Ashwath Narayan

ಹಣಕಾಸು ಇಲಾಖೆಯ ಆಕ್ಷೇಪ, ಕೋವಿಡ್-19 ಪರಿಸ್ಥಿತಿಯಿಂದಾಗಿ ಉಪನ್ಯಾಸಕರಿಗೆ ನೇಮಕಾತಿ ಪತ್ರ ನೀಡಲು ಸಾಧ್ಯವಾಗಿಲ್ಲ: ಡಿಸಿಎಂ
ಹಣಕಾಸು ಇಲಾಖೆಯ ಆಕ್ಷೇಪ ಹಾಗೂ ಕೊರೋನಾ ಪರಿಸ್ಥಿತಿಯಿಂದಾಗಿ ಆಯ್ಕೆಯಾಗಿರುವ ಉಪನ್ಯಾಸಕರಿಗೆ ನೇಮಕಾತಿ ಪತ್ರ ನೀಡಲು ಸಾಧ್ಯವಾಗಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿಎನ್.ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಶೀಘ್ರದಲ್ಲೇ ಸೈಬರ್ ಸುರಕ್ಷತಾ ನೀತಿ: ಡಿಸಿಎಂ ಅಶ್ವತ್ಥ್ ನಾರಾಯಣ
ತಂತ್ರಜ್ಞಾನ ಬೆಳವಣಿಗೆಯಿಂದ ಡಿಜಿಟಲ್ ವ್ಯವಹಾರಗಳು ಜಾಸ್ತಿಯಾಗುವ ಜೊತೆ ಸೈಬರ್ ಅಪರಾಧಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೈಬರ್ ಸುರಕ್ಷತಾ ಕಾರ್ಯನೀತಿ ರೂಪಿಸಲು ಸರ್ಕಾರ ಚಾಲನೆ ನೀಡಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಐಟಿ,ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ನೀಟ್, ಜೆಇಇ ನಡೆಸಲು ನಮಗೆ ಕೆ-ಸಿಇಟಿ ಮಾದರಿ ಇದೆ: ಅಶ್ವತ್ಥ ನಾರಾಯಣ
ದೇಶಾದ್ಯಂತ ಚರ್ಚೆಯಾಗುತ್ತಿರುವ ನೀಟ್ ಮತ್ತು ಜೆಇಇ ಪರೀಕ್ಷೆ ಕುರಿತವಿಚಾರದ ಬಗೆಗೆ ಉನ್ನತ ಶಿಕ್ಷಣ ಸಚಿವರಾಗಿರುವ ಉಪ ಮುಖ್ಯಮಂತ್ರಿ ಡಾ.ಎನ್.ಎನ್.ಅಶ್ವತ್ಥ ನಾರಾಯಣ ಪರೀಕ್ಷೆಗಳನ್ನು ಮುಂದೂಡದಿರಲು ಕಾರಣಗಳು , ಮತ್ತು ಪದವಿ ತರಗತಿ ಅ.1ರಿಂದ ಪ್ರಾರಂಬವಾಗುವ ಬಗೆಗೆ ಪತ್ರಿಕೆಯೊಡನೆ ಮಾತನಾಡಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಲ್ಲಿ ಕರ್ನಾಟಕವೇ ಮೊದಲಾಗಲಿದೆ: ಡಿಸಿಎಂ ಅಶ್ವತ್ಥನಾರಾಯಣ
ಹೊಸ ರಾಷ್ಟ್ರೀಯ ಶಿಕ್ಷಣ ನೀತಿ(ಎನ್ ಇಪಿ)ಯನ್ನು ಜಾರಿಗೊಳಿಸುವಲ್ಲಿ ಕರ್ನಾಟಕವೇ ಮೊದಲಿಗನಾಗಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ ಅವರು ಸೋಮವಾರ ಹೇಳಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ ಗುರಿ ತಲುಪಲು 'ಟಾರ್ಗೆಟ್ 2030': ಡಾ. ಸಿ.ಎನ್. ಅಶ್ವತ್ಥ ನಾರಾಯಣ
ಬರುವ 2030ರ ವೇಳೆಗೆ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ನಿಗದಿ ಮಾಡಲಾಗಿರುವ ಎಲ್ಲ ಗುರಿಗಳನ್ನು ಸಂಪೂರ್ಣವಾಗಿ ಸಾಧಿಸಲು ಹೆಜ್ಜೆ ಇಟ್ಟಿರುವ ರಾಜ್ಯ ಸರಕಾರ, ಮುಂದಿನ ಮೂರು ವರ್ಷಗಳಲ್ಲಿ 6 ಸಂಶೋಧನೆ ಮತ್ತು 10 ಬೋಧನಾ ಕೇಂದ್ರಿತ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಜತೆಗೆ 34 ಸ್ವಾಯತ್ತ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಉದ್ದೇಶಿಸಿದೆ.

ಚಲನಚಿತ್ರದ ಪೋಷಕ ಕಲಾವಿದರಿಗೆ ಆಲೆಯನ್ಸ್ ವಿವಿಯಿಂದ ಆರ್ಥಿಕ ನೆರವು : ಡಿಸಿಎಂ ಅಶ್ವತ್ಥ್ ನಾರಾಯಣ್
ಕೋವಿಡ್-19 ಕಾರಣದಿಂದ ತೀವ್ರ ಸಂಕಷ್ಟಕ್ಕೆ ಗುರಿಯಾಗಿರುವ ಕನ್ನಡ ಚಿತ್ರ ರಂಗದ 40 ಪೋಷಕ ಕಲಾವಿದರಿಗೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಅಲಿಯನ್ಸ್ ವಿಶ್ವವಿದ್ಯಾಲಯ ವತಿಯಿಂದ ಆರ್ಥಿಕ ನೆರವು ಕೊಡಿಸಿದ್ದಾರೆ.

ರೋರಿಚ್ ಎಸ್ಟೇಟ್ ಬದಲು ಹೆಸರಘಟ್ಟದಲ್ಲಿ ಫಿಲ್ಮ್ ಸಿಟಿ ನಿರ್ಮಾಣ: ಡಿಸಿಎಂ ಅಶ್ವತ್ಥ್ ನಾರಾಯಣ್
ಬಹುನಿರೀಕ್ಷೆಯ ಫಿಲ್ಮ್ ಸಿಟಿಯನ್ನು ರೋರಿಚ್ ಎಸ್ವೇಟಿನ ಬದಲು ಹೆಸರಘಟ್ಟ ದಲ್ಲಿಯೇ ನಿರ್ಮಾಣ ಮಾಡಲಾಗುವುದು. ಜತೆಗೆ ಕೋವಿಡ್-19 ನಿಂದ ತೀವ್ರ ಸಂಕಷ್ಟಕ್ಕೆ ಗುರಿ ಆಗಿರುವ ಚಿತ್ರ ರಂಗದ ಪುನಶ್ಚೇತನಕ್ಕೆ ಎಲ್ಲ ರೀತಿಯ ನೆರವೂ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ಥನಾರಾಯಣ ಹೇಳಿದರು.

ಕೋರ್ಟ್ ತೀರ್ಪು ಆಧರಿಸಿ ಸಿಇಟಿ ಪರೀಕ್ಷೆ ನಡೆಸಲಾಗುವುದು: ಉನ್ನತ ಶಿಕ್ಷಣ ಸಚಿವ
ಎಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್'ಗಳ ಪ್ರವೇಶಕ್ಕಾಗಿ ನಡೆಸಲಿರುವ ಸಿಇಟಿ ಪರೀಕ್ಷಾ ಸಿದ್ಧತೆಗಳ ಕುರಿತ ವರದಿಯನ್ನು ರಾಜ್ಯ ಸರ್ಕಾರವು ಬುಧವಾರ ಹೈಕೋರ್ಟ್'ಗೆ ಸಲ್ಲಿಸಿದೆ. ಈ ವರದಿ ಆಧಾರದ ಮೇಲೆ ನ್ಯಾಯಾಲಯ ಪರೀಕ್ಷೆ ನಡೆಸಬೇಕೋ ಅಥವಾ ಬೇಡವೋ ಎಂಬ ಬಗ್ಗೆ ನೀಡುವ ತೀರ್ಪಿನಂತೆ ನಡೆದುಕೊಳ್ಳಲು ತೀರ್ಮಾನಿಸಿದೆ.

ರಾಜಧಾನಿಯಲ್ಲಿ ನಾಳೆಯಿಂದ ಅನ್‌ಲಾಕ್: ಕೆಲವು ವಲಯಗಳಲ್ಲಿ ನಿರ್ಬಂಧ ಮುಂದುವರಿಕೆ; ಅಶ್ವತ್ಥನಾರಾಯಣ
ಲಾಕ್‌ಡೌನ್ ಜಾರಿಗೆ ಮೊದಲು ಇದ್ದ ಸ್ಥಿತಿಗೆ ರಾಜಧಾನಿ ನಾಳೆ ಮರಳಲಿದೆ. ಆದರೆ ಲಾಕ್‌ಡೌನ್ ಮಾರ್ಗಸೂಚಿಗಳಲ್ಲಿ ತಿಳಿಸಿದ ಕೆಲವು ವಲಯಗಳು ಅನ್‌ಲಾಕ್ ಆಗಲಿವೆ. ಆದರೆ ಜಿಮ್, ಶಾಲೆ ಮುಂತಾದ ವಲಯಗಳ ಮೇಲಿನ ನಿರ್ಬಂಧ ಮುಂದುವರಿಯಲಿವೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. `

