Assembly polls

ಛತ್ತೀಸ್‌ಗಢದಿಂದ ಕಾಂಗ್ರೆಸ್ ನಿರ್ಗಮನಕ್ಕೆ ಕ್ಷಣಗಣನೆ ಆರಂಭ: ಪ್ರಧಾನಿ ಮೋದಿ
ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಸರ್ಕಾರದ ನಿರ್ಗಮನಕ್ಕೆ ಕ್ಷಣಗಣನೆ ಆರಂಭವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಪ್ರತಿಪಾದಿಸಿದ್ದಾರೆ. ಛತ್ತೀಸ್‌ಗಢದ ಮುಂಗೇಲಿಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ,ಮೊದಲ ಹಂತದ ಚುನಾವಣೆಯ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಂತ್ಯಗೊಳ್ಳಲಿದೆ ಎಂದು ಭವಿಷ್ಯ ನುಡಿದರು.

ಮಧ್ಯಪ್ರದೇಶ ಚುನಾವಣೆ: ಬಿಜೆಪಿ ಪ್ರಣಾಳಿಕೆ ಬಿಡುಗಡೆ, 450 ರೂ.ಗೆ ಎಲ್ ಪಿಜಿ ಸಿಲಿಂಡರ್ ಸೇರಿ ಹಲವು ಭರವಸೆ
ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಂತೆಯೇ, ಬಿಜೆಪಿ ಶನಿವಾರ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳಿಗೆ ರೂ. 450ಕ್ಕೆ ಎಲ್ ಪಿ ಜಿ ಸಿಲಿಂಡರ್, ಗೋಧಿಗೆ 2,700 ರೂ ಹಾಗೂ ಭತ್ತಕ್ಕೆ ರೂ. 3,100 ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ಹಲವು ಭರವಸೆಗಳನ್ನು ನೀಡಿದೆ.

ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಜನತೆ ನಿರ್ಧಾರ: ಡಿಸಿಎಂ ಡಿಕೆ ಶಿವಕುಮಾರ್
ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಜನತೆ ನಿರ್ಧರಿಸಿದ್ದಾರೆ ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಮಿಜೋರಾಂ ವಿಧಾನಸಭೆ ಚುನಾವಣೆ ಶಾಂತಿಯುತ: ಶೇ. 77 ರಷ್ಟು ಮತದಾನ
40 ಸದಸ್ಯ ಬಲದ ಮಿಜೋರಾಂ ವಿಧಾನಸಭೆ ಚುನಾವಣೆ ಮಂಗಳವಾರ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟು 8.57 ಲಕ್ಷ ಮತದಾರರಲ್ಲಿ ಶೇಕಡಾ 77 ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ ಎಂದು ಅಧಿಕಾರಿಗಳು...

ಛತ್ತೀಸ್‌ಗಢ ವಿಧಾನಸಭೆ ಚುನಾವಣೆಗೆ ಮತದಾನ: ಸುಕ್ಮಾದಲ್ಲಿ ಐಇಡಿ ಸ್ಫೋಟ; ಸಿಆರ್‌ಪಿಎಫ್ ಕಮಾಂಡೋಗೆ ಗಾಯ
ಛತ್ತೀಸ್‌ಗಢ ವಿಧಾನಸಭೆ ಚುನಾವಣೆಗೆ ಮೊದಲ ಹಂತದ ಮತದಾನ ಇಂದು ಬೆಳಿಗ್ಗೆ ಆರಂಭವಾಗಿದೆ. ಈ ನಡುವೆ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ನಡೆಸಿದ ಐಇಡಿ ಸ್ಫೋಟದಲ್ಲಿ ಓರ್ವ ಕೋಬ್ರಾ ಕಮಾಂಡೊ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಛತ್ತೀಸ್ ಗಢ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ವಿವಾಹಿತ ಮಹಿಳೆಯರಿಗೆ ವಾರ್ಷಿಕ 12,000 ರೂ. ಸೇರಿ ಹಲವು ಭರವಸೆ
ಮುಂಬರುವ ಛತ್ತೀಸ್ ಗಢ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿವಾಹಿತ ಮಹಿಳೆಯರಿಗೆ ವಾರ್ಷಿಕ 12,000 ರೂ. ಸೇರಿದಂತೆ ಹಲವು ಬರಪೂರ ಭರವಸೆಯ ಪ್ರಣಾಳಿಕೆಯನ್ನು ಬಿಜೆಪಿ ಶುಕ್ರವಾರ ಬಿಡುಗಡೆ ಮಾಡಿದೆ.

ನೋಟಾ ಆಯ್ಕೆ ರದ್ದುಗೊಳಿಸಬೇಕು: ಛತ್ತೀಸ್‌ಗಢ ಸಿಎಂ ಬಘೇಲ್
ಯಾವುದೇ ಅಭ್ಯರ್ಥಿಗೆ ಮತ ಚಲಾಯಿಸಲು ಒಲವು ತೋರದ ನಾಗರಿಕರಿಗೆ ವಿದ್ಯುನ್ಮಾನ ಮತಯಂತ್ರಗಳಲ್ಲಿನ ನೋಟಾ ಆಯ್ಕೆಯನ್ನು ರದ್ದುಗೊಳಿಸಬೇಕು ಎಂದು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹೇಳಿದ್ದಾರೆ.

ರಾಜಸ್ಥಾನ: ಕಾಂಗ್ರೆಸ್ ನಾಯಕ ಸುರೇಶ್ ಮಿಶ್ರಾ ಸೇರಿದಂತೆ 8 ಮಂದಿ ಬಿಜೆಪಿಗೆ ಸೇರ್ಪಡೆ
ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಕೆಲವು ತಿಂಗಳು ಬಾಕಿಯಿರುವಂತೆಯೇ ಕಾಂಗ್ರೆಸ್ ನಾಯಕ ಸುರೇಶ್ ಮಿಶ್ರಾ, ನಿವೃತ್ತ ಐಎಎಸ್ ಅಧಿಕಾರಿ ಅಂತರ್ ಸಿಂಗ್ ನೆಹ್ರಾ ಸೇರಿದಂತೆ 10 ಮಂದಿ ಸೋಮವಾರ ಬಿಜೆಪಿಗೆ ಸೇರ್ಪಡೆಯಾದರು.

ಮಿಜೋರಾಂ ವಿಧಾನಸಭೆ ಚುನಾವಣೆ: ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದ ಬಿಜೆಪಿ
ಮಿಜೋರಾಂನ 40 ಸ್ಥಾನಗಳ ವಿಧಾನಸಭೆಗೆ ನವೆಂಬರ್ 7ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಿಜೋರಾಂ ವಿಧಾನಸಭೆ ಚುನಾವಣೆಗೆ ಬಿಜೆಪಿಯು 13 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದೆ

