Ashoka

ಶಾಲೆಗಳ ನಿರ್ಮಾಣಕ್ಕೆ ಸರ್ಕಾರದ ಬಳಿ ಭೂಮಿ ಇಲ್ಲದಂತಾಗುತ್ತಿದೆ: ಸಚಿವ ಆರ್.ಅಶೋಕ್
ಕರ್ನಾಟಕದಲ್ಲಿ ಸರ್ಕಾರಿ ಭೂಮಿ ಖಾಲಿಯಾಗುತ್ತಿದ್ದು, ಮುಂದಿನ 10-12 ವರ್ಷಗಳಲ್ಲಿ ಸರ್ಕಾರಿ ಶಾಲೆಗಳು, ಆಸ್ಪತ್ರೆಗಳು ಮತ್ತು ಇತರ ಮೂಲಸೌಕರ್ಯಗಳನ್ನು ನಿರ್ಮಿಸಲು ಭೂಮಿಯನ್ನು ಹುಡುಕುವುದು ಕಷ್ಟವಾಗಬಹುದು ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದ್ದಾರೆ.

ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಳ: ಧರಣಿ ಕೈ ಬಿಟ್ಟ ಪ್ರಸನ್ನಾನಂದಪುರಿ ಸ್ವಾಮೀಜಿ
ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿಯನ್ನು ಶೇ 15 ರಿಂದ ಶೇ 17ಕ್ಕೆ ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ಮೀಸಲಾತಿಯನ್ನು ಶೇ 3ರಿಂದ ಶೇ 7ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ಸಿದ್ಧಪಡಿಸಿರುವ ಸುಗ್ರೀವಾಜ್ಞೆಗೆ ರಾಜ್ಯದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ ಬೆನ್ನಲ್ಲೇ ಪ್ರಸನ್ನಾನಂದಪುರಿ ಶ್ರೀ ಅವರು ತಮ್ಮ ಧರಣಿ ಅಂತ್ಯಗೊಳಿಸಿದ್ದಾರೆ.

ಬೆಳಗಾವಿ ಸುರಕ್ಷಿತವಾಗಿದ್ದು, ನಿಗದಿತ ವೇಳಾಪಟ್ಟಿಯಂತೆಯೇ ಅಧಿವೇಶನ ನಡೆಸಲಾಗುತ್ತದೆ: ರಾಜ್ಯ ಸರ್ಕಾರ ಸ್ಪಷ್ಟನೆ
ಬೆಂಗಳೂರಿನಲ್ಲಿ ಎರಡು ಓಮಿಕ್ರಾನ್ ಪ್ರಕರಣಗಳು ಪತ್ತೆಯಾದ ಬಳಿಕ ಸೋಂಕು ತಡೆಗಟ್ಟಲು ರಾಜ್ಯ ಸರ್ಕಾರ ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಈ ನಡುವೆ ಚಳಿಗಾಲ ಅಧಿವೇಶನ ಕುರಿತ ಊಹಾಪೋಹಗಳಿಗೆ ರಾಜ್ಯ ಸರ್ಕಾರ ತೆರೆ ಎಳೆದಿದೆ.

ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಉಪಚುನಾವಣೆ ಫಲಿತಾಂಶ ಕುರಿತು ಚರ್ಚೆಯಾಗಿಲ್ಲ: ಸಚಿವ ಆರ್.ಅಶೋಕ್
ರಾಜ್ಯದಲ್ಲಿ ಇತ್ತೀಚೆಗೆ ನಡೆದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಸೇರಿದಂತೆ ಕರ್ನಾಟಕದ ಬಗ್ಗೆ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಯಾವುದೇ ಚರ್ಚೆಗಳೂ ನಡೆದಿಲ್ಲ ಎಂದು ಸಚಿವ ಆರ್.ಅಶೋಕ್ ಅವರು ಭಾನುವಾರ ಹೇಳಿದ್ದಾರೆ.

ರಾಜ್ಯದಲ್ಲಿ ಭಾರೀ ಮಳೆ: ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸಚಿವ ಆರ್.ಅಶೋಕ್ ಸೂಚನೆ
ಮಳೆ ಪೀಡಿತ ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಂದಾಯ ಸಚಿವ ಆರ್.ಅಶೋಕ್ ಅವರು ಗುರುವಾರ ಸೂಚನೆ ನೀಡಿದ್ದಾರೆ.

1000 ಕೋವಿಡ್ ಮೃತರಿಗೆ ಪಿಂಡ ಪ್ರದಾನ ಮಾಡಿದ ಸಚಿವ ಆರ್.ಅಶೋಕ್
ಕೊರೋನಾ ಸೋಂಕಿನಿಂದ ಮೃತಪಟ್ಟ 1000ಕ್ಕೂ ಹೆಚ್ಚು ಅನಾಥ ಶವಗಳಿಗೆ ಸಚಿವ ಆರ್ ಅಶೋಕ್ ಅವರು ಸೋಮವಾರ ಪಿಂಡ ಪ್ರದಾನ ಮಾಡಿದರು.

ನಗರದಲ್ಲಿ 1,100 ಕೆರೆಗಳ ಒತ್ತುವರಿ ತೆರವು ಮಾಡಲಾಗಿದೆ: ಸಚಿವ ಆರ್. ಅಶೋಕ್
ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು ಇರುವ 1751 ಕೆರೆಗಳ ಪೈಕಿ 1500 ಕೆರೆಗಳು ಒತ್ತುವರಿಯಾಗಿದ್ದು, ಈ ಪೈಕಿ 1100 ಕೆರೆಗಳ ಒತ್ತುವರಿ ತೆರವು ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಹೇಳಿದ್ದಾರೆ.

ಮನೆ-ಮನೆಗೆ ಸಮೀಕ್ಷೆಯಿಂದಾಗಿ ನಗರದ ಆರೋಗ್ಯ ಸ್ಥಿತಿ ಕುರಿತು ಸ್ಪಷ್ಟ ಚಿತ್ರಣ ದೊರೆಯುತ್ತಿದೆ: ಸಚಿವ ಆರ್ ಅಶೋಕ
ಪಾಲಿಕೆ ವೈದ್ಯರು ನಿಮ್ಮ ಮನೆ ಬಾಗಿಲಿಗೆ' ಎಂಬ ಯೋಜನೆಯಡಿ ನಗರದಲ್ಲಿನ ಮನೆ ಮನೆಗೆ ತೆರಳಿ ನಡೆಸಲಾಗುತ್ತಿರುವ ಸಮೀಕ್ಷೆಯು ಆರೋಗ್ಯ ಸ್ಥಿತಿ ಕುರಿತು ಸ್ಪಷ್ಟ ಚಿತ್ರಣಗಳು ಸರ್ಕಾರಕ್ಕೆ ದೊರೆಯುತ್ತಿದೆ ಎಂದು ಸಚಿವ ಆರ್. ಅಶೋಕ್ ಅವರು ಸೋಮವಾರ ಹೇಳಿದ್ದಾರೆ.

ಸಾರ್ವಜನಿಕ ಗಣೇಶೋತ್ಸವಕ್ಕೆ ಸರ್ಕಾರದಿಂದ ಅನುಮತಿ ಸಾಧ್ಯತೆ: ಆರ್.ಅಶೋಕ್
ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಬಾರಿಯ ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡುವ ಕುರಿತು ಚಿಂತನೆ ನಡೆಯುತ್ತಿದ್ದು, ಈ ಕುರಿತು ಸೆಪ್ಟೆಂಬರ್ 5ರಂದು ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿದುಬಂದಿದೆ.

