Assembly polls

ಟಿಕೆಟ್ ಹಂಚಿಕೆ ಗೊಂದಲ: ಮಾರ್ಚ್ 8 ರಂದು ಕಾಂಗ್ರೆಸ್ ಸಭೆ; ಆಕಾಂಕ್ಷಿಗಳ ಮನವೊಲಿಸಲು 'ಕೈ' ಮುಖಂಡರ ಯತ್ನ
2023 ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಗೊಂದಲ ಇನ್ನೂ ಮುಂದುವರಿದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಆಯ್ಕೆಗಾಗಿ ಮಾರ್ಚ್ 8ರಂದು ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯಲಿದೆ.

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಮತ್ತೆ ಕೇಳಿ ಬರುತ್ತಿದೆ ಲಿಂಗಾಯತ ಪ್ರತ್ಯೇಕ ಧರ್ಮದ ಸ್ಥಾನಮಾನ ಕೂಗು!
ರಾಷ್ಟ್ರೀಯ ಲಿಂಗಾಯತ ಸಮ್ಮೇಳನ, ಶನಿವಾರ ಮತ್ತು ಭಾನುವಾರ ಬಸವಕಲ್ಯಾಣದಲ್ಲಿ ನಡೆಯಲಿದೆ. ಪ್ರತ್ಯೇಕ ಧರ್ಮ ಬೇಡಿಕೆಗಾಗಿ ಒತ್ತಾಯಿಸಿ ಹೋರಾಟದ ಬಗ್ಗೆ ಪ್ರತ್ಯೇಕ ಅಧಿವೇಶನದಲ್ಲಿ ಚರ್ಚಿಸಲಾಗುವುದು.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನ ಗೆಲ್ಲುವ ವಿಶ್ವಾಸವಿದೆ: ಧರ್ಮೇಂದ್ರ ಪ್ರಧಾನ್
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ರಾಜ್ಯ ಬಿಜೆಪಿಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಮಂಡ್ಯ ಜನ ವಂಶವಾಹಿ ರಾಜಕಾರಣ ವಿರೋಧಿಸಿ; ಸಾರ್ವಜನಿಕವಾಗಿ ಕಣ್ಣೀರು ಹಾಕುವ ನಾಯಕರ ನಂಬುವುದನ್ನು ಬಿಡಿ: ಸಿ.ಟಿ ರವಿ
ಡಿ.ಕೆ ಶಿವಕುಮಾರ್ ಅವರು ಒಕ್ಕಲಿಗರ ಸಂಘದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆಯೇ?, ಒಂದು ಸಮುದಾಯದ ಬೆಂಬಲದಿಂದ ಗೆಲ್ಲಲು ಸಾಧ್ಯವಿಲ್ಲಎಂಬುದನ್ನು ಅರ್ಥ ಮಾಡಿಕೊಳ್ಳಬೇಕು.

ಮಂಡ್ಯ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ತೆಗೆದುಕೊಳ್ಳಲು ಸಚಿವರ ನಿರಾಸಕ್ತಿ; ಅಮಿತ್ ಶಾ ನಿರೀಕ್ಷೆಗೆ ಹಿನ್ನಡೆ!
ಬಿಜೆಪಿಯ ಮಾಸ್ಟರ್ ಚುನಾವಣಾ ತಂತ್ರಗಾರ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಂಡ್ಯವನ್ನು ದಕ್ಷಿಣ ಕರ್ನಾಟಕದ ಹೆಬ್ಬಾಗಿಲು ಎಂದು ನೋಡುತ್ತಿದ್ದಾರೆ. ಆದರೆ ಯಾವುದೇ ಸಚಿವರು ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಬಯಸುತ್ತಿಲ್ಲ.

ಸಿದ್ದರಾಮಯ್ಯ ಹೊಸ ಪ್ಲಾನ್: 'ಬಂಡೆ' ಬುಡಕ್ಕೆ ಡೈನಾಮೇಟ್- ಕುಮಾರಸ್ವಾಮಿಗೆ ಲಾಕ್; ಚನ್ನಪಟ್ಟಣದಿಂದ ಸ್ಯಾಂಡಲ್ ವುಡ್ ಕ್ವೀನ್?
ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆ ರಾಜ್ಯ ರಾಜಕೀಯ ರಂಗೇರುತ್ತಿದೆ, ಮೂರು ಪಕ್ಷಗಳು ಬಹುಮತ ಪಡೆಯಲು ಹಲವು ತಂತ್ರಗಳನ್ನು ಬಳಸುತ್ತಿದ್ದಾರೆ. ಒಕ್ಕಲಿಗರ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಹೆಚ್ಚು ಸ್ಥಾನ ಪಡೆಯಲು ಕಾಂಗ್ರೆಸ್, ಜೆಡಿಎಸ್ ಜೊತೆ ಬಿಜೆಪಿ ಕೂಡ ಹಣಾಹಣಿ ನಡೆಸುತ್ತಿದೆ.

ತ್ರಿಪುರಾ: ಕಾಂಗ್ರೆಸ್ ಬಿಜೆಪಿಯ 'ಬಿ' ಟೀಂ ಎಂದ ಮಮತಾ!
ತ್ರಿಪುರಾ ವಿಧಾನಸಭಾ ಚುನಾವಣೆ ಸಮೀಪದಲ್ಲಿರುವಂತೆಯೇ, ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಕಾಂಗ್ರೆಸ್ ಬಿಜೆಪಿಯ 'ಬಿ' ಟೀಂ ಎಂದು ಮಂಗಳವಾರ ಕರೆದಿದ್ದಾರೆ.

ಪ್ರಜಾಧ್ವನಿ ಯಾತ್ರೆ ಎರಡನೇ ಹಂತದ ನಂತರ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಹಾಲಿ ಶಾಸಕರಿಗೆ ಮಣೆ!
ಮೊದಲ ಪಟ್ಟಿಯಲ್ಲಿ ಸುಮಾರು 120 ಅಭ್ಯರ್ಥಿಗಳ ಹೆಸರು ಪ್ರಕಟವಾಗಲಿದೆ ಎಂದು ಮೂಲಗಳು ತಿಳಿಸಿವೆ. ಆಡಳಿತ ಪಕ್ಷವು ತನ್ನ ಹಾಲಿ ಶಾಸಕರಿಗೆ ಟಿಕೆಟ್ ಖಚಿತಪಡಿಸುವ ಮೂಲಕ ಸೇಫ್ ಗೇಮ್ ಆಡುತ್ತಿರುವ ಹಿನ್ನೆಲೆಯಲ್ಲಿ, ವಿರೋಧ ಪಕ್ಷ ಕಾಂಗ್ರೆಸ್ ಹಾಲಿ ಶಾಸಕರನ್ನು ಕೈಬಿಡಲು ಸಿದ್ಧವಾಗಿಲ್ಲ ಎಂದು ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದ್ದಾರೆ.

ವಿಧಾನಸಭಾ ಚುನಾವಣೆ: ಕಾರ್ಕಳ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಪ್ರಮೋದ್ ಮುತಾಲಿಕ್ ಘೋಷಣೆ
ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿ ಸುದ್ದಿಗೆ ಗ್ರಾಸವಾಗಿದ್ದ ಶ್ರೀರಾಮ ಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಇದೀಗ ತಾವು ಸ್ಪರ್ಧಿಸುವ ಕ್ಷೇತ್ರದ ಕುರಿತು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

