Ashwathnarayan

ಪಿಎಸ್‌ಐ ನೇಮಕಾತಿ ಹಗರಣ: ಎಚ್‌ಡಿಕೆ, ಅಶ್ವತ್ಥ್ ನಾರಾಯಣ್, ಯತ್ನಾಳ್'ಗೆ ನೋಟಿಸ್ ಜಾರಿ
ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಸಿ ಎನ್ ಅಶ್ವತ್ಥdನಾರಾಯಣ್ಸ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿ ಮುಖಂಡ ಬಸವರಾಜ ದಡೇಸುಗೂರು ಅವರಿಗೆ ನೋಟಿಸ್ ಜಾರಿಯಾಗಿದೆ.

ಎನ್‌ಇಪಿ ರದ್ದು: ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಅಶ್ವತ್ಥ್ ನಾರಾಯಣ್ ತೀವ್ರ ಕಿಡಿ
ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ರದ್ದುಪಡಿಸಿರುವ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಚಿವ ಅಶ್ವತ್ಥ್ ನಾರಾಯಣ್ ಅವರು ಗುರುವಾರ ತೀವ್ರವಾಗಿ ಕಿಡಿಕಾರಿದ್ದಾರೆ.

ಎಲ್ಲದಕ್ಕೂ ಅಜ್ಜಯ್ಯನ ಬಳಿ ಹೋಗ್ತಿಯಾ, ಈಗ ತಾಕತ್, ಧಮ್ ಇದ್ರೆ ಪ್ರಮಾಣ ಮಾಡಪ್ಪ: ಡಿಕೆಶಿಗೆ ಅಶ್ವತ್ಥ ನಾರಾಯಣ್ ಸವಾಲು
ಕಮಿಷನ್ ಆರೋಪ ಸಾಬೀತು ಮಾಡಿದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದಿದ್ದ ಡಿಸಿಎಂ ಡಿಕೆ ಶಿವಕುಮಾರ್‌ಗೆ ತಿರುಗೇಟು ನೀಡಿರುವ ಅಶ್ವತ್ಥ ನಾರಾಯಣ, ನೀನು ರಾಜಕೀಯ ನಿವೃತ್ತಿ ಆದರೂ ಆಗು, ಕಾಂಗ್ರೆಸ್ ಅನ್ನು ನಿರ್ನಾಮ ಆದರೂ ಮಾಡು ಎಂದು ಹೇಳಿದ್ದಾರೆ.

ಬೆಂಗಳೂರು ನಂದು: ಸ್ವಾಮೀಜಿ ಸಮ್ಮುಖದಲ್ಲೇ ಡಿಕೆಶಿ- ಅಶ್ವತ್ಥನಾರಾಯಣ ವಾಗ್ಯುದ್ಧ; ಇಬ್ಬರಿಗೂ ಚುಂಚಶ್ರೀ ಕಿವಿಮಾತು!
ಸದಾಶಿವನಗರದ ರಮಣಮಹರ್ಷಿ ಉದ್ಯಾನವನದಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಮಾಜಿ ಸಚಿವ ಅಶ್ವತ್ಥ ನಾರಾಯಣ ಮಾತಿನ ಕಾಳಗ ನಡೆಯಿತು.

ಸಿದ್ದರಾಮಯ್ಯಗೆ ಜೀವಬೆದರಿಕೆ ಆರೋಪ: ಅಶ್ವತ್ಥ್ ನಾರಾಯಣಗೆ ಹೈಕೋರ್ಟ್ ಬಿಗ್ ರಿಲೀಫ್!
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಜೀವಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಿಜೆಪಿ ಶಾಸಕ ಅಶ್ವತ್ಥ್ ನಾರಾಯಣಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

ಸಂವಿಧಾನ ದಿನ: ಅಂಬೇಡ್ಕರ್ ಗೆ ಡಿಸಿಎಂ ಗೌರವ ನಮನ
ದೇಶಾದ್ಯಂತ ಇಂದು ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ . ಸಂವಿಧಾನ ದಿನದ ನಿಮಿತ್ತ ಉಪ ಮುಖ್ಯಮಂತ್ರಿ ಡಾ.ಸಿಎನ್ ಅಶ್ವತ್ಥನಾರಾಯಣ ಸಂವಿಧಾನ ಶಿಲ್ಪಿ ಡಾ.ಬಿ.ಆ.ರ್. ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದರು.

ನಗರಕ್ಕೆ ಮತ್ತೆ ಬೈಕ್ ಟ್ಯಾಕ್ಸಿ ತನ್ನಿ: ಸರ್ಕಾರಕ್ಕೆ ತಜ್ಞರ ಸಲಹೆ
ಟ್ರಾಫಿಕ್ ಸಮಸ್ಯೆಯಿಂದ ಬಳಲುತ್ತಿರುವ ಸಿಲಿಕಾನ್ ಸಿಟಿ ಬೆಂಗಳೂರನಲ್ಲಿ ಮತ್ತೆ ಬೈಕ್ ಟ್ಯಾಕ್ಸಿ ಸೇವೆಯನ್ನು ಜಾರಿಗೆ ತನ್ನಿ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಕೊರೋನಾ ಪರೀಕ್ಷಾ ದರ ರೂ.500ಕ್ಕೆ ಇಳಿಸಿದ ರಾಜ್ಯ ಸರ್ಕಾರ
ಕೊರೋನಾ ಪರೀಕ್ಷಾ ದರವನ್ನು ಮತ್ತಷ್ಟು ಕಡಿತಗೊಳಿಸಿ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.

ನಿಖಿಲ್ ವಿವಾಹ: ಸಂಬಂಧಪಟ್ಟ ವ್ಯಕ್ತಿಗಳ ವಿರುದ್ದ ಶೀಘ್ರದಲ್ಲೇ ಕ್ರಮ- ಡಿಸಿಎಂ ಅಶ್ವತ್ಥ ನಾರಾಯಣ
ಲಾಕ್'ಡೌನ್ ನಡುವಲ್ಲೂ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವುದು ವ್ಯಾಪಕ ಟೀಕೆಗೆ ಕಾರಣವಾಗಿದೆ.

