Assembly election 2023

ಚುನಾವಣೆಯಲ್ಲಿ ಸೋಲು: ಬೆಂಗಳೂರಿನಲ್ಲಿ ಇಂದು ಜೆಡಿಎಸ್ ನಿಂದ ವಿಮರ್ಶನಾತ್ಮಕ ಮತ್ತು ರಾಷ್ಟ್ರೀಯ ಕಾರ್ಯಕಾರಿಣಿ ಸಭೆ
ಇತ್ತೀಚಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ತೀರಾ ಕಳಪೆ ಫಲಿತಾಂಶದ ಬಗ್ಗೆ ಆತ್ಮಾವಲೋಕನ ಹಾಗೂ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಅಥಣಿ- ಜಾರಿಬಿದ್ದ ಜಾರಕಿಹೊಳಿ: ಲಕ್ಷ್ಮಣ ಸವದಿ ಭರ್ಜರಿ ಜಯಭೇರಿ; ಮಹೇಶ್ ಕುಮಟಳ್ಳಿಗೆ ಹೀನಾಯ ಸೋಲು
ಅಥಣಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ ಬಿಜೆಪಿಯ ಮಹೇಶ್ ಕುಮಠಳ್ಳಿ ವಿರುದ್ಧ ಗೆಲುವು ಸಾಧಿಸಿದ್ದಾರೆ. ಟಿಕೆಟ್ ನಿರಾಕರಿಸುವ ಬಿಜೆಪಿ ನಿರ್ಧಾರದಿಂದ ಸವದಿ ಅಸಮಾಧಾನಗೊಂಡು ಕಾಂಗ್ರೆಸ್ ಸೇರಿದ್ದರು.

'ನನ್ನ ಜೊತೆ ಬಾಬಾ ಸಾಹೇಬ್ ಸಂವಿಧಾನವಿದೆ, ರಕ್ಷಣೆಗೆ ಜನರಿದ್ದಾರೆ': ತವರು ಜಿಲ್ಲೆಯಲ್ಲಿ ಖರ್ಗೆ ಭಾವುಕ ಭಾಷಣ!
ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಬಹಿರಂಗ ಪ್ರಚಾರಕ್ಕೆ ಇಂದು ಸೋಮವಾರ ತೆರೆದಿದ್ದಿದೆ. ಈ ಹೊತ್ತಿನಲ್ಲಿ ಎಐಸಿಸಿ ಅಧ್ಯಕ್ಷರಾಗಿರುವ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ತಮ್ಮ ತವರು ಜಿಲ್ಲೆ ಕಲಬುರಗಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಷಣ ಮಾಡಿದ್ದಾರೆ. ಈ ವೇಳೆ ಮಾತನಾಡುತ್ತಾ ಭಾವುಕರಾಗಿದ್ದಾರೆ.

ಪ್ರಧಾನಿ ಮೋದಿ ಬಂದ್ಮೇಲೆ ಮಹದಾಯಿ ನೀರು ಕರ್ನಾಟಕಕ್ಕೆ ಬಂತು, ಬೆಳಗಾವಿಯ 18 ಕ್ಷೇತ್ರಗಳನ್ನು ಬಿಜೆಪಿ ಜೋಳಿಗೆಗೆ ಹಾಕಿ: ಅಮಿತ್ ಶಾ
ಕಾಂಗ್ರೆಸ್ ಪದೇಪದೇ ಸಾವರ್ಕರ್‌ಗೆ ಅಪಮಾನ ಮಾಡುತ್ತದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಾವರ್ಕರ್ ಅಪಮಾನ ಮಾಡುತ್ತೀರಿ. ನೀವು 10 ಜನ್ಮ ಹುಟ್ಟಿಬಂದರೂ ಸಾವರ್ಕರ್‌ರಂತಹ ಬಲಿದಾನ ನೋಡುವುದಕ್ಕೆ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಮೋದಿ ಪ್ರಚಾರ ಅಸೆಂಬ್ಲಿ ಚುನಾವಣೆ ಮೇಲೆ ಹೆಚ್ಚು ಪರಿಣಾಮ ಬೀರದು: ಹೆಚ್ ಡಿ ದೇವೇಗೌಡ (ಸಂದರ್ಶನ)
ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಚುನಾವಣಾ ಪ್ರಚಾರ ಆರಂಭವಾಗಲಿದೆ. ಮೋದಿಯವರು ಅಖಾಡಕ್ಕಿಳಿದಾಗ ಕರ್ನಾಟಕ ಚುನಾವಣೆಯ ಚಿತ್ರಣವೇ ಬದಲಾಗಲಿದೆ ಎಂದು ಅನೇಕರು ಮಾತನಾಡಿಕೊಳ್ಳುತ್ತಿದ್ದಾರೆ.

ರಾಹುಲ್ ಗಾಂಧಿ ಪ್ರಚಾರಕ್ಕೆ ಬಂದರೆ ಕಾಂಗ್ರೆಸ್ ಪಕ್ಷಕ್ಕೆ ಬರುವ ಮತಗಳೂ 'ಕೈ'ತಪ್ಪಿಹೋಗುತ್ತವೆ: ಅರುಣ್ ಸಿಂಗ್ (ಸಂದರ್ಶನ)
ಬಿಜೆಪಿಯಲ್ಲಿ ಟಿಕೆಟ್ ವಂಚಿತ ನಾಯಕರ ಅಸಮಾಧಾನವನ್ನು ಸದ್ಯದಲ್ಲಿಯೇ ಬಗೆಹರಿಸುವ ವಿಶ್ವಾಸವನ್ನು ಬಿಜೆಪಿ ಪ್ರಧಾನ ಕಾರ್ಯದರ್ಶಿ ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ವ್ಯಕ್ತಪಡಿಸಿದ್ದಾರೆ. ನ್ಯೂ ಸಂಡೆ ಎಕ್ಸ್ ಪ್ರೆಸ್ ಗೆ ನೀಡಿರುವ ಸಂದರ್ಶನದಲ್ಲಿ ಮುಂಬರುವ ವಿಧಾನಸಭೆ ಚುನಾವಣೆ ಸೇರಿದಂತೆ ಹಲವು ವಿಷಯಗಳ ಕುರಿತು ಮಾತನಾಡಿದ್ದಾರೆ.

ಪ್ರಬಲ ನಾಯಕರ ಸೇರ್ಪಡೆ: ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿನ ಸೀಟು ಗೆದ್ದು ನೆಲೆ ಭದ್ರಪಡಿಸಿಕೊಳ್ಳುವ ಹುಮ್ಮಸ್ಸಿನಲ್ಲಿ ಜೆಡಿಎಸ್
ಕಾಂಗ್ರೆಸ್‌ನ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಹಾಗೂ ಬಿಜೆಪಿಯ ಮಾಜಿ ಎಂಎಲ್‌ಸಿ ಆಯನೂರು ಮಂಜುನಾಥ್ ಅವರು ಜೆಡಿಎಸ್ ಸೇರ್ಪಡೆಯಾಗಿರುವುದರಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಇಷ್ಟು ವರ್ಷ ನೆಲೆ ಕಂಡುಕೊಳ್ಳಲು ಹರಸಾಹಸ ಪಡುತ್ತಿದ್ದ ಪ್ರಾದೇಶಿಕ ಪಕ್ಷಕ್ಕೆ ಈ ಬಾರಿ ಚುನಾವಣೆಯಲ್ಲಿ ಅವಕಾಶ ಸಿಕ್ಕಂತಾಗಿದೆ.

ಹನೂರು ಕ್ಷೇತ್ರ: ಸುಡು ಬಿಸಿಲು, ಕಾಡು ಪ್ರಾಣಿಗಳ ಸಂಚಾರ; ಈ ಗ್ರಾಮಗಳಿಗೆ ಕಾಲಿಡಲು ರಾಜಕೀಯ ನಾಯಕರಿಗೆ ಅಂಜಿಕೆ, ಅಭಿವೃದ್ಧಿಯೂ ಮರೀಚಿಕೆ!
ರಾಜ್ಯದ ಉದ್ದಗಲಕ್ಕೂ ಪಕ್ಷಗಳ ನಾಯಕರು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದರೆ ಚಾಮರಾಜನಗರ ಜಿಲ್ಲೆಯ ಹನೂರು ವಿಧಾನಸಭಾ ಕ್ಷೇತ್ರದ ಗ್ರಾಮಗಳಲ್ಲಿ ಮಾತ್ರ ಚುನಾವಣಾ ಪ್ರಚಾರ, ಚಟುವಟಿಕೆಗಳ ಸದ್ದು ಗದ್ದಲವಿಲ್ಲ.

ಬಿಜೆಪಿಯಲ್ಲಿನ ಕಚ್ಚಾಟದಿಂದ ಕಾಂಗ್ರೆಸ್ಗೆ 150 ಸ್ಥಾನ ಬಂದರೂ ಅಚ್ಚರಿಯಿಲ್ಲ, ನಾನು ಮುಖ್ಯಮಂತ್ರಿ ಹುದ್ದೆಗೆ ಅರ್ಹ: ರಾಮಲಿಂಗಾ ರೆಡ್ಡಿ
ರಾಜ್ಯ ಬಿಜೆಪಿಯಲ್ಲಿ ಎದ್ದಿರುವ ಬಂಡಾಯ ಮತ್ತು ಅದರ ಈಗಿನ ಪರಿಸ್ಥಿತಿ ನೋಡಿದರೆ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಭವಿಷ್ಯವಿಲ್ಲ. ಈ ಚುನಾವಣೆಯಲ್ಲಿ ಬಿಜೆಪಿಗೆ 50-60 ಸ್ಥಾನ ಬಂದರೆ ಹೆಚ್ಚು ಎಂದು ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

