Ashok

ಪ್ರವಾಹ ಸಮೀಕ್ಷೆ ಪೂರ್ಣಗೊಳಿಸಿದ ಕೇಂದ್ರ ತಂಡ: ರಾಜ್ಯದ ಅಧಿಕಾರಿಗಳೊಂದಿಗೆ ಮಹತ್ವದ ಸಭೆ
ರಾಜ್ಯದ ಹಲವು ಜಿಲ್ಲೆಗಳಲ್ಲಿ ತಲೆದೋರಿರುವ ಪ್ರವಾಹ ನಷ್ಟ ಅಂದಾಜು ಕಾರ್ಯವನ್ನು ಪೂರ್ಣಗೊಳಿಸಿರುವ ಕೇಂದ್ರದ ಸಮೀಕ್ಷಾ ತಂಡ ರಾಜ್ಯದ ಅಧಿಕಾರಿಗಳೊಂದಿಗೆ ಬುಧವಾರ ಮಹತ್ವದ ಸಭೆ ನಡೆಸಿತು.

ಮನಮೋಹನಸಿಂಗ್ ಸರ್ಕಾರದ ಅವಧಿಯಲ್ಲಿ ರೂಪಿಸಿದ ಎನ್‍ಡಿಆರ್‍ಎಫ್ ನೀತಿಗಳಿಂದ ರಾಜ್ಯಕ್ಕೆ ಅನ್ಯಾಯ: ಅಶೋಕ್
ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಕೇಂದ್ರದಿಂದ ರಾಜ್ಯ ಸರ್ಕಾರ ನಿರೀಕ್ಷಿತ ಪರಿಹಾರ ಪಡೆಯುವಲ್ಲಿ ಮನಮೋಹನಸಿಂಗ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ರೂಪಿಸಿದ ಎನ್‍ಡಿಆರ್‍ಎಫ್ ನೀತಿಗಳಿಂದ ಅನ್ಯಾಯವಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಆರೋಪಿಸಿದ್ದಾರೆ.

ಹೆಚ್ಚು ಪ್ರವಾಹ ಪರಿಸ್ಥಿತಿ ಎದುರಾಗುವ 10 ಜಿಲ್ಲೆಗಳಲ್ಲಿ ಶಾಶ್ವತ ಪುನಶ್ಚೇತನ ಭವನ ನಿರ್ಮಾಣ: ಸಚಿವ ಆರ್.ಅಶೋಕ್
ರಾಜ್ಯದಲ್ಲಿ ಹೆಚ್ಚು ಪ್ರವಾಹ ಪರಿಸ್ಥಿತಿ ಎದುರಿಸುವ 10 ಜಿಲ್ಲೆಯಲ್ಲಿ ಶಾಶ್ವತವಾಗಿ ಪುನಶ್ಚೇತನ ಭವನ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಹೇಳಿದ್ದಾರೆ.

ನೆರೆ: ರಾಜ್ಯದ ಜೊತೆಗೆ ಇಂದು ಪ್ರಧಾನಿ ಸಭೆ, ಸಿಎಂ ಗೈರು ಹಿನ್ನೆಲೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಬೊಮ್ಮಾಯಿ, ಅಶೋಕ್ ಭಾಗಿ
ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಅತಿವೃಷ್ಠಿ ಹಾಗೂ ಪ್ರವಾಹ ಭೀತಿ ತಲೆದೋರಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ರಾಜ್ಯ ಸರ್ಕಾರದೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದು, ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ...

ಅಶೋಕ್, ಬೊಮ್ಮಾಯಿಗೆ ಪ್ರವಾಹ ನಿರ್ವಹಣೆ ಹೊಣೆ
ಕೋವಿಡ್-19 ಸೋಂಕಿನಿಂದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕಂದಾಯ ಸಚಿವ ಆರ್. ಅಶೋಕ್ ಮತ್ತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಪ್ರವಾಹ ನಿರ್ವಹಣೆಯ ಹೊಣೆ ವಹಿಸಲಾಗಿದೆ.

ಕೋವಿಡ್-19 ಪರಿಸ್ಥಿತಿ ಎದುರಿಸಲು ಪೂರ್ಣಪ್ರಮಾಣದಲ್ಲಿ ಸಿದ್ಧಗೊಳ್ಳಲು ಲಾಕ್'ಡೌನ್ ಸಹಾಯಕವಾಗಲಿದೆ: ಸಚಿವ ಆರ್. ಅಶೋಕ್
ರಾಜ್ಯದಲ್ಲಿ ಕೊರೋನಾ ವೈರಸ್ ಹರಡುವಿಕೆಯನ್ನು ಮಟ್ಟಹಾಕಲು ಬೆಂಗಳೂರಿನಲ್ಲಿ ಮಂಗಳವಾರದಿಂದ 7 ದಿನಗಳ ಕಾಲ ಲಾಕ್'ಡೌನ್ ಘೋಷಣೆ ಮಾಡಲಾಗಿದ್ದು, ಪರಿಸ್ಥಿತಿ ಎದುರಿಸಲು ಪೂರ್ಣಪ್ರಮಾಣದಲ್ಲಿ ಸಿದ್ಧಗೊಳ್ಳಲು ಲಾಕ್'ಡೌನ್ ಸಹಾಯಕವಾಗಲಿದೆ ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಚಿಕಿತ್ಸೆ ನೀಡಲು ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ: ಸಚಿವ ಆರ್.ಅಶೋಕ್
ರಾಜ್ಯದ ಯಾವುದೇ ಸರ್ಕಾರಿ, ಖಾಸಗಿ ಆಸ್ಪತ್ರೆಗಳು ಕೊರೋನಾ ಪಾಸಿಟಿವ್ ಇರುವ ರೋಗಿಗಳನ್ನು ಹಾಸಿಗೆ ಖಾಲಿಯಿದ್ದರೂ ದಾಖಲಿಸಿಕೊಳ್ಳದೆ ಇದ್ದರೆ ಅಥವಾ ವಾಪಸ್ ಕಳುಹಿಸಿದರೆ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಸೋಮವಾರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮತ್ತೆ ಲಾಕ್'ಡೌನ್ ಇಲ್ಲ: ವದಂತಿಗಳಿಗೆ ತೆರೆ ಎಳೆದ ಸಚಿವ ಆರ್.ಅಶೋಕ್
ರಾಜ್ಯದಲ್ಲಿ ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ದಿನೇ ದಿನೇ ಕೊರೋನಾ ಸೋಂಕು ಪ್ರಕರಣ ಹೆಚ್ಚುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಲಾಕ್'ಡೌನ್ ಜಾರಿಗೊಳಿಸಲಾಗುತ್ತದೆ ಎಂಬ ವದಂತಿಗಳಿಗೆ ರಾಜ್ಯ ಸರ್ಕಾರ ತೆರೆ ಎಳೆದಿದೆ.

ಪ್ರಸಕ್ತ ಸಾಲಿನ ಮಾನ್ಸೂನ್ ಎದುರಿಸಲು ರಾಜ್ಯ ಸಿದ್ಧ: ಸಚಿವ ಆರ್.ಅಶೋಕ್
ಪ್ರಸಕ್ತ ಸಾಲಿನ ಮಾನ್ಸೂನ್ ಎದುರಿಸಲು ಸರ್ಕಾರ ಎಲ್ಲಾ ರೀತಿಯ ಸಿದ್ಧತೆಗಳನ್ನು ನಡೆಸಿದೆ ಎಂದು ಸಚಿವ ಆರ್.ಅಶೋಕ್ ಅವರು ತಿಳಿಸಿದ್ದಾರೆ.

