ರಾಜ್ಯಕಂಡಕ್ಟರ್ ಮೇಲೆ ಹಲ್ಲೆ: ಬೆಳಗಾವಿಯಲ್ಲಿ ಕರವೇ ಪ್ರತಿಭಟನೆ; ಎಂಇಎಸ್ ಪುಂಡರ ವಿರುದ್ಧ ಆಕ್ರೋಶ, ಗಡಿಪಾರು ಮಾಡಲು ಒತ್ತಾಯ
ರಾಣಿ ಚನ್ನಮ್ಮ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಕನ್ನಡ ಪರ ಕಾರ್ಯಕರ್ತರು ಕನ್ನಡ ಬಾವುಟಗಳನ್ನು ಹಿಡಿದು ಎಂಇಎಸ್, ಶಿವಸೇನೆ ವಿರುದ್ಧ ಘೋಷಣೆಗಳನ್ನು ಮೊಳಗಿಸಿದರು. ಆರಂಭದಲ್ಲಿ ಪ್ರತಿಭಟನೆಗೆ ಮುಂದಾದ ಪ್ರವೀಣ ಶೆಟ್ಟಿ ಹಾಗೂ ಅವರ ಬಣದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.