜಸ್ತಾನ ಸಿಎಂ ಹುದ್ದೆಯಿಂದ ಗೆಹ್ಲೊಟ್ ಕೆಳಗಿಳಿಯುವ ಸಾಧ್ಯತೆ, ಶಶಿ ತರೂರ್ ಗೆ ಕಾರ್ಯಕಾರಿ ಸಮಿತಿ ಸ್ಥಾನ ಸಾಧ್ಯತೆ
ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನದ ಚುನಾವಣೆಯ ಭವಿಷ್ಯವನ್ನು ಲೆಕ್ಕಿಸದೆಯೇ ಶಶಿ ತರೂರ್ ಅವರು ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ (CWC) ಸ್ಥಾನ ಪಡೆಯಬಹುದು.

'ಒಬ್ಬ ವ್ಯಕ್ತಿಗೆ ಒಂದು ಹುದ್ದೆ' ನಿಯಮ ಬೆಂಬಲಿಸಿದ ರಾಹುಲ್ ಗಾಂಧಿ, ಗೆಹ್ಲೋಟ್ ಗೆ ಹಿನ್ನಡೆ
ರಾಜಸ್ಥಾನದ ಉದಯಪುರದ ಚಿಂತನ್ ಶಿಬಿರದಲ್ಲಿ ತೆಗೆದುಕೊಂಡ ಒಬ್ಬ ವ್ಯಕ್ತಿಗೆ ಒಂದು ಹುದ್ದೆ ಎಂಬ ನಿರ್ಣಯವನ್ನು ಎಲ್ಲರೂ ಅನುಸರಿಸುವ ನಿರೀಕ್ಷೆಯಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಗುರುವಾರ ಹೇಳಿದ್ದಾರೆ.

