Assembly polls

ತೆಲಂಗಾಣ ಛತ್ತೀಸಗಢ, ಮಧ್ಯಪ್ರದೇಶ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ
ಮಧ್ಯಪ್ರದೇಶ, ಛತ್ತೀಸಗಢ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಭಾನುವಾರ ಪ್ರಕಟಿಸಿದೆ. ಮಧ್ಯಪ್ರದೇಶದ 144, ಛತ್ತೀಸ್‌ಗಡದ 30, ತೆಲಂಗಾಣದ 55 ಅಭ್ಯರ್ಥಿ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.

ಬಿಜೆಪಿ, ಮಿತ್ರಪಕ್ಷಗಳ ವಿದಾಯಕ್ಕೆ ಮುಹೂರ್ತ ಫಿಕ್ಸ್: ಪಂಚ ರಾಜ್ಯಗಳ ಚುನಾವಣೆ ವೇಳಾಪಟ್ಟಿ ಘೋಷಣೆಗೆ ಮಲ್ಲಿಕಾರ್ಜುನ ಖರ್ಗೆ
ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗವು ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಪಕ್ಷವು ತನ್ನ ಸಂಪೂರ್ಣ ಶಕ್ತಿಯೊಂದಿಗೆ ಜನರ ಬಳಿಗೆ ಹೋಗುತ್ತದೆ ಮತ್ತು ಸಾರ್ವಜನಿಕ ಕಲ್ಯಾಣ, ಸಾಮಾಜಿಕ ನ್ಯಾಯ ಮತ್ತು ಪ್ರಗತಿಪರ ಅಭಿವೃದ್ಧಿಯನ್ನು ಭರವಸೆಯಾಗಿ ನೀಡುತ್ತದೆ ಎಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ತಿಳಿಸಿದ್ದಾರೆ.

ಆಂಧ್ರ ಪ್ರದೇಶ ಚುನಾವಣೆ: ಟಿಡಿಪಿಯೊಂದಿಗೆ ಜನಸೇನಾ ಪಕ್ಷ ಮೈತ್ರಿ- ಪವನ್ ಕಲ್ಯಾಣ್
ಮುಂಬರುವ ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಟಿಡಿಪಿಯೊಂದಿಗೆ ಜನಸೇನಾ ಪಕ್ಷ ಮೈತ್ರಿ ಮಾಡಿಕೊಳ್ಳಲಿದೆ ಎಂದು ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ ಹೇಳಿದ್ದಾರೆ.

ಕರ್ನಾಟಕ ಗೆಲುವಿನ ನಂತರ ಇತರ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಸಜ್ಜು
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ನಂತರ ಕಾಂಗ್ರೆಸ್ ಈಗ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ಮಿಜೋರಾಂ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆಗೆ ತಯಾರಿ ಆರಂಭಿಸಿದೆ.

ರಾಜ್ಯ ವಿಧಾನಸಭಾ ಚುನಾವಣೆ; ನಾಳೆ ಸಂಜೆ ಬಹಿರಂಗ ಪ್ರಚಾರ ಅಂತ್ಯ, ಬಳಿಕ ಮನೆಮನೆಗೆ ತೆರಳಿ ಮತಯಾಚನೆ
ತೀವ್ರ ಜಿದ್ದಾಜಿದ್ದಿನ ಕಣವಾಗಿರುವ ರಾಜ್ಯ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಸೋಮಾರ ಸಂಜೆ 6ಕ್ಕೆ ತೆರೆ ಬೀಳಲಿದ್ದು, ಮತದಾನ ಮುಕ್ತಾಯದ 48 ಗಂಟೆಗೂ ಮೊದಲು ಚುನಾವಣಾ ಬಹಿರಂಗ ಪ್ರಚಾರ ಅಂತ್ಯವಾಗಲಿದೆ.

ಬೆಂಗಳೂರು ಸೇರಿ ಹಲವೆಡೆ ಲೋಕಾಯುಕ್ತ ದಾಳಿ: ಬಿಬಿಎಂಪಿ ಎಡಿಟಿಪಿ ಗಂಗಾಧರಯ್ಯ ಮನೆ ಮೇಲೆ ರೇಡ್, ದಾಖಲೆಗಳ ಪರಿಶೀಲನೆ
ಬೆಂಗಳೂರು ಸೇರಿದಂತೆ ರಾಜ್ಯದ ವಿವಿದೆಡೆ ಸೋಮವಾರ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ ಮಾಡಿದ್ದು, ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಕೆಲ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದೆ.

ವಿಧಾನಸಭೆ ಚುನಾವಣೆ': ತೀವ್ರ ಕುತೂಹಲ ಕೆರಳಿಸಿದ ಇಬ್ಬರು "ಪ್ರವೇಶ ನಿಷೇಧಿತ" ಅಭ್ಯರ್ಥಿಗಳು
ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಇಬ್ಬರು " ಪ್ರವೇಶ ನಿಷೇಧಿತ" ಅಭ್ಯರ್ಥಿಗಳಾದ ವಿನಯ್ ಕುಲಕರ್ಣಿ ಮತ್ತು ಜನಾರ್ದನ ರೆಡ್ಡಿ ಅವರ ಸ್ಪರ್ಧೆ ತೀವ್ರ ಕುತೂಹಲ ಕೆರಳಿಸಿದೆ.

ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಳಿಸಲು ಸಿಎಂ ಕಚೇರಿಯಿಂದಲೇ ಯತ್ನ: ಡಿ.ಕೆ ಶಿವಕುಮಾರ್ ಗಂಭೀರ ಆರೋಪ
ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಳಿಸಲು ಮತ್ತು ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಅನುಮೋದಿಸುವಂತೆ ಸಿಎಂ ಕಚೇರಿಯಿಂದಲೇ ಯತ್ನಗಳು ನಡೆಯುತ್ತಿದ್ದು, ಈ ಬಗ್ಗೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ವಿಧಾನಸಭಾ ಚುನಾವಣೆ: ಮತದಾರರ ನಾಡಿಮಿಡಿತ ಅರಿಯಲು ಸರಣಿ ಸಭೆ ನಡೆಸಿದ ಸಿದ್ದರಾಮಯ್ಯ!
ವರುಣಾ ವಿಧಾನಸಭಾ ಕ್ಷೇತ್ರದ ರಾಜಕೀಯ ಜೋರಾಗಿದ್ದು, ಸಿದ್ದರಾಮಯ್ಯ ಮತ್ತು ವಿ ಸೋಮಣ್ಣ ಇಬ್ಬರ ಸ್ಪರ್ಧೆಯಿಂದ ಕದನ ಕಣದ ಕಾವು ಜೋರಿದೆ.

