assembly election

ಕರ್ನಾಟಕ ಚುನಾವಣೆ 2018: ನೀವು ತಿಳಿಯಲೇ ಬೇಕಾದ ಪ್ರಮುಖ ಅಂಶಗಳಿವು!
ರಾಜ್ಯ ವಿಧಾನಸಭೆಗೆ ಮತದಾನ ಆರಂಭವಾಗಿದ್ದು, ಒಟ್ಟು 222 ಕ್ಷೇತ್ರಗಳಲ್ಲಿ ಬಿರುಸಿನ ಮತದಾನ ಆರಂಭವಾಗಿದೆ.

ವೋಟರ್ ಐಡಿ ಇಲ್ಲದಿದ್ದರೂ ಮತದಾನ ಮಾಡಬಹುದು: ಸಂಜೀವ್ ಕುಮಾರ್
ಮತದಾರರಲ್ಲಿ ಜಾಗೃತಿ ಮೂಡಿಸುವ ಸಂಬಂಧ ರಾಜ್ಯ ಚುನಾವಣಾ ಆಯೋಗದ ಮುಖ್ಯ ಅಧಿಕಾರಿ ಸಂಜೀವ್ ಕುಮಾರ್, ಗುರುತಿನ ಚೀಟಿ ಇಲ್ಲದಿದ್ದರೂ ಮತದಾನ ಮಾಡಬಹುದು ಎಂದು ಹೇಳಿದ್ದಾರೆ.

ನಾಳೆ ಮತದಾನ; ಬಿಎಂಟಿಸಿ, ಕೆಎಸ್ ಆರ್ ಟಿಸಿ ಪ್ರಯಾಣಿಕರೇ.. ಇನ್ನೆರಡು ದಿನ ಬದಲಿ ವ್ಯವಸ್ಥೆ ಮಾಡಿಕೊಳ್ಳಿ
ರಾಜ್ಯ ವಿಧಾನಸಭೆ ಚುನವಾಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇನ್ನೆರಡು ದಿನ ರಾಜ್ಯದಲ್ಲಿ ಸರ್ಕಾರಿ ಸಾರಿಗೆ ಬಸ್ ಸೇವೆಯಲ್ಲಿ ವ್ಯತ್ಯಯವಾಗಲಿದೆ.

ಯಡಿಯೂರಪ್ಪ ಸಿಎಂ ಆಗುತ್ತೇನೆ ಎಂದು ಹೇಳುತ್ತಿರುವುದು ಅತೀ ವಿಶ್ವಾಸವಲ್ಲ, ಆತ್ಮ ವಿಶ್ವಾಸ: ಅಮಿತ್ ಶಾ
ಕರ್ನಾಟಕ ವಿಧಾನ ಸಭೆ ಚುನಾವಣೆಗೆ ಮೇ 12 ರಂದು ಮತದಾನ ನಡೆಯಲಿದ್ದು ಎಲ್ಲಾ ಪಕ್ಷಗಳ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಇಷ್ಟು ದಿನ ಪ್ರಚಾರ...

ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಆಪ್ತ ಪ್ರಶಾಂತ್ ಮತ್ತು ಶಾಸಕ ಅಶೋಕ್ ಖೇಣಿಗೆ ಐಟಿ ಶಾಕ್
ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಲಕರ್ಣಿ ಅವರ ಆಪ್ತ ಸಹಾಯಕ ಮತ್ತು ಬೀದರ್ ಶಾಸಕ ಅಶೋಕ್ ಖೇಣಿ ಅವರ ಮನೆ ಮೇಲೆ ಶುಕ್ರವಾರ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪತ್ರಗಳ ಶೋಧ ನಡೆಸಿದ್ದಾರೆ.

ರಾಜಕೀಯ ಪಕ್ಷ, ನಾಯಕರ ಕುರಿತ ರಹಸ್ಯ ಕಾರ್ಯಾಚರಣೆ ಪ್ರಸಾರ ಬೇಡ: ಮಾಧ್ಯಮಗಳಿಗೆ ಆಯೋಗ ಸೂಚನೆ
ಕರ್ನಾಟಕ ವಿಧಾನಸಭೆ ಚುನಾವಣೆಗೆ ಶನಿವಾರ ಮತದಾನ ನಡೆಯುತ್ತಿರುವ ಹಿನ್ನಲೆಯಲ್ಲಿ ರಾಜಕೀಯ ಪಕ್ಷ ಅಥವಾ ರಾಜಕೀಯ ವ್ಯಕ್ತಿ, ಅಭ್ಯರ್ಥಿಗಳ ಕುರಿತ ರಹಸ್ಯ ಕಾರ್ಯಾಚರಣೆಯ ಕಾರ್ಯಕ್ರಮಗಳನ್ನು ಪ್ರಸಾರ ಮಾಡದಂತೆ ರಾಜ್ಯ ಚುನಾವಣಾ ಆಯೋಗ ಮಾಧ್ಯಮಗಳಿಗೆ ಸೂಚನೆ ನೀಡಿದೆ.

ಆರ್ಆರ್ ನಗರ ವೋಟರ್ ಐಡಿ ಪತ್ತೆ ಪ್ರಕರಣ: ಕೇಂದ್ರ ಚುನಾವಣಾ ಆಯೋಗಕ್ಕೆ ವರದಿ ರವಾನೆ
ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಜಾಲಹಳ್ಳಿಯ ಅಪಾರ್ಟ್ವೆುಂಟ್ವೊಂದರಲ್ಲಿ ಪತ್ತೆಯಾದ 10 ಸಾವಿರ ಮತದಾರರ ಗುರುತಿನ ಚೀಟಿಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗ ಕೇಂದ್ರ ಚುನಾವಣಾ ಆಯೋಗಕ್ಕೆ ತನ್ನ ವರದಿ ರವಾನೆ ಮಾಡಿದೆ.

ವಿಧಾನಸಭಾ ಚುನಾವಣೆ; ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್
ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಬಿಡುಗಡೆಗೊಳಿಸಿದ್ದ ಪ್ರಣಾಳಿಕೆ ವಿರುದ್ಧ ರಾಷ್ಟ್ರೀಯ ಹಿಂದು ಸೇನಾ ಮುಖಂಡ ಪ್ರಮೋದ್ ಮುತಾಲಿಕ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ವಜಾಗೊಳಿಸಿದೆ...

ಬೆಂಗಳೂರಿನಲ್ಲಿ 10 ಸಾವಿರಕ್ಕೂ ಅಧಿಕ ವೋಟರ್ ಐಡಿ ಪತ್ತೆ, ಚುನಾವಣಾ ಆಯೋಗದಿಂದ ತನಿಖೆ
ರಾಜ್ಯ ವಿಧಾನಸಭಾ ಚುನಾವಣೆ ಮತದಾನಕ್ಕೆ ಇನ್ನು ಮೂರು ದಿನ ಇರುವಂತೆಯೇ ಇತ್ತ ಬೆಂಗಳೂರಿನ ಒಂದು ಅಪಾರ್ಟ್ ಮೆಂಟ್ ನಲ್ಲಿ...

