Assembly poll

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ: 5ನೇ ಹಂತದ ಮತದಾನ ಆರಂಭ, ಹೆಚ್ಚಿನ ಸಂಖ್ಯೆಯಲ್ಲಿ ಮತದಾನಕ್ಕೆ ಪ್ರಧಾನಿ ಮನವಿ
ಪಶ್ಚಿಮ ಬಂಗಾಳ ವಿಧಾನಸಭೆಗೆ 5ನೇ ಹಂತದ ಮತದಾನವು ಶನಿವಾರ ಆರಂಭಗೊಂಡಿದೆ. ಒಟ್ಟು 45 ವಿಧಾನಸಭಾ ಕ್ಷೇತ್ರಗಳ 342 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ನಿರ್ಧರಿಸಲಿದ್ದಾರೆ.

ಪಶ್ಚಿಮ ಬಂಗಾಳ: ಚುನಾವಣಾ ಪ್ರಚಾರಕ್ಕೆ 24 ಗಂಟೆ ನಿಷೇಧ, ಮಂಗಳವಾರ ಮಮತಾ ಬ್ಯಾನರ್ಜಿ ಧರಣಿ
ಧರ್ಮಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಮತ್ತು ಕೇಂದ್ರಿಯ ಪಡೆ- ಸಿಆರ್ ಪಿಎಫ್ ವಿರುದ್ಧ ಹೇಳಿಕೆ ಆರೋಪದ ಮೇರೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 24 ಗಂಟೆಗಳ ಕಾಲ ಯಾವುದೇ ರೀತಿಯ ಪ್ರಚಾರ ನಡೆಸದಂತೆ ಚುನಾವಣಾ ಆಯೋಗ ನಿಷೇಧ ಹೇರಿದೆ.

ಪಶ್ಚಿಮ ಬಂಗಾಳ ಚುನಾವಣೆ: ಮಮತಾ ಬ್ಯಾನರ್ಜಿಗೆ ಆಯೋಗದಿಂದ ಮತ್ತೊಂದು ನೋಟಿಸ್
ಕೇಂದ್ರಿಯ ಪಡೆ ವಿರುದ್ಧ ಹೇಳಿಕೆ ಆರೋಪದ ಮೇರೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಚುನಾವಣಾ ಆಯೋಗ ಮತ್ತೊಂದು ನೋಟಿಸ್ ನೀಡಿದೆ.

ಬಿಹಾರ ವಿಧಾನಸಭಾ ಚುನಾವಣೆ: 50 ಸ್ಥಾನಗಳಲ್ಲಿ ಶಿವಸೇನಾ ಸ್ಪರ್ಧೆ
ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸುಮಾರು 50 ಸ್ಥಾನಗಳಲ್ಲಿ ಶಿವಸೇನಾ ಸ್ಪರ್ಧಿಸಲಿದೆ ಎಂದು ಪಕ್ಷದ ಸಂಸದ ಅನಿಲ್ ದೇಸಾಯಿ ಭಾನುವಾರ ಹೇಳಿದ್ದಾರೆ.

ದಲಿತ ಮುಖಂಡ ಪಾಸ್ವನ್ ಸಾವು ಬಿಹಾರ ಚುನಾವಣೆ ಅನಿಶ್ಚಿತತೆಯ ಮತ್ತೊಂದು ಅಂಶ!
ಲೋಕ ಜನಶಕ್ತಿ ಪಾರ್ಟಿ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿ ಈಗಾಗಲೇ ತಯಾರಿ ನಡೆಸುತ್ತಿರುವಂತೆಯೇ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವನ್ ಅವರ ಸಾವು ಬಿಹಾರ ವಿಧಾನಸಭಾ ಚುನಾವಣೆಯ ಅನಿಶ್ಚಿತತೆಯ ಮತ್ತೊಂದು ಅಂಶವಾಗಿ ಕಾಣಿಸುತ್ತಿದೆ.

ಜೆಡಿಯು,ಎಲ್ ಜೆಪಿ ನಡುವಣ ಒಡಕು: ಮಹತ್ವದ ಎಲ್ ಜೆಪಿ ಸಭೆ ಹಿನ್ನೆಲೆ, ನಿತೀಶ್ ವಿರುದ್ಧ ಚಿರಾಗ್ ವಾಗ್ದಾಳಿ
ಆಡಳಿತರಾಢ ಎನ್ ಡಿಎ ಮೈತ್ರಿಕೂಟದ ಅಂಗಪಕ್ಷಗಳಾದ ಜೆಡಿಯು ಹಾಗೂ ಎಲ್ ಜೆಪಿ ನಡುವಣ ಒಡಕು ಮೂಡಿದ್ದು,ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ವಿರುದ್ಧ ಹೋರಾಟ ನಡೆಸುವ ನಿಟ್ಟಿನಲ್ಲಿ ಲೋಕ ಜನಶಕ್ತಿ ಪಕ್ಷ ಇಂದು ಮಹತ್ವದ ಸಭೆಯನ್ನು ನಡೆಸುತ್ತಿದೆ.

6 ಗಂಟೆಯವರೆಗೂ ಮಹಾರಾಷ್ಟ್ರದಲ್ಲಿ ಶೇ. 55, ಹರಿಯಾಣದಲ್ಲಿ ಶೇ. 63ರಷ್ಟು ಮತದಾನ
ಸಂಜೆ 6 ಗಂಟೆಯವರೆಗೂ ಮಹಾರಾಷ್ಟ್ರದಲ್ಲಿ ಶೇ. 55ರಷ್ಟು ಹಾಗೂ ಹರಿಯಾಣದಲ್ಲಿ ಶೇ. 63ರಷ್ಟು ಮತದಾನವಾಗಿರುವ ಬಗ್ಗೆ ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.

11 ಗಂಟೆಯವರೆಗೂ ಮಹಾರಾಷ್ಟ್ರದಲ್ಲಿ ಶೇ. 6.35, ಹರಿಯಾಣದಲ್ಲಿ ಶೇ. 11.68 ರಷ್ಟು ಮತದಾನ
ಮಹಾರಾಷ್ಟ್ರ ಹಾಗೂ ಹರಿಯಾಣ ವಿಧಾನಸಭೆಗೆ ಬೆಳಗ್ಗೆಯಿಂದ ಮತದಾನ ಪ್ರಗತಿಯಲ್ಲಿದ್ದು, ಬಾಲಿವುಡ್ ನಟಿ ಮಾಧುರಿ ದೀಕ್ಷಿತ್, ನಟ ಅಮೀರ್ ಖಾನ್, ಸೇರಿದಂತೆ ಅನೇಕ ನಟಿ ನಟಿಯರು, ರಾಜಕಾರಣಿಗಳು ಮತಗಟ್ಟೆಗಳಲ್ಲಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.

ಮಹಾರಾಷ್ಟ್ರ ಚುನಾವಣೆ: 2ನೇ ಬಾರಿಗೆ ಅಧಿಕಾರ ಹಿಡಿಯಲು ಹವಣಿಸುತ್ತಿರುವ ಬಿಜೆಪಿ
288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ಇಂದು ಬೆಳಗ್ಗೆಯಿಂದ ಮತದಾನ ಆರಂಭವಾಗಿದ್ದು, 235 ಮಹಿಳೆಯರು ಸೇರಿದಂತೆ ಒಟ್ಟಾರೇ 3237 ಅಭ್ಯರ್ಥಿಗಳು ತಮ್ಮ ಗೆಲುವಿಗಾಗಿ ಪ್ರಾರ್ಥಿಸುತ್ತಿದ್ದಾರೆ. ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿರುವ ಮತದಾನ ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ.

