ದೇಶಕುಡಿದ ಅಮಲಿನಲ್ಲಿ ಪತ್ನಿ ಮೇಲೆ ಹಲ್ಲೆ ಆರೋಪ; ಭಾರತದ ಮಾಜಿ ಕ್ರಿಕೆಟಿಗನ ವಿರುದ್ಧ ಎಫ್ಐಆರ್ ದಾಖಲು
ಭಾರತದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರು ಉಪನಗರ ಬಾಂದ್ರಾದಲ್ಲಿರುವ ತಮ್ಮ ಮನೆಯಲ್ಲಿ ಕುಡಿದ ಮತ್ತಿನಲ್ಲಿ ಪತ್ನಿಯ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮುಂಬೈ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.