Assembly election 2023

ನಾಲ್ಕೈದು ಹಾಲಿ ಶಾಸಕರನ್ನು ಬಿಟ್ಟು ಉಳಿದವರಿಗೆ ಟಿಕೆಟ್; ವಿಜಯೇಂದ್ರಗೆ ಶಿಕಾರಿಪುರ ಉತ್ತಮ: ಬಿ ಎಸ್ ಯಡಿಯೂರಪ್ಪ
ರಾಜ್ಯ ವಿಧಾನಸಭಾ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಲು ಇನ್ನು ಕೆಲವೇ ದಿನಗಳು ಬಾಕಿ. ಈ ಸಂದರ್ಭದಲ್ಲಿ ರಾಜ್ಯದ ಆಡಳಿತ ಪಕ್ಷ ಬಿಜೆಪಿ ಸೇರಿದಂತೆ ಪ್ರತಿಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ನಲ್ಲಿ ಟಿಕೆಟ್ ಹಂಚಿಕೆ ಬೇಗುದಿ ದಿನದಿಂದ ದಿನಕ್ಕೆ ಕಾವೇರುತ್ತಿದೆ.

'500 ರೂಪಾಯಿ ಕೊಟ್ಟು ಜನ್ರನ್ನ ಕರ್ಕೊಂಡು ಬರೋದು, ಅವ್ರು ಕೂಡ ದುಡ್ಡು ಕೊಟ್ಟು ಜನ ಸೇರಿಸ್ತಾರೆ': ಸಿದ್ದರಾಮಯ್ಯ ಮಾತಿನ ವಿಡಿಯೊ ವೈರಲ್
ರಾಜಕೀಯ ಪಕ್ಷಗಳ, ರಾಜಕೀಯ ನಾಯಕರ ಸಮಾವೇಶಗಳು, ರ್ಯಾಲಿಗಳಿಗೆ ಹಣ ಕೊಟ್ಟು ಜನರನ್ನು ಸೇರಿಸುವ ವಿಚಾರ ರಹಸ್ಯವೇನಲ್ಲ. ಅದೂ ಚುನಾವಣೆ ಹೊತ್ತಲ್ಲಿ ದುಡ್ಡಿನ ಹೊಳೆ ಹರಿಯುವುದು ಸಾಮಾನ್ಯ. ಈಗ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಪರ್ವ.

ಬಿಜೆಪಿಯ ಒಬ್ಬ ಕಾರ್ಯಕರ್ತನಾಗಿ ಯಡಿಯೂರಪ್ಪನವರ ಭಾಷಣ ನನಗೆ ಅತ್ಯಂತ ಸ್ಫೂರ್ತಿದಾಯಕ: ಪ್ರಧಾನಿ ಮೋದಿ
ಆಪರೇಷನ್ ಕಮಲ ನಂತರ 2019ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿ ಪೂರ್ವ ಷರತ್ತಿನಂತೆ 2021ರ ಜುಲೈಯಲ್ಲಿ ಕಣ್ಣೀರು ಹಾಕುತ್ತಲೇ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ(B S Yedyurappa) ಮುಖ್ಯಮಂತ್ರಿ ಪದವಿಯಿಂದ ಕೆಳಗಿಳಿದಿದ್ದರು.

ಎರಡು ದಿನಗಳ ಭೇಟಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ರಾಜ್ಯಕ್ಕೆ ಆಗಮನ: ಉಡುಪಿ, ಚಿಕ್ಕಮಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ
ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನು ಎರಡೇ ತಿಂಗಳು ಬಾಕಿ. ಆಡಳಿತಾರೂಢ ಬಿಜೆಪಿಯಿಂದ ಕೇಂದ್ರದ ನಾಯಕರು ಪದೇ ಪದೇ ರಾಜ್ಯಕ್ಕೆ ಆಗಮಿಸಿ ಹಲವು ತಂತ್ರಗಳನ್ನು ಹೆಣೆಯುತ್ತಿದ್ದಾರೆ.

ಬಿಜೆಪಿಯೇ ಭರವಸೆ ಎನ್ನುತ್ತಿರುವ ಆಡಳಿತ ಪಕ್ಷ: 40 ಪರ್ಸೆಂಟ್ ಕಮಿಷನ್ ಪಕ್ಷ ಎಂದು ಮಸಿ ಬಳಿಯುತ್ತಿರುವ ಕಾಂಗ್ರೆಸ್
ವಿಧಾನಸಭೆ ಚುನಾವಣೆ ಸನ್ನಿಹಿತವಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ಮತದಾರರನ್ನು ಓಲೈಸಲು ತಮ್ಮದೇ ರೀತಿಯಲ್ಲಿ ತಂತ್ರ-ಪ್ರತಿತಂತ್ರ ಹೆಣೆಯುತ್ತವೆ, ಬೆಂಗಳೂರಿನ ಬೀದಿ ಬೀದಿಗಳಲ್ಲಿ, ರಸ್ತೆಗಳ ಇಕ್ಕೆಲಗಳಲ್ಲಿ ಗೋಡೆಗಳಲ್ಲಿ ಜಾಹೀರಾತುಗಳನ್ನು ಪ್ರಕಟಿಸಲಾಗುತ್ತಿದೆ.

ಓಲೈಕೆ ರಾಜಕಾರಣ ಎಂದರೇನು? ನಾಗರಿಕರಿಗೆ ಸರ್ಕಾರದ ಸೌಲಭ್ಯಗಳನ್ನು ಪಡೆಯುವ ಹಕ್ಕಿದೆ: ಬಿ ಕೆ ಹರಿಪ್ರಸಾದ್ (ಸಂದರ್ಶನ)
ಕಾಂಗ್ರೆಸ್ ಅಲ್ಪಸಂಖ್ಯಾತ ಸಮುದಾಯವನ್ನು ಓಲೈಸುವ ಪಕ್ಷ ಎಂದು ಆಡಳಿತಾರೂಢ ಬಿಜೆಪಿ ಆಗಾಗ್ಗೆ ಆರೋಪಿಸುವುದುಂಟು. ಇದಕ್ಕೆ ಉತ್ತರಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಮತ್ತು ರಾಜ್ಯ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಸರ್ಕಾರದಿಂದ ತಮ್ಮ ಕಲ್ಯಾಣವನ್ನು ಪಡೆಯುವ ಹಕ್ಕು ನಾಗರಿಕರಿಗೆ ಇದೆ ಎಂದು ಹೇಳಿದರು.

ಕಾಂಗ್ರೆಸ್ ಮತ್ತು ಸಿದ್ದರಾಮಯ್ಯಗೆ ರಾಜ್ಯದ ಜನತೆ ತಕ್ಕ ಪಾಠ ಕಲಿಸುತ್ತಾರೆ: ಜೆ ಪಿ ನಡ್ಡಾ
ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ನಿನ್ನೆ ತುಮಕೂರು ಜಿಲ್ಲೆ ಸಿರಾದಲ್ಲಿ ರಾಜ್ಯ ಬಿಜೆಪಿ ನಾಯಕರ ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಕಾರ್ಯಕ್ರಮದಲ್ಲಿ ನಡ್ಡಾ ಜೊತೆಗೆ ಮಾಜಿ-ಹಾಲಿ ಮುಖ್ಯಮಂತ್ರಿಗಳು, ಬಿಜೆಪಿ ರಾಜ್ಯಾಧ್ಯಕ್ಷರು, ಸಚಿವರುಗಳು ಹಾಜರಿದ್ದರು.

ರಾಜ್ಯಕ್ಕೆ 'ಬಿಜೆಪಿ ಚಾಣಕ್ಯ' ಅಮಿತ್ ಶಾ ಆಗಮನ: ಹಳೆ ಮೈಸೂರು ಭಾಗದ ಮತದಾರರನ್ನು ಓಲೈಸಲು ಕೇಸರಿ ಪಡೆ ತಂತ್ರ
2023ರ ವಿಧಾನಸಭೆ ಚುನಾವಣೆಗೆ ಸಮಯ ಸನ್ನಿಹಿತವಾಗುತ್ತಿದೆ. ಚುನಾವಣೆಯ ಮೂಡ್ ಗೆ ಈಗಾಗಲೇ ಪ್ರಮುಖ ಪಕ್ಷಗಳು ಸಿದ್ಧವಾಗುತ್ತಿವೆ. ಈ ಹೊತ್ತಿನಲ್ಲಿ ಕಳೆದ ರಾತ್ರಿ ಬಿಜೆಪಿಯ ಚಾಣಾಕ್ಷ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದಿದ್ದಾರೆ. ಭಾರತೀಯ ಜನತಾ ಪಾರ್ಟಿಗೆ ಹಳೆ ಮೈಸೂರು ಭಾಗದಲ್ಲಿ ಪುಷ್ಠಿ ನೀಡಬೇಕಿದೆ.

ಹಲವು ಕ್ಷೇತ್ರಗಳಲ್ಲಿ ಚುನಾವಣೆಗೆ ನಿಲ್ಲುವಂತೆ ನನಗೆ ಒತ್ತಡ ಹಾಕುತ್ತಿದ್ದಾರೆ, ಇನ್ನೂ ತೀರ್ಮಾನ ಮಾಡಿಲ್ಲ: ಸಿದ್ದರಾಮಯ್ಯ
ನನ್ನ ಕ್ಷೇತ್ರ ಬಾದಾಮಿಯಲ್ಲಿ ಮುಂದಿನ ಚುನಾವಣೆಗೆ ಸ್ಪರ್ಧಿಸಬೇಕೆಂದು ಬಹಳ ಜನರು ಒತ್ತಡ ಹಾಕುತ್ತಿದ್ದಾರೆ, ಮಹಿಳೆಯರು ಮನೆ ಮುಂದೆ ಬಂದು ಒತ್ತಾಯಿಸುತ್ತಿದ್ದಾರೆ, ಪತ್ರ ಬರೆಯುತ್ತಿದ್ದಾರೆ. ಪ್ರತಿ ವಾರಕ್ಕೊಮ್ಮೆ ಅಲ್ಲಿ ಹೋಗುವುದಕ್ಕಾಗುವುದಿಲ್ಲ, ಇರುವುದಕ್ಕಾಗುವುದಿಲ್ಲ. ಬೇರೆ ಬೇರೆ ಕೆಲಸದ ಒತ್ತಡಗಳಿಂದಾಗಿ ಬಾದಾಮಿಗೆ ಹೆಚ್ಚು ಗಮನ ಹರಿಸಲು ಆಗುತ್ತಿಲ್ಲ, ಹೀಗಾಗಿ ಮ

