Assembly poll

ಜಗದೀಶ್ ಶೆಟ್ಟರ್'ಗೆ ಟಿಕೆಟ್ ನೀಡುವ ವಿಚಾರ ಸಂಬಂಧ ಬಿಜೆಪಿ ನಾಯಕತ್ವ ಚಿಂತನೆ ನಡೆಸುತ್ತಿದೆ: ಪ್ರಹ್ಲಾದ್ ಜೋಶಿ
ಕರ್ನಾಟಕದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಗೆ ಬಿಜೆಪಿ ಟಿಕೆಟ್ ನೀಡುವುದೇ ಎಂಬ ಅನಿಶ್ಚಿತತೆಯ ನಡುವೆಯೇ, ಈ ವಿಷಯ ಪಕ್ಷದ ಹೈಕಮಾಂಡ್‌ನ ಪರಿಶೀಲನೆಯಲ್ಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಶುಕ್ರವಾರ ಹೇಳಿದ್ದಾರೆ.

ವಿಧಾನಸಭಾ ಚುನಾವಣೆ: 40-45 ಅಭ್ಯರ್ಥಿಗಳ ಕಣಕ್ಕಿಳಿಸಲು ಎನ್‌ಸಿಪಿ ಮುಂದು!
ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶರದ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) 40-45 ಸ್ಥಾನಗಳಲ್ಲಿ ಸ್ಪರ್ಧಿಗಿಳಿಯಲು ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಜಾರಕಿಹೊಳಿ ಆಪ್ತರಿಗೆ ದಾರಿ ಮಾಡಿಕೊಡಲು ಸಮರ್ಥ ನಾಯಕರ ನಿರ್ಲಕ್ಷಿಸಿದ ಬಿಜೆಪಿ!
ಸಿಡಿ ಕೇಸ್ ಬಳಿಕ ತಮ್ಮನ್ನು ದೂರವಿಟ್ಟಿದ್ದ ಪಕ್ಷದ ನಾಯಕರು ಪ್ರಮುಖವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಟಿಕೆಟ್ ವಿಚಾರದಲ್ಲಿ ತಿರುಗೇಟು ನೀಡುವಲ್ಲಿ ಮಾಜಿ ಶಾಸಕ ರಮೇಶ್ ಜಾರಕಿಹೊಳಿಯವರು ಯಶಸ್ವಿಯಾಗಿದ್ದಾರೆ.

ವಿಧಾನಸಭಾ ಚುನಾವಣೆ: ಬಿಜೆಪಿ ಅಸಮಾಧಾನ ಸ್ಫೋಟ ಬೆನ್ನಲ್ಲೇ ಸಿಎಂ ಬೊಮ್ಮಾಯಿ ಟೆಂಪಲ್ ರನ್!
ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಟಿಕೆಟ್ ವಂಚಿತರ ಬಂಡಾಯ ಜೋರಾಗಿದೆ. ಈ ನಡುವಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ದೇಗುಲಗಳಿಗೆ ಭೇಟಿ ನೀಡುತ್ತಿದ್ದು, ವಿಶೇಷ ಪೂಜೆಗಳನ್ನು ಸಲ್ಲಿಸುತ್ತಿದ್ದಾರೆ.

1500 ಕೋಟಿ ರೂ. ಹಗರಣ ಆರೋಪ: ಹೇಳಿಕೆಯಿಂದ ಸಾಬೀತಾಗಲ್ಲ, ದಾಖಲೆ ಒದಗಿಸಲಿ; ನೆಹರೂ ಓಲೇಕಾರ್ ಗೆ ಬೊಮ್ಮಾಯಿ ಸವಾಲು
ಕೇವಲ ಹೇಳಿಕೆಗಳಿಂದ ಹಗರಣ ಸಾಬೀತಾಗುವುದಿಲ್ಲ, ದಾಖಲೆಗಳನ್ನು ಒದಗಿಸಲಿ ಎಂದು ತಮ್ಮ ವಿರುದ್ಧ ಆರೋಪ ಮಾಡಿರುವ ನೆಹರೂ ಓಲೇಕಾರ್'ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಗುರುವಾರ ಸವಾಲು ಹಾಕಿದ್ದಾರೆ.

ಚುನಾವಣೆ ಮೇಲೆ ಕೋವಿಡ್ ಕರಿನೆರಳು: ಆತಂಕ ಬದಿಗೊತ್ತಿ ಮತದಾನ ಮಾಡುತ್ತಾರೆಯೇ ಜನತೆ?
ದಿನಕಳೆಯುತ್ತಿದ್ದಂತೆ ಮಹಾಮಾರಿ ಕೋವಿಡ್ ಸೋಂಕು ಹೆಚ್ಚಾಗುತ್ತಿದ್ದು, ಈ ಬಾರಿಯ ಚುನಾವಣೆ ಮೇಲೆ ಕೊರೋನಾ ಪರಿಣಾಮ ಬೀರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಸಂಜೆಯೊಳಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ
ಕರ್ನಾಟಕ ವಿಧಾನಸಭೆ ಚುನಾವಣೆ ರಂಗೇರಿದ್ದು, ದಿನ ಕಳೆಯುತ್ತಿದ್ದಂತೆಯೇ ಮಹತ್ವದ ರಾಜಕೀಯ ಬೆಳವಣಿಗೆಗಳು ಕಂಡು ಬರುತ್ತಿವೆ. ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿ ಕಸರತ್ತು ಮುಂದುವರೆಸಿದ್ದು, ಸೋಮವಾರ ಸಂಜೆಯೊಳಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಯುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಿ: ಬಿಜೆಪಿ ಹೈಕಮಾಂಡ್‌ಗೆ ತೇಜಸ್ವಿ ಸೂರ್ಯ ಮನವಿ
ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ ಯುವಕರಿಗೆ ಆದ್ಯತೆ ನೀಡಬೇಕು ಎಂದು ಬಿಜೆಪಿ ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಲೋಕಸಭೆ ಸಂಸದ ತೇಜಸ್ವಿ ಸೂರ್ಯ ಅವರು ಬಿಜೆಪಿ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ.

ಬಿಜೆಪಿ ಆಂತರಿಕ ಪ್ರಜಾಪ್ರಭುತ್ವ ಅನುಸರಿಸುತ್ತಿದ್ದು, ಹೀಗಾಗಿ ಪಟ್ಟಿ ಬಿಡುಗಡೆಗೆ ವಿಳಂಬವಾಗುತ್ತಿದೆ: ಸಂಸದ ತೇಜಸ್ವಿ ಸೂರ್ಯ
ಬಿಜೆಪಿಯು ಆಂತರಿಕ ಪ್ರಜಾಪ್ರಭುತ್ವವನ್ನು ಅನುಸರಿಸುತ್ತಿರುವುದರಿಂದ ವಿಧಾನಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಲ್ಲಿ ವಿಳಂಬವಾಗಿದೆ ಎಂದು ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಲೋಕಸಭೆ ಸಂಸದ ತೇಜಸ್ವಿ ಸೂರ್ಯ ಅವರು ಶನಿವಾರ ಹೇಳಿದರು.

