Assembly election 2023

ವಿಧಾನಸಭೆ ಚುನಾವಣೆ: ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ಆಮ್ ಆದ್ಮಿ ಪಕ್ಷ ಅಭ್ಯರ್ಥಿಗಳ ಮೊದಲ ಪಟ್ಟಿ ಸೋಮವಾರ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ ಖ್ಯಾತ ಹಾಸ್ಯನಟ ಟೆನ್ನಿಸ್ ಕೃಷ್ಣ, ಕಾಂಗ್ರೆಸ್ ಮಾಜಿ ವಕ್ತಾರ ಬ್ರಿಜೇಶ್ ಕಾಳಪ್ಪ, ಮಾಜಿ ಕೆಎಎಸ್ ಅಧಿಕಾರಿ ಕೆ. ಮಥಾಯ್ ಸೇರಿದಂತೆ ಹಲವರಿಗೆ ಟಿಕೆಟ್ ನೀಡಲಾಗಿದೆ.

'ಮಾನವೀಯತೆ ಮೊದಲು, ರಾಜಕೀಯ ನಂತರ; ದರ್ಶನ್ ನನ್ನ ಮಗ ಇದ್ದಂಗೆ, ಅವನಿಗೆ ನನ್ನ ಬೆಂಬಲ': ಹೆಚ್ ಸಿ ಮಹದೇವಪ್ಪ
ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಪ್ರಮುಖ ರಾಜಕೀಯ ಬೆಳವಣಿಗೆಯಲ್ಲಿ ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಅವರು ನಂಜನಗೂಡು ಕ್ಷೇತ್ರದಿಂದ ಸ್ಪರ್ಧಿಸದಿರಲು ನಿರ್ಧರಿಸಿದ್ದು, ಕಾಂಗ್ರೆಸ್ ನಾಯಕ ದಿವಂಗತ ಆರ್.ಧ್ರುವನಾರಾಯಣ್ ಅವರ ಪುತ್ರ ದರ್ಶನ್ ಅವರಿಗೆ ಬೆಂಬಲ ಸೂಚಿಸಿದ್ದಾರೆ.

ರಾಜಕಾರಣದಲ್ಲಿ ಶತ್ರುಗಳಿದ್ದಾಗ ನಾವು ಎತ್ತರಕ್ಕೆ ಬೆಳೆಯಲು ಸಾಧ್ಯ, ಸಿ ಟಿ ರವಿ ಗೆ ಬಿಜೆಪಿಯಲ್ಲಿ ಯಡಿಯೂರಪ್ಪನವರ ಕೊಡುಗೆ ಗೊತ್ತಿದೆ: ಬಿ ವೈ ವಿಜಯೇಂದ್ರ
ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ರಾಜ್ಯ ಬಿಜೆಪಿ ನಾಯಕರು ಅಬ್ಬರದ ಪ್ರಚಾರವನ್ನ ನಡೆಸುತ್ತಿದ್ದಾರೆ. ಇತ್ತ ಮಿಷನ್ 150 ಟಾರ್ಗೆಟ್ ಒಂದು ಕಡೆಯಾದ್ರೆ ಯಾರಿಗೆ ಟಿಕೆಟ್ ಸಿಗುತ್ತದೆ, ಯಾರಿಗೆ ಸಿಗುವುದಿಲ್ಲ, ಯಾವ ಮುಖಂಡರ ಮಕ್ಕಳಿಗೆ ಸಿಗುತ್ತದೆ ಎಂಬಿತ್ಯಾದಿ ಚರ್ಚೆಗಳು ಜೋರಾಗಿ ನಡೆಯುತ್ತಿದೆ.

75 ವರ್ಷ ದಾಟಿದವರಿಗೆ ಟಿಕೆಟ್ ಇಲ್ಲ ಎಂದು ಬಿಜೆಪಿಯಲ್ಲಿ ಹೇಳಿಲ್ಲ; ಹೈಕಮಾಂಡ್ ಹೇಳಿದರೆ ಸ್ಪರ್ಧಿಸುತ್ತೇನೆ, ಇಲ್ಲದಿದ್ದರೆ ಇಲ್ಲ: ಕೆ ಎಸ್ ಈಶ್ವರಪ್ಪ
ತಮ್ಮ ವಯಸ್ಸಿನ ಕಾರಣದಿಂದ ಏಪ್ರಿಲ್/ಮೇ ತಿಂಗಳಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಸಿಗುವುದಿಲ್ಲ ಎಂಬ ಊಹಾಪೋಹಗಳ ನಡುವೆಯೇ ಬಿಜೆಪಿಯ ಹಿರಿಯ ನಾಯಕ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು 75 ವರ್ಷ ಮೇಲ್ಪಟ್ಟವರು ಸ್ಪರ್ಧಿಸಬೇಕು

ಕರ್ನಾಟಕ ವಿಧಾನಸಭೆ ಚುನಾವಣೆ: ಬಿಜೆಪಿಯ ಗೇಮ್ ಪ್ಲಾನ್ ನಲ್ಲಿ ಜಾತಿ ಸಮೀಕರಣವೇ ಪ್ರಧಾನ
ಇನ್ನೆರಡು ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಅದಕ್ಕೆ ಮುನ್ನ ಭಾರತೀಯ ಜನತಾ ಪಕ್ಷ (BJP) ಚುನಾವಣಾ ಪ್ರಚಾರ ಸಮಿತಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ಎಂಬ ಎರಡು ಘಟಕಗಳನ್ನು ರಚಿಸಿದೆ.

Interview-ಈ ಬಾರಿಯ ವಿಧಾನಸಭೆ ಚುನಾವಣೆ ಕಠಿಣವಾಗಿದ್ದು ಬಿಗುವಿನಿಂದ ಕೂಡಿದೆ, ಆದರೂ ಬಿಜೆಪಿ 140ರಿಂದ 150 ಸ್ಥಾನಗಳನ್ನು ಪಡೆಯಲಿದೆ: ಡಾ ಕೆ ಸುಧಾಕರ್
ಆಡಳಿತಾರೂಢ ಬಿಜೆಪಿಯ ಹಲವು ನಾಯಕರು ಪಕ್ಷವು ಸುಮಾರು 140 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಈಗಾಗಲೇ ಹೇಳಿಕೊಂಡಿದ್ದರೂ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ಈ ಬಾರಿ ಚುನಾವಣೆ ಸ್ವಲ್ಪ ಕಠಿಣವಾಗಿದೆ ಎಂದು ಒಪ್ಪಿಕೊಂಡಿದ್ದಾರೆ.

ಬೆಂಗಳೂರು ಮತದಾರರನ್ನು ಸೆಳೆಯಲು ಬಿಜೆಪಿ ತಂತ್ರ; ಫಾಕ್ಸ್ಕಾನ್, ಐಫೋನ್ ಘಟಕಗಳು ನಗರಕ್ಕೆ ಬರುತ್ತವೆ ಎಂದ ಜೆ ಪಿ ನಡ್ಡಾ
ದೇಶದ ಐಟಿ ರಾಜಧಾನಿ ಬೆಂಗಳೂರಿನ 28 ವಿಧಾನಸಭಾ ಸ್ಥಾನಗಳನ್ನು ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ಶತಾಯಗತಾಯ ಪ್ರಯತ್ನಿಸುತ್ತಿರುವ ಬಿಜೆಪಿ ಅದಕ್ಕಾಗಿ ತಂತ್ರ ಹೆಣೆಯುತ್ತಿದೆ.

ಮತದಾರರ ಸೆಳೆಯಲು ಚಿತ್ರದುರ್ಗದ ಮತಗಟ್ಟೆಗಳಲ್ಲಿ ವಿನೂತನ ವಿಧಾನ 'ವಾರ್ಲಿ ಕಲೆ' ಅಳವಡಿಕೆ
ಚುನಾವಣಾ ಆಯೋಗವು 2009 ರಿಂದ ಪ್ರಬಲ ಪ್ರಜಾಪ್ರಭುತ್ವಕ್ಕಾಗಿ ಮತದಾನ ಮತ್ತು ಒಟ್ಟಾರೆ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವಿಕೆ ಎಂಬ ವಿಷಯದಡಿಯಲ್ಲಿ SVEEP (ಸಿಸ್ಟಮ್ಯಾಟಿಕ್ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ) ಕಾರ್ಯಕ್ರಮವನ್ನು ಕೈಗೆತ್ತಿಕೊಂಡಾಗಿನಿಂದ ಪ್ರತಿ ಚುನಾವಣೆಯಲ್ಲೂ ಮತದಾರರ ಭಾಗವಹಿಸುವಿಕೆ ಹೆಚ್ಚಾಗುತ್ತಿದೆ.

ಸಿಎಂ ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ, ನಾಳೆ ಸಾಂಕೇತಿಕ ಕರ್ನಾಟಕ ಬಂದ್
ವಿಧಾನಸಭೆ ಚುನಾವಣೆ ಹೊತ್ತಿನಲ್ಲಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಪುತ್ರ ಸರ್ಕಾರದ ಅಧಿಕಾರಿ ಮಾಡಾಳ್ ಪ್ರಶಾಂತ್ ಪ್ರಕರಣ ವಿಪಕ್ಷ ಕಾಂಗ್ರೆಸ್ ಗೆ ಟಾನಿಕ್ ಸಿಕ್ಕಂತಾಗಿದೆ.

