Assembly poll result

ಸೋಲು, ಗೆಲುವು ಸಹಜ, ಕಾಂಗ್ರೆಸ್‌ಗೆ ಆಲ್ ದಿ ಬೆಸ್ಟ್: ಶೋಭಾ ಕರಂದ್ಲಾಜೆ
ಚುನಾವಣೆಯಲ್ಲಿ ಸೋಲು-ಗೆಲುವು ಸಹಜ. ನಾವು ಒಂದು ವಿಪಕ್ಷವಾಗಿ ಜನರ ಸೇವೆ ಮಾಡುತ್ತೇವೆ. ಕಾಂಗ್ರೆಸ್‌ಗೆ ಆಲ್ ದಿ ಬೆಸ್ಟ್ ಎಂದು ಸಂಸದೆ ಶೋಭಾ ಕರಂದ್ಲಾಜೆ ಅವರು ಶನಿವಾರ ಹೇಳಿದ್ದಾರೆ.

ಸೋಲು, ಗೆಲುವನ್ನು ಸಮಚಿತ್ತದಿಂದ ಸ್ವೀಕರಿಸುತ್ತೇನೆ: ಹೆಚ್‌ಡಿ.ಕುಮಾರಸ್ವಾಮಿ
ರಾಜ್ಯದ ಜನತೆಯ ಆದೇಶವನ್ನು ನಾನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ್ನು ನಾನು ಸಮಚಿತ್ತದಿಂದ ಸ್ವೀಕರಿಸುತ್ತೇನೆಂದು ಜೆಡಿಎಸ್ ನಾಯಕ ಹೆಚ್'ಡಿ.ಕುಮಾರಸ್ವಾಮಿಯವರು ಶನಿವಾರ ಹೇಳಿದ್ದಾರೆ.

ಕಾಂಗ್ರೆಸ್‌ಗೆ ಅಭೂತಪೂರ್ವ ಗೆಲುವು: ಡಿಕೆ ಶಿವಕುಮಾರ್ ಭಾವುಕ
ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶಯಲ್ಲಿ ಅಭೂತಪೂರ್ವ ಗೆಲುವಿನತ್ತ ಕಾಂಗ್ರೆಸ್ ಸಾಗಿದ್ದು, ಕಾಂಗ್ರೆಸ್ ಪಕ್ಷದ ಸಾಧನೆ ಕುರಿತು ಕಾರ್ಯಕರ್ತರು ಹಾಗೂ ಪಕ್ಷದ ನಾಯಕರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಧನ್ಯವಾದ ಸಲ್ಲಿಸಿದ್ದಾರೆ.

ಕರ್ನಾಟಕ ಫಲಿತಾಂಶ ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಿದ್ದು, ರಾಹುಲ್ ಪ್ರಧಾನಿಯಾಗುವ ವಿಶ್ವಾಸವಿದೆ: ಸಿದ್ದರಾಮಯ್ಯ
ರಾಜ್ಯದ ವಿಧಾನಸಭಾ ಚುನಾವಣೆ ಫಲಿತಾಂಶ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಿದ್ದು, ರಾಹುಲ್ ಗಾಂಧಿ ದೇಶದ ಪ್ರಧಾನಮಂತ್ರಿಯಾಗುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.

ಬಿಜೆಪಿ ಸೋಲಿನ ಹೊಣೆ ಹೊತ್ತುಕೊಂಡ ನಳಿನ್ ಕುಮಾರ್ ಕಟೀಲ್
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿದ್ದು, ಸೋಲಿನ ಹೊಣೆ ಹೊರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶನಿವಾರ ಹೇಳಿದ್ದಾರೆ.

ಮ್ಯಾಜಿಕ್ ನಂಬರ್ ದಾಟಿದ ಕಾಂಗ್ರೆಸ್: 'ಕೈ' ಪಾಳಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ, ನಾಳೆ ಸಿಎಲ್'ಪಿ ಸಭೆ!
ಕರ್ನಾಟಕ ವಿಧಾನಸಭಾ ಚುನಾವಣೆ ಮತ ಎಣಿಕೆ ಬಿರುಸಿನಿಂದ ಸಾಗುತ್ತಿದ್ದು, ಕಾಂಗ್ರೆಸ್ ಸ್ಪಷ್ಟ ಮುನ್ನಡೆ ಪಡೆದುಕೊಂಡಿದೆ. ಕಾಂಗ್ರೆಸ್ 129 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದುಕೊಳ್ಳುವ ಮೂಲಕ ಮ್ಯಾಜಿಕ್ ನಂಬರ್ ದಾಟಿದ್ದು, ಈ ನಡುವಲ್ಲೇ ಕೈ ಪಾಳಯದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ.

ಚನ್ನಪಟ್ಟಣ ವಿಧಾನಸಭಾ ಚುನಾವಣೆ ಫಲಿತಾಂಶ: ಸಿ.ಪಿ ಯೋಗೇಶ್ವರ್ ಹಿಂದಿಕ್ಕಿ ಹೆಚ್'ಡಿ.ಕುಮಾರಸ್ವಾಮಿ ಮುನ್ನಡೆ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಮತ ಎಣಿಕೆ ಭರದಿಂದ ಮುಂದುವರೆದಿದ್ದು, ಬೆಳಗ್ಗೆ 10:30ರ ವೇಳೆಗೆ ಜೆಡಿಎಸ್ ಅಭ್ಯರ್ಥಿ ಕುಮಾರಸ್ವಾಮಿ 14,400 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

