ಕ್ರೀಡೆಹಾಕಿ ಏಷ್ಯನ್ ಚಾಂಪಿಯನ್ಸ್: ಮಲೇಷಿಯಾವನ್ನು 4-3 ಗೋಲುಗಳಿಂದ ಸೋಲಿಸಿ 4ನೇ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಂಡ ಭಾರತ
ಇಲ್ಲಿನ ಮೇಯರ್ ರಾಧಾಕೃಷ್ಣನ್ ಹಾಕಿ ಸ್ಟೇಡಿಯಂನಲ್ಲಿ ಶನಿವಾರ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಮಲೇಷ್ಯಾ ವಿರುದ್ಧ 4-3 ಗೋಲುಗಳ ಮೂಲಕ ಗೆಲುವು ಸಾಧಿಸಿದ ಭಾರತ ನಾಲ್ಕನೇ ಬಾರಿಗೆ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು.