Assembly election 2023

ಟಿಕೆಟ್ ಘೋಷಣೆ ಬೆನ್ನಲ್ಲೇ ಬಂಡಾಯದ ಬಿಸಿ: ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಲಕ್ಷ್ಮಣ ಸವದಿ ಘೋಷಣೆ, ಸರದಿಯಲ್ಲಿ ಇನ್ನೂ ಹಲವರು!
ರಾಜ್ಯ ಬಿಜೆಪಿಯಿಂದ ಈ ಬಾರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತಿರುವ 189 ಅಭ್ಯರ್ಥಿಗಳ ಪಟ್ಟಿ ಘೋಷಣೆಯಾಗುತ್ತಿದ್ದಂತೆ ಟಿಕೆಟ್ ಕೈತಪ್ಪಿಹೋದ ಹಾಲಿ ಶಾಸಕರು ಮತ್ತು ಸಚಿವರಿಂದ ಅಸಮಾಧಾನ, ಬಂಡಾಯ ವ್ಯಕ್ತವಾಗುತ್ತಿದೆ.

ಬಿಜೆಪಿ ಕಾಂಗ್ರೆಸ್ ನಂತೆ ಸರ್ವಾಧಿಕಾರ ಪಕ್ಷವಲ್ಲ, ಪ್ರಜಾಸತ್ತಾತ್ಮಕ ಪಕ್ಷ, ಚರ್ಚೆ ಮಾಡಿ ಅಭ್ಯರ್ಥಿಗಳ ಆಯ್ಕೆ ಮಾಡುತ್ತೇವೆ: ಸಿಎಂ ಬೊಮ್ಮಾಯಿ
ಭಾರತೀಯ ಜನತಾ ಪಕ್ಷವು ಪ್ರಜಾಸತ್ತಾತ್ಮಕ ಪಕ್ಷವಾಗಿದ್ದು ಕಾಂಗ್ರೆಸ್ ಸರ್ವಾಧಿಕಾರ ಪಕ್ಷವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.

ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ ಬಿಎಸ್ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ; ಎಲ್ಲರ ಚಿತ್ತ ಮಾಜಿ ಸಿಎಂ ಮಾತಿನತ್ತ!
ಕರ್ನಾಟಕದ ಪ್ರಬಲ ಲಿಂಗಾಯತ ಸಮುದಾಯದ ಮುಖಂಡ, ಬಿಜೆಪಿಯನ್ನು ದಕ್ಷಿಣ ಭಾರತದ ರಾಜ್ಯವೊಂದರಲ್ಲಿ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಕಾರಣೀಭೂತರಾದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದು ಗುರುವಾರ ಬೆಳಗ್ಗೆ 11 ಗಂಟೆಗೆ ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಯಲಿದೆ.

ಮೈಸೂರು ಜಿಲ್ಲೆಯ ವರುಣಾ ಸಿದ್ದರಾಮಯ್ಯನವರಿಗೆ ಸುರಕ್ಷಿತ ಕ್ಷೇತ್ರವೇ, ಹೇಗೆ?
ಏಪ್ರಿಲ್-ಮೇ ತಿಂಗಳಿನಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಹೈಕಮಾಂಡ್ ಶನಿವಾರ ಪ್ರಕಟಿಸಿದ್ದು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಸಿದ್ದರಾಮಯ್ಯ ಅವರನ್ನು ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದಿಂದ ಕಣಕ್ಕಿಳಿಸಿದೆ.

ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಟಿಕೆಟ್ ಗಿಟ್ಟಿಸಿಕೊಂಡ ಪ್ರಮುಖ ಅಭ್ಯರ್ಥಿಗಳಿವರು...
ಕರ್ನಾಟಕದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಆಕಾಂಕ್ಷಿಗಳಾಗಿರುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ವಿಧಾನಸಭೆ ಚುನಾವಣೆಯ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಸ್ಥಾನ ಪಡೆದ ಪ್ರಮುಖ ನಾಯಕರಾಗಿದ್ದಾರೆ.

ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಕಣದಲ್ಲಿರುವ ಪ್ರಮುಖರು ಯಾರ್ಯಾರು?
ಮೊನ್ನೆ ಯುಗಾದಿಯಂದು ಬಿಡುಗಡೆಯಾಗುತ್ತದೆ ಎಂದು ಹೇಳಲಾಗುತ್ತಿದ್ದ ಕರ್ನಾಟಕ ವಿಧಾನಸಭೆ ಚುನಾವಣೆ 2023ರಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಶನಿವಾರ ಬೆಳಗ್ಗೆ ಬಿಡುಗಡೆಯಾಗಿದೆ.

ಸಿದ್ದರಾಮಯ್ಯ, ನಾನು ಸ್ವಾರ್ಥಕ್ಕಾಗಿ ಕ್ಷೇತ್ರ ಬಿಡಲಿಲ್ಲ, ‘ಪಾಪ್ಯುಲರ್ ಅಭ್ಯರ್ಥಿ ಬೇರೆ ಬೇರೆ ಕಡೆ ನಿಲ್ಲಬೇಕಾಗುತ್ತೆ': ಶ್ರೀರಾಮುಲು
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಕ್ಷೇತ್ರ ಆಯ್ಕೆಯ ಗೊಂದಲ ಮುಂದುವರಿದಿರುವಂತೆ ಬಳ್ಳಾರಿಯಲ್ಲಿ ಮಾತನಾಡಿರುವ ಸಾರಿಗೆ ಸಚಿವ ಶ್ರೀರಾಮುಲು ಅವರ ಬಗ್ಗೆ ಮೃದು ಧೋರಣೆ ತಳೆದು ಮಾತನಾಡಿದ್ದಾರೆ.

ಸಿದ್ದರಾಮಯ್ಯ ಸ್ಪರ್ಧೆಗೆ 'ಕೋಲಾರ' ಗೊಂದಲ: ಕಾಂಗ್ರೆಸ್ ಗೆ ಪರಿಹಾರಕ್ಕಿಂತ ಸಮಸ್ಯೆಯೇ ಹೆಚ್ಚು!
ಕೋಲಾರದಲ್ಲಿ ಸಂಭವನೀಯ ಸೋಲು ತಪ್ಪಿಸಲು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಕಾಂಗ್ರೆಸ್ ಹೈಕಮಾಂಡ್ ಮಾಡಿರುವ ತಂತ್ರವು ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಅತ್ಯಂತ ಹಳೆಯ ಪಕ್ಷಕ್ಕೆ ಪರಿಹಾರ ಕಂಡುಕೊಳ್ಳುವುದಕ್ಕಿಂತ ಹೆಚ್ಚಿನ ತೊಂದರೆಯನ್ನುಂಟು ಮಾಡಿದೆ.

ಮಾಜಿ ಸಿಎಂ ನಿವಾಸ ಮುಂದೆ ಹೈಡ್ರಾಮಾ, ಆತ್ಮಹತ್ಯೆ ಎಚ್ಚರಿಕೆ: ಕೋಲಾರದಿಂದ ಸ್ಪರ್ಧಿಸುವುದಿಲ್ಲ ಎಂದು ನಾನು ಎಲ್ಲಿ ಹೇಳಿದ್ದೇನೆ ಎಂದ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕ್ಷೇತ್ರ ಆಯ್ಕೆ ಗೊಂದಲ ಮುಂದುವರಿದಿದೆ.

