Assembly polls

ರಾಜಕಾರಣಕ್ಕೆ ಕಂದಾಯ ಸಚಿವರ ಕ್ಲಾಸ್ ಮೇಟ್: ವಿಧಾನಸಭೆ ಚುನಾವಣೆಯಲ್ಲಿ ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಸ್ಪರ್ಧೆ!
1994ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪ್ರಧಾನ ಕಾರ್ಯದರ್ಶಿ ಎನ್ ಮಂಜುನಾಥ್ ಪ್ರಸಾದ್ ಅವರು 2023ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ.

ಪ್ರಧಾನಿ ಮೋದಿ ಭೇಟಿ ಮಾಡಿದ 'ಮಾಸ್ಟರ್ ಸ್ಟ್ರಾಟಜಿಸ್ಟ್': ಆಪ್ತರಿಗೆ 'ಆಯಕಟ್ಟಿ'ನ ಸ್ಥಾನ ಕೊಡಿಸಲು ಬಿಎಸ್ ಯಡಿಯೂರಪ್ಪ ಸರ್ಕಸ್!
ಬಿಜೆಪಿಯ 'ಮಾಸ್ಟರ್ ಸ್ಟ್ರಾಟಜಿಸ್ಟ್' ಬಿಎಸ್ ಯಡಿಯೂರಪ್ಪ ಶುಕ್ರವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾದರು.

ಯಡಿಯೂರಪ್ಪ ಹಾದಿಯಲ್ಲಿ ಬೊಮ್ಮಾಯಿ: ಬಿಬಿಎಂಪಿ, ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ತಿಗಳ ಸಮುದಾಯಕ್ಕೆ ಭರ್ಜರಿ ಕೊಡುಗೆ!
ಏಪ್ರಿಲ್ 1 ರಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇದೇ ರೀತಿ ಸಮುದಾಯ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಮುದಾಯ ಭವನ ನಿರ್ಮಾಣಕ್ಕೆ ವೈಯಕ್ತಿಕವಾಗಿ 25 ಲಕ್ಷ ರೂ. ಘೋಷಿಸಿದ್ದರು. ಬೊಮ್ಮಾಯಿ ಕೂಡ ಯಡಿಯೂರಪ್ಪನವರ ಹಾದಿಯಲ್ಲೇ ಸಾಗುತ್ತಿದ್ದಾರೆ.

ರಾಜ್ಯಕ್ಕೆ ಅರುಣ್ ಸಿಂಗ್ ಭೇಟಿ, ಪದಾಧಿಕಾರಿಗಳ ಸಭೆಯಲ್ಲಿ ಭಾಗಿ: ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ; ವಿಧಾನಸಭೆ ಚುನಾವಣೆ ರೂಪುರೇಷೆ ಸಿದ್ಧತೆ!
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಗುರುವಾರ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಲು ಮತ್ತು ಪಕ್ಷದ ಪರಿಸ್ಥಿತಿಯನ್ನು ಅವಲೋಕಿಸಲು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.

ಗುಜರಾತ್ ನಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ 1,000 ರೂ. ಮಾಸಿಕ ಭತ್ಯೆ: ಕೇಜ್ರಿವಾಲ್
ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಎಎಪಿ ಅಧಿಕಾರಕ್ಕೆ ಬಂದರೆ 18 ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರಿಗೆ 1,000 ರೂ. ತಿಂಗಳ ಭತ್ಯೆ ನೀಡಲಾಗುವುದು ಎಂದು ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಭರವಸೆ ನೀಡಿದ್ದಾರೆ.

ವರುಣಾ ನಿಮ್ಮನ್ನು ಸಿಎಂ ಮಾಡಿದ ಪುಣ್ಯಕ್ಷೇತ್ರ, ಇಲ್ಲಿಂದಲೇ ಸ್ಪರ್ಧಿಸಿ: ಸಿದ್ದರಾಮಯ್ಯಗೆ ಬೆಂಬಲಿಗರ ಒತ್ತಾಯ
ವರುಣಾ ಕ್ಷೇತ್ರ ಬಿಟ್ಟು ಬೇರೆ ಯಾವ ಕ್ಷೇತ್ರಕ್ಕೂ ನೀವು ಹೋಗಬೇಡಿ. ವರುಣಾ ಕ್ಷೇತ್ರ ನಿಮ್ಮನ್ನು ಸಿಎಂ ಮಾಡಿದ ಪುಣ್ಯಕ್ಷೇತ್ರ. ಹೀಗಾಗಿ ಮತ್ತೆ ವರುಣಾದಿಂದಲೇ ಸ್ಪರ್ದೆ ಮಾಡಿ ಎಂದು ಮನವಿ ಮಾಡಿದ್ದಾರೆ.

ಬೆಳಗಾವಿ ವಿಧಾನಸಭೆ ಕ್ಷೇತ್ರವೇ ಬಿಜೆಪಿ ಟಾರ್ಗೆಟ್: ಸತೀಶ್ ಜಾರಕಿಹೊಳಿ ಸೋಲಿಸಲು ಕಮಲ ಪಡೆ ಮೆಗಾ ಪ್ಲ್ಯಾನ್!
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅಂಕುಶದಲ್ಲಿರುವ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭದ್ರ ಬುನಾದಿ ನಿರ್ಮಿಸುತ್ತಿದೆ. ಬೆಳಗಾವಿಯ 13 ಸ್ಥಾನಗಳ ಪೈಕಿ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಧಕ್ಕೆ ತರಬಹುದಾದ ಜಾರಕಿಹೊಳಿ ಅವರ ರಾಜಕೀಯ ತಂತ್ರಗಳನ್ನು ವಿಫಲಗೊಳಿಸಲು ಬಿಜೆಪಿ ನಾಯಕತ್ವವು ಪ್ರತಿತಂತ್ರ ರೂಪಿಸುತ್ತಿದೆ.

ಪಕ್ಷ ಬಯಸಿದರೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ, ವರಿಷ್ಠರ ತೀರ್ಮಾನಕ್ಕೆ ಬದ್ಧ: ಕೆ.ಎಸ್ ಈಶ್ವರಪ್ಪ
ಸಚಿವ ಸಂಪುಟ ವಿಸ್ತರಣೆ ಕುರಿತು ಯಾವುದೇ ಮಾಹಿತಿ ಇಲ್ಲ, ನಾನು ಪುನಃ ಮಂತ್ರಿಯಾಗ್ತೀನೋ ಇಲ್ಲವೋ ಗೊತ್ತಿಲ್ಲ. ಆದರೆ ನಾನು ಕಳಂಕ ರಹಿತನಾಗಿದ್ದೇನೆ ಎಂದು ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದ್ದಾರೆ.

ಚುನಾವಣೆಗೂ ಮುನ್ನ ಜಿಲ್ಲಾ ಉಸ್ತುವಾರಿ ಮಂತ್ರಿ ಅದಲು-ಬದಲು: ಬೊಮ್ಮಾಯಿ ಸಂಪುಟ ಸಚಿವರ ಅಸಮಾಧಾನ!
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ತಮ್ಮ ಸಂಪುಟದ ಇಬ್ಬರು ಸಚಿವರ ಉಸ್ತುವಾರಿ ಬದಲಾವಣೆ ಆದೇಶವನ್ನು ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಜಿಲ್ಲೆಗಳ ಹಂಚಿಕೆ ಕುರಿತು ಕೆಲವು ಸಚಿವರು ಅಸಮಾಧಾನವನ್ನು ಬಹಿರಂಗಪಡಿಸಿದ್ದಾರೆ

