Assam

ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ರಾಹುಲ್ ಗಾಂಧಿ ಭದ್ರತೆ ಬಗ್ಗೆ ಕಳವಳ: ಅಮಿತ್ ಶಾಗೆ ಖರ್ಗೆ ಪತ್ರ
ಅಸ್ಸಾಂನಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ವೇಳೆ ಪೊಲೀಸರು ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹಾಗೂ ಇತರ ಕಾಂಗ್ರೆಸ್ ನಾಯಕರು, ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದು ರಾಹುಲ್ ಗಾಂಧಿ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮ ಕೇಸು ಕೂಡ ದಾಖಲಿಸಿದ್ದಾರೆ.

'ಭಾರತ್ ಜೋಡೋ ನ್ಯಾಯ ಯಾತ್ರೆ': ಹೆದರುವುದಿಲ್ಲ, ಮತ್ತಷ್ಟು ಎಫ್ಐಆರ್ ದಾಖಲಿಸಿ; ಅಸ್ಸಾಂ ಪೊಲೀಸರಿಗೆ ರಾಹುಲ್ ಗಾಂಧಿ ಸವಾಲು
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆ ಅಸ್ಸಾಂನಲ್ಲಿದ್ದು, ಈ ವೇಳೆ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ್ದಾರೆಂಬ ಆರೋಪ ಹಿನ್ನೆಲೆಯಲ್ಲಿ ಅಸ್ಸಾಂ ಪೊಲೀಸರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇತರೆ ನಾಯಕರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಈ ಬೆಳವಣಿಗೆಯನ್ನು ರಾಹುಲ್ ಗಾಂಧಿ ಖಂಡಿಸಿದ್ದಾರೆ.

ಬ್ಯಾರಿಕೇಡ್ಗಳನ್ನು ಮುರಿಯಲು ಪ್ರಚೋದನೆ; ರಾಹುಲ್ ವಿರುದ್ಧ ಪ್ರಕರಣ ದಾಖಲಿಸಲು ಡಿಜಿಪಿಗೆ ಸೂಚನೆ: ಅಸ್ಸಾಂ ಸಿಎಂ
ಬ್ಯಾರಿಕೇಡ್ ಗಳನ್ನು ಮುರಿಯುವುದಕ್ಕೆ ಜನಸ್ತೋಮಕ್ಕೆ ಪ್ರಚೋದನೆ ನೀಡಿದ್ದಕ್ಕಾಗಿ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸುವುದಕ್ಕೆ ಡಿಜಿಪಿ ಜಿಪಿ ಸಿಂಗ್ ಅವರಿಗೆ ಸೂಚನೆ ನೀಡಲಾಗಿದೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮ ಹೇಳಿದ್ದಾರೆ.

'ನಾವು ಬ್ಯಾರಿಕೇಡ್ ಮುರಿದಿದ್ದೇವೆ, ಆದರೆ ಕಾನೂನು ಮುರಿಯುವುದಿಲ್ಲ; ಅಸ್ಸಾಂನಲ್ಲಿ ಸರ್ಕಾರ ರಚಿಸುತ್ತೇವೆ': ರಾಹುಲ್ ಗಾಂಧಿ
ಸಂಸದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಮಂಗಳವಾರ ಗುವಾಹಟಿ ನಗರಕ್ಕೆ ಪ್ರವೇಶಿಸದಂತೆ ತಡೆಹಿಡಿಯಲಾಗಿದ್ದು, ಇದನ್ನು ಖಂಡಿಸಿ ಬ್ಯಾರಿಕೇಡ್ಗಳನ್ನು ಮುರಿದು ಘೋಷಣೆಗಳನ್ನು ಕೂಗುತ್ತಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಅಸ್ಸಾಂ: ದೇವಾಲಯ ಪ್ರವೇಶಿಸದಂತೆ ತಡೆ! ಯಾರು, ಯಾವಾಗ ಭೇಟಿ ನೀಡಬೇಕೆಂದು ಪ್ರಧಾನಿ ನಿರ್ಧರಿಸುತ್ತಾರೆಯೇ- ರಾಹುಲ್
ಅಸ್ಸಾಂನ ಹೈಬೋರಗಾಂವ್ನಲ್ಲಿ ಸೋಮವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಶಂಕರ ದೇವ ಸತ್ರ ದೇವಸ್ಥಾನಕ್ಕೆ ಭೇಟಿ ನೀಡಲು ಅಧಿಕಾರಿಗಳು ಅನುಮತಿ ನೀಡದ ನಂತರ ಹೈ ಡ್ರಾಮಾ ನಡೆಯಿತು. ಗಾಂಧಿ ಮತ್ತಿತರರನ್ನು ಮುಂದಿನ ಯಾವುದೇ ಪ್ರಕ್ರಿಯೆ ನಡೆಯದಂತೆ ಅಲ್ಲಿಯೇ ತಡೆಯಲಾಯಿತು.

ಭಾರತ್ ಜೋಡೊ ಯಾತ್ರೆ ಮೇಲೆ ದಾಳಿ: ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷಗೆ ಗಾಯ
ಭಾನುವಾರ ನಡೆದ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ದುಷ್ಕರ್ಮಿಗಳು ನಡೆಸಿದ ದಾಳಿಯಲ್ಲಿ ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷರ ಮೇಲೆ ಹಲ್ಲೆಯಾಗಿದೆ ಎಂದು ತಿಳಿದುಬಂದಿದೆ.

ಶ್ರೀರಾಮ್ ಘೋಷಣೆ ವೇಳೆ ತಾಳ್ಮೆ ಕಳೆದುಕೊಂಡ ರಾಹುಲ್ ವಿಡಿಯೋ: ಬಿಜೆಪಿ ದಾಳಿಗೆ ಕಾಂಗ್ರೆಸ್ ಪ್ರತಿದಾಳಿ
ಅಸ್ಸಾಂನಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ವೇಳೆಯಲ್ಲಿ ಜೈ ಶ್ರೀರಾಮ್ ಹಾಗೂ ಪ್ರಧಾನಿ ಮೋದಿ ಪರ ಜಯ ಘೋಷಣೆಗಳಿಂದ ತಾಳ್ಮೆ ಕಳೆದುಕೊಂಡ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕುರಿತ ವಿಡಿಯೋ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ.

ಅಸ್ಸಾಂ: ಸಿಎಂ ಹಿಮಂತಾ ಬಿಸ್ವಾ ಶರ್ಮಾ ಮೋದಿಯ ಚೇಲಾ- ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ
ಅಸ್ಸಾಂ ಮುಖ್ಯಮಂತ್ರಿ ಹಿಮಂತಾ ಬಿಸ್ವಾ ಶರ್ಮಾ ಪ್ರಧಾನಿ ನರೇಂದ್ರ ಮೋದಿ ಅವರ ಚೇಲಾ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ವಾಗ್ದಾಳಿ ನಡೆಸಿದ್ದಾರೆ.

ಭಾರತ್ ಜೋಡೊ ನ್ಯಾಯ ಯಾತ್ರೆ: ಜೈರಾಮ್ ರಮೇಶ್, ಮಾಧ್ಯಮ ಸಿಬ್ಬಂದಿ ಮೇಲೆ ದಾಳಿ: ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ನ್ಯಾಯಯಾತ್ರೆಯ ವೇಳೆ ಬಿಜೆಪಿ ಕಾರ್ಯಕರ್ತರು ದಾಳಿ ಮಾಡಿದ್ದಾರೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.

