assault

ಧಾರ್ಮಿಕ ಮೆರವಣಿಗೆ ವೇಳೆ ಕಾರು ಚಲಾಯಿಸಿದಕ್ಕೆ ಕೆಂಡಾಮಂಡಲ: ಆನಂದ್ ಸ್ವೀಟ್ಸ್ ಸಂಸ್ಥಾಪಕ, ಚಾಲಕನ ಮೇಲೆ ಹಲ್ಲೆ!
ಧಾರ್ಮಿಕ ಮೆರವಣಿಗೆ ವೇಳೆ ಕಾರು ಚಲಾಯಿಸಿದ ಹಿನ್ನೆಲೆಯಲ್ಲಿ ಆನಂದ್ ಸ್ವೀಟ್ಸ್ ಸಂಸ್ಥಾಪಕ ಆನಂದ್ ದಯಾಳ್ ದಾದು (72) ಹಾಗೂ ಅವರ ಕಾರು ಚಾಲಕನ ಮೇಲೆ ಹಲ್ಲೆ ನಡೆದಿರುವ ಘಟನೆ ಶಾಂತಿನಗರದ ಲಕ್ಷ್ಮಿ ರಸ್ತೆಯಲ್ಲಿ ಬುಧವಾರ ನಡೆದಿದೆ.

15 ರೂಪಾಯಿ ಮೌಲ್ಯದ ಸಿಗರೇಟ್ ವಿಚಾರವಾಗಿ ಅಂಗಡಿಯ ವೃದ್ಧ ಮಾಲೀಕನ ಮೇಲೆ ಬಿಜೆಪಿ ಕೌನ್ಸಿಲರ್ ಹಲ್ಲೆ!
15 ರೂಪಾಯಿ ಮೌಲ್ಯದ ಸಿಗರೇಟಿನ ವಿಚಾರವಾಗಿ ಸ್ಥಳೀಯ ಅಂಗಡಿಯೊಂದರ ಮಾಲೀಕರ ಮೇಲೆ ಬಿಜೆಪಿ ಕೌನ್ಸಿಲರ್ ಮತ್ತು ಅವರ ಸಹಚರರು ಇಲ್ಲಿ ಹಲ್ಲೆ ನಡೆಸಿದ್ದಾರೆ. ಭವಾನಿ ಶಂಕರ್ ಮತ್ತು ಆತನ ಸಹಚರರು ಅಂಗಡಿಯ ವೃದ್ಧ ಮಾಲೀಕನನ್ನು ನಿಂದಿಸಿ, ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಬೆಂಗಳೂರು: ಬಸ್, ರೈಲು ಪ್ರಯಾಣಿಕರನ್ನು ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದ ಮೂವರ ಬಂಧನ
ಬಸ್ ಮತ್ತು ರೈಲು ಪ್ರಯಾಣಿಕರನ್ನು, ಮುಖ್ಯವಾಗಿ ದಿನಗೂಲಿ ಕಾರ್ಮಿಕರು ಮತ್ತು ಕೂಲಿ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದ ಮೂವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರಿ ಮೇಲೆ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ
ಬುಧವಾರ ಇಲ್ಲಿ ಟ್ರೇಡ್ ಲೈಸೆನ್ಸ್ ನೀಡುವ ವಿಚಾರವಾಗಿ ಕಲಬುರಗಿ ಮಹಾನಗರ ಪಾಲಿಕೆ ಆರೋಗ್ಯ ನಿರೀಕ್ಷಕ ಧನಶೆಟ್ಟಿ ಹೆಡಗಾಪುರಿ ಮೇಲೆ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.

ಮಂಗಳೂರು: ಇಬ್ಬರು ಕಾಲೇಜು ವಿದ್ಯಾರ್ಥಿಗಳ ಅಪಹರಣ, ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಬಂಧನ
ಮಂಗಳೂರು ನಗರದ ಖಾಸಗಿ ಕಾಲೇಜೊಂದರ ಇಬ್ಬರು ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆ ನಡೆಸಿದ ಆರೋಪದ ಮೇಲೆ ಮಂಗಳೂರು ನಗರ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.

ಹುಡುಗಿ ವಿಚಾರಕ್ಕೆ ಜಗಳ: ವಿದ್ಯಾರ್ಥಿಗಳ ನಡುವಿನ ಮಾರಾಮಾರಿಗೆ ಕಗ್ಗದಾಸಪುರದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತ
ಹುಡುಗಿ ವಿಚಾರಕ್ಕೆ ನಾಲ್ವರು ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದ್ದು, ಇದರ ಪರಿಣಾಮ ಕಗ್ಗದಾಸಪುರದ ಜಗದೀಶ್‌ನಗರದ ಬಿಇಎಂಎಲ್ ಟೌನ್‌ಶಿಪ್‌ನಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಸೋಮವಾರ ನಡೆಯಿತು.

ದಕ್ಷಿಣ ಕನ್ನಡದಲ್ಲಿ ಮತ್ತೆ ನೈತಿಕ ಪೊಲೀಸ್‌ಗಿರಿ: ಅನ್ಯ ಧರ್ಮದ ಮಹಿಳೆಯನ್ನು ಡ್ರಾಪ್ ಮಾಡಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ
ಸುಳ್ಯದಲ್ಲಿ ಕೇರಳದ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ದಕ್ಷಿಣ ಕನ್ನಡ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಸಂತ್ರಸ್ತ ಮೊಹಮ್ಮದ್ ಜಲೀಲ್ (39) ಎಂಬಾತ ತನ್ನ ಕಾರಿನಲ್ಲಿ ಮಹಿಳೆಯನ್ನು ಸುಳ್ಯಕ್ಕೆ ಇಳಿಸಿ ಹಿಂತಿರುಗುತ್ತಿದ್ದಾಗ ಶನಿವಾರ ಈ ಘಟನೆ ಸಂಭವಿಸಿದೆ.

ಕುಡಿದ ಮತ್ತಿನಲ್ಲಿ ವ್ಯಕ್ತಿಯ ಮೇಲೆ ಹಲ್ಲೆ: ಎಸ್‌ಯುವಿ ಕಸಿದು 45 ನಿಮಿಷ ಅಡ್ಡಾದಿಡ್ಡಿ ಚಲಾಯಿಸಿದ ದುಷ್ಕರ್ಮಿಗಳು!
ಪಾನಮತ್ತರಾಗಿದ್ದ ಇಬ್ಬರು ದುಷ್ಕರ್ಮಿಗಳು ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದು, ಎಸ್‌ಯುವಿ ಕಸಿದುಕೊಂಡು 45 ನಿಮಿಷ ಅಡ್ಡಾದಿಡ್ಡಿ ಓಡಿಸಿ, ಹಣ ಕಸಿದುಕೊಂಡು ಪರಾರಿಯಾಗಿರುವ ಘಟನೆಯೊಂದು ಇಂದಿರಾನಗರ ಮುಖ್ಯರಸ್ತೆಯಲ್ಲಿ ಭಾನುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ನೈತಿಕ ಪೊಲೀಸ್‌ಗಿರಿ: ಧರ್ಮಸ್ಥಳದಲ್ಲಿ ಮುಸ್ಲಿಂ ಆಟೋ ಚಾಲಕನ ಮೇಲೆ ಹಲ್ಲೆ; ಮೂವರ ಬಂಧನ
ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ವರದಿಯಾದ ನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಿಂದೂ ಯುವತಿಯನ್ನು ತಮ್ಮ ವಾಹನದಲ್ಲಿ ಕರೆದೊಯ್ಯುತ್ತಿದ್ದ ಆರೋಪದ ಮೇಲೆ ಬಲಪಂಥೀಯ ಕಾರ್ಯಕರ್ತರು ಮುಸ್ಲಿಂ ಯುವಕನ ಮೇಲೆ ಹಲ್ಲೆ ನಡೆಸಿದ್ದು, ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ.

