ದೇಶರಾಜಸ್ತಾನದಲ್ಲಿ ನಾಯಕತ್ವ ಬದಲಾವಣೆ: ಜೈಪುರದಲ್ಲಿರುವ ಸಿಎಂ ಗೆಹ್ಲೊಟ್ ನಿವಾಸದಲ್ಲಿ ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಸಭೆ
ಕಾಂಗ್ರೆಸ್ ಪಕ್ಷದಲ್ಲಿ ಅಧ್ಯಕ್ಷೀಯ ಚುನಾವಣಾ ಪ್ರಕ್ರಿಯೆ ಗರಿಗೆದರುತ್ತಿದ್ದಂತೆ ಹಲವು ಬೆಳವಣಿಗೆಗಳಾಗುತ್ತಿವೆ. ಇಂದು ಸಂಜೆ ಜೈಪುರದಲ್ಲಿ ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ನಿವಾಸದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ರಾಜಸ್ಥಾನದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ನಿರ್ಣಯವನ್ನು ಅಲ್ಲಿ ಅಂಗೀಕರಿಸಲಾಗುತ್ತದೆ.