Assembly elections

ಬಲಿಷ್ಠ ಕಾಂಗ್ರೆಸ್ ತೆಲಂಗಾಣ ರಾಜ್ಯಕ್ಕೆ ಲಾಭದಾಯಕ: ಸಚಿವ ದಿನೇಶ್ ಗುಂಡೂರಾವ್
ತೆಲಂಗಾಣದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಕರ್ನಾಟಕದ ಸಚಿವ ದಿನೇಶ್ ಗುಂಡೂರಾವ್ ಅವರು, ಬಲಿಷ್ಠವಾದ ಕಾಂಗ್ರೆಸ್ ದೇಶ ಮತ್ತು ತೆಲಂಗಾಣಕ್ಕೆ ಲಾಭದಾಯಕ ಎಂದು ಮಂಗಳವಾರ ಹೇಳಿದ್ದಾರೆ.

ಛತ್ತೀಸಗಢದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೇರಿದರೆ ಮಹಿಳೆಯರಿಗೆ ವಾರ್ಷಿಕ 15,000 ರೂ. ನೆರವು: ಭೂಪೇಶ್ ಬಘೇಲ್
ಛತ್ತೀಸಗಢದಲ್ಲಿ ಕಾಂಗ್ರೆಸ್ ಅಧಿಕಾರವನ್ನು ಉಳಿಸಿಕೊಂಡರೆ, ರಾಜ್ಯದಲ್ಲಿ ಮಹಿಳೆಯರಿಗೆ ವಾರ್ಷಿಕ 15,000 ರೂಪಾಯಿ ಆರ್ಥಿಕ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಭೂಪೇಶ್ ಬಘೇಲ್ ಭಾನುವಾರ ಹೇಳಿದ್ದಾರೆ.

ತೆಲಂಗಾಣ ಚುನಾವಣೆ: ಕರ್ನಾಟಕ ಸಿಎಂ ಸಿದ್ದರಾಮಯ್ಯಗೆ ಕೆ ಚಂದ್ರಶೇಖರ್ ರಾವ್ ಟೀಕಿಸುವ ಹಕ್ಕಿಲ್ಲ- ಕೆ ಕವಿತಾ
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರನ್ನು ಟೀಕಿಸುವ ಯಾವುದೇ ಅರ್ಹತೆ ಹೊಂದಿಲ್ಲ. ಕಾಂಗ್ರೆಸ್ ಪಕ್ಷವು ತನ್ನ ರಾಜ್ಯದಲ್ಲಿ 'ವಿಫಲವಾಗುತ್ತಿದೆ' ಎಂದು ಬಿಆರ್‌ಎಸ್ ಎಂಎಲ್ಸಿ ಕೆ ಕವಿತಾ ಶುಕ್ರವಾರ ಆರೋಪಿಸಿದ್ದಾರೆ.

'ನಾವು ನಿಮ್ಮನ್ನು ಅಪ್ಪುತ್ತೇವೆ, ಬಿಜೆಪಿ ನಾಯಕರು ನಿಮ್ಮ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಾರೆ': ರಾಹುಲ್ ಗಾಂಧಿ
ಬಿಜೆಪಿ ಬುಡಕಟ್ಟು ಜನಾಂಗದವರು 'ದೊಡ್ಡ ಕನಸು' ಕಾಣಲು ಬಯಸುವುದಿಲ್ಲ. ಆದ್ದರಿಂದ ಅವರನ್ನು ಆದಿವಾಸಿಗಳ ಬದಲಿಗೆ ‘ವನವಾಸಿ’ ಎಂದು ಕರೆಯುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ.

ರಾಜಸ್ಥಾನ ವಿಧಾನಸಭೆ ಚುನಾವಣೆ: 15 ಅಭ್ಯರ್ಥಿಗಳಿರುವ ಐದನೇ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ!
ನವೆಂಬರ್ 25 ರಂದು ನಡೆಯಲಿರುವ ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಕೆಲವು ಹೊಸ ಮುಖಗಳನ್ನು ಒಳಗೊಂಡಿರುವ 15 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಭಾನುವಾರ ಬಿಡುಗಡೆ ಮಾಡಿದೆ. ಪಕ್ಷವು ಮಾವ್ಲಿ (ಉದಯಪುರ) ಕ್ಷೇತ್ರದ ಹಾಲಿ ಶಾಸಕ ಧರ್ಮನಾರಾಯಣ ಜೋಶಿ ಅವರನ್ನು ಕೈಬಿಟ್ಟು ಬದಲಿಗೆ ಕೆಜಿ ಪಲಿವಾಲ್ ಅವರನ್ನು ಕಣಕ್ಕಿಳಿಸಿದೆ.

‘ಐದು ರಾಜ್ಯಗಳ ವಿಧಾನಸಭೆ ಚುನಾವಣೆಯತ್ತ ಕಾಂಗ್ರೆಸ್ ಚಿತ್ತ; INDIA ದಲ್ಲಿ ಅಪಸ್ವರ’
ಪ್ರತಿಪಕ್ಷಗಳ ಮೈತ್ರಿಕೂಟ 'ಇಂಡಿಯಾ'ದಲ್ಲಿ ಎಲ್ಲವೂ ಸರಿ ಇಲ್ಲ ಎಂಬ ಸುಳಿವು ನೀಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಮುಂಬರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿರತವಾಗಿರುವುದರಿಂದ ಸೀಟು...

ಪಂಚ ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರ ರಚನೆ, ಕೇಂದ್ರ ಕರ್ನಾಟಕವನ್ನು ನಿರ್ಲಕ್ಷ್ಯಿಸುತ್ತಿದೆ: ಮಲ್ಲಿಕಾರ್ಜುನ ಖರ್ಗೆ
ಮುಂದಿನ ತಿಂಗಳು ಚುನಾವಣೆ ನಡೆಯಲಿದ್ದು, ಎಲ್ಲಾ ಐದು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷವು ಸರ್ಕಾರ ರಚಿಸಲಿದೆ ಮತ್ತು ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದಲ್ಲಿ ಆಡಳಿತ ವಿರೋಧಿ ಅಲೆ ಜೋರಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಹೇಳಿದ್ದಾರೆ.

ರಾಜಸ್ಥಾನ ಚುನಾವಣೆ: ಕಳೆದ 15 ದಿನಗಳಲ್ಲಿ 244 ಕೋಟಿ ರೂ. ಹಣ ವಶ
ಮುಂದಿನ ತಿಂಗಳು ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲಿ ಕಳೆದ 15 ದಿನಗಳಲ್ಲಿ 244 ಕೋಟಿ ರೂಪಾಯಿ ಹಣವನ್ನು ಜಾರಿ ಏಜೆನ್ಸಿಗಳು ವಶಪಡಿಸಿಕೊಂಡಿವೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಇಬ್ಬರು ಜಿಲ್ಲಾಧಿಕಾರಿ, ಮೂವರು ಎಸ್‌ಪಿಗಳನ್ನು ತಕ್ಷಣವೇ ವರ್ಗಾವಣೆ ಮಾಡಿ: ಛತ್ತೀಸ್‌ಗಢ ಸರ್ಕಾರಕ್ಕೆ ಚುನಾವಣಾ ಆಯೋಗ
ಇಬ್ಬರು ಜಿಲ್ಲಾಧಿಕಾರಿಗಳು ಮತ್ತು ಮೂವರು ಜಿಲ್ಲಾ ಪೊಲೀಸ್ ಮುಖ್ಯಸ್ಥರು ಸೇರಿದಂತೆ ಎಂಟು ಅಧಿಕಾರಿಗಳನ್ನು ಕೂಡಲೇ ವರ್ಗಾವಣೆ ಮಾಡುವಂತೆ ಭಾರತ ಚುನಾವಣಾ ಆಯೋಗವು (ಇಸಿಐ) ಛತ್ತೀಸ್‌ಗಢ ಸರ್ಕಾರಕ್ಕೆ ನಿರ್ದೇಶನ ನೀಡಿದ್ದು, ಅವರಿಗೆ ಯಾವುದೇ ಚುನಾವಣಾ ಸಂಬಂಧಿತ ಜವಾಬ್ದಾರಿಯನ್ನು ನೀಡಬಾರದು ಎಂದು ಸೂಚನೆ ನೀಡಿದೆ.

