ರಾಜ್ಯ5 ಕೆಜಿ ಅಕ್ಕಿ, 5 ಕೆಜಿ ಸಿರಿಧಾನ್ಯ, ಪ್ರತಿದಿನ ಅರ್ಧ ಲೀಟರ್ ಹಾಲು, ಹಬ್ಬಕ್ಕೆ ಉಚಿತ ಗ್ಯಾಸ್ ಸಿಲಿಂಡರ್: ಬಿಜೆಪಿ ಪ್ರಣಾಳಿಕೆ ಬಿಡುಗಡೆ
ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ಬಿಜೆಪಿಯು, ಅಧಿಕಾರಕ್ಕೆ ಬಂದರೆ ಪಡಿತರದಲ್ಲಿ 5 ಕೆಜಿ ಅಕ್ಕಿ ಜೊತೆ ಇನ್ನೂ 5 ಕೆಜಿ ಸಿರಿಧಾನ್ಯ ವಿತರಣೆ ವಿತರಣೆ ಮಾಡುವುದಾಗಿ ಹಾಗೂ ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ನಂದಿನಿ ಹಾಲು ನೀಡುವ ಭರವಸೆಯನ್ನು ನೀಡಿದೆ.