assault

ಮಂಗಳೂರು: ಸೋಮೇಶ್ವರ ಬೀಚ್ ನಲ್ಲಿ ನೈತಿಕ ಪೊಲೀಸ್ ಗಿರಿ; ಅಪ್ರಾಪ್ತ ಸೇರಿದಂತೆ ಐದು ಮಂದಿ ಬಂಧನ
ಸೋಮೇಶ್ವರ ಬೀಚ್‌ನಲ್ಲಿ ನಡೆದ 'ನೈತಿಕ ಪೊಲೀಸ್‌ಗಿರಿ'ಗೆ ಸಂಬಂಧಿಸಿದಂತೆ ಅಪ್ರಾಪ್ತ ವಯಸ್ಕ ಸೇರಿದಂತೆ ಐವರು ಹಿಂದುತ್ವವಾದಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಆನೇಕಲ್‌ನಲ್ಲಿ ಪೊಲೀಸರಿಂದ ಹಲ್ಲೆ ಆರೋಪ, ಕ್ರಮಕ್ಕೆ ಇಬ್ಬರು ವಿದ್ಯಾರ್ಥಿಗಳ ಆಗ್ರಹ
ಶನಿವಾರ ಸಂಜೆ 7.30ರ ಸುಮಾರಿಗೆ ಆನೇಕಲ್‌ನ ಚಂದಾಪುರ ವೃತ್ತದ ಬಳಿ ಪೊಲೀಸರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಇಬ್ಬರು ಕಾಲೇಜು ವಿದ್ಯಾರ್ಥಿಗಳು ಆರೋಪಿಸಿದ್ದು, ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಎಸ್‌ಡಿಪಿಐ ಕಾರ್ಯಕರ್ತನ ಬಂಧನ
ಭಾನುವಾರ ರಾತ್ರಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.

ವರುಣಾ: ಹತಾಶೆ ಮತ್ತು ಸೋಲಿನ ಭಯದಲ್ಲಿ ಸಿದ್ದರಾಮಯ್ಯ ಬೆಂಬಲಿಗರಿಂದ ಕುಕೃತ್ಯ; ವಿ ಸೋಮಣ್ಣ- ಸಂಸದ ಪ್ರತಾಪ್ ಸಿಂಹ ಕಿಡಿ
ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದ ಸಿದ್ದರಾಮಯ್ಯನಹುಂಡಿಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಾಟೆ ಪ್ರಕರಣ ಬಗ್ಗೆ ವರುಣಾ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಪ್ರತಿಕ್ರಿಯಿಸಿ ಬೇಸರ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರ ಅಣ್ಣನ ಮನೆ ಮುಂದೆಯೇ ಈ ಗಲಾಟೆ ನಡೆದಿದೆ ಎಂದು ಆರೋಪಿಸಿದ್ದಾರೆ.

ಬೆಂಗಳೂರು: ಇಎಂಐ ತಡವಾಗಿ ಪಾವತಿ ಮಾಡಿದ ವ್ಯಕ್ತಿ ಮೇಲೆ 'ರಿಕವರಿ ಏಜೆಂಟ್'ಗಳಿಂದ ಹಲ್ಲೆ
ಆರ್ಥಿಕ ಸಮಸ್ಯೆಯಿಂದಾಗಿ ಮಾರ್ಚ್ ತಿಂಗಳ ಇಎಂಐ ಪಾವತಿ ವಿಳಂಬ ಮಾಡಿದ ವ್ಯಕ್ತಿಯೊಬ್ಬರ ಮೇಲೆ ರಿಕವರಿ ಏಜೆಂಟ್'ಗಳು ಹಲ್ಲೆ ನಡೆಸಿರುವ ಘಟನೆಯೊಂದು ಚೆಂಬನಹಳ್ಳಿ ಗೇಟ್ ಬಳಿ ನಡೆದಿದೆ.

ಗಂಡು ಮಗುವಿಗೆ ಜನ್ಮ ನೀಡಲಿಲ್ಲ ಎಂಬ ಕಾರಣಕ್ಕೆ ಪತ್ನಿ ಮೇಲೆ ಹಲ್ಲೆ, ಮೈಸೂರಿನ ವ್ಯಕ್ತಿ ಬಂಧನ
ಗಂಡು ಮಗುವಿಗೆ ಜನ್ಮ ನೀಡಲಿಲ್ಲ ಎಂಬ ಕಾರಣಕ್ಕೆ ಪತ್ನಿಯ ಮೇಲೆ ಹಲ್ಲೆ ನಡೆಸಿದ ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದರು.

ದೆಹಲಿ: ಶುಲ್ಕದ ವಿಚಾರದಲ್ಲಿ ಪಾರ್ಕಿಂಗ್ ಸಿಬ್ಬಂದಿಗೆ ಬ್ಯಾಟ್‌ನಿಂದ ಥಳಿಸಿದ ಶಾಲಾ ಶಿಕ್ಷಕ, ಬಂಧನ
ವಸಂತ್ ವಿಹಾರ್‌ನ ಬಸಂತ್ ಲೋಕದಲ್ಲಿರುವ ಪಿವಿಆರ್ ಪ್ರಿಯಾ ಎಂಬಲ್ಲಿ ಪಾರ್ಕಿಂಗ್ ಶುಲ್ಕವಾಗಿ 60 ರೂಪಾಯಿ ನೀಡುವಂತೆ ಕೇಳಿದ ಪಾರ್ಕಿಂಗ್ ಅಟೆಂಡರ್‌ಗೆ ಬ್ಯಾಟ್‌ನಿಂದ ಹಲ್ಲೆ ನಡೆಸಿದ ಆರೋಪದ ಮೇಲೆ ಖಾಸಗಿ ಶಾಲೆಯೊಂದರ 28 ವರ್ಷದ ಶಿಕ್ಷಕನನ್ನು ಬಂಧಿಸಲಾಗಿದೆ

ಮಲ್ಲೇಶ್ವರಂ ಬಾಂಬ್ ಸ್ಫೋಟ ಪ್ರಕರಣ; ವಿಚಾರಣಾಧೀನ ಕೈದಿ ಮೇಲೆ ಸಹ ಕೈದಿಗಳಿಂದ ಹಲ್ಲೆ
ಮಲ್ಲೇಶ್ವರಂ ಸ್ಫೋಟದ ಆರೋಪಿ ಮತ್ತು ವಿಚಾರಣಾಧೀನ ಕೈದಿ (ಯುಟಿಪಿ) ತಮಿಳುನಾಡು ಮೂಲದ ಸೈಯದ್ ಅಲಿ (35) ಎಂಬಾತನ ಮೇಲೆ ಐವರು ಸಹ ಕೈದಿಗಳು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ: ಯುವತಿಗೆ ಮಿಠಾಯಿ ಕೊಟ್ಟಿದ್ದಕ್ಕೆ ಮುಸ್ಲಿಂ ಯುವಕನ ಮೇಲೆ ಹಲ್ಲೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು 'ನೈತಿಕ ಪೊಲೀಸ್ ಗಿರಿ' ಪ್ರಕರಣ ವರದಿಯಾಗಿದ್ದು, ಬಾಲಕಿಯೊಬ್ಬಳಿಗೆ ಮಿಠಾಯಿ ಕೊಟ್ಟಿದ್ದಕ್ಕೆ ಮುಸ್ಲಿಂ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ.

