assembly session

ಕಲಾಪವೆಂದರೆ ಮೈ ಬೆಚ್ಚಗಾಗುತ್ತಾ? 'ನಕಲಿ ಸರ್ಟಿಫಿಕೇಟ್ ಶೂರʼ ನನ್ನನ್ನು ಹುಡುಕುತ್ತಿದ್ದಾರೆ, ನಿಮ್ಮ ಕಂಪನಿಗಳ ಕಥೆ ಬಿಚ್ಚಬೇಕೆ ಡೀಲ್ ಅಶ್ವತ್ಥನಾರಾಯಣ?
ನಕಲಿ ಸರ್ಟಿಫಿಕೇಟ್ ರಾಜʼನಕಲಿ ಸರ್ಟಿಫಿಕೇಟ್ ಶೂರʼ ನನ್ನನ್ನು ಹುಡುಕುತ್ತಿದ್ದಾರೆ! ಎಲ್ಲಿದ್ಯಪ್ಪ ಕುಮಾರಸ್ವಾಮಿ? ಎಂದು ಕೇಳಿದ್ದಾರೆ. ಸದನದಲ್ಲೂ ಕಾಣಿಸಿಲ್ಲವಂತೆ, ರಾಮನಗರದಲ್ಲೂ ಕಂಡಿಲ್ಲವಂತೆ, ಕಣ್ಣಿಗೆ ಕಾಮಾಲೆಯಾದರೂ ಬಂದಿರಬೇಕು,
ಸೇನೆಯಲ್ಲಿ ಪೇಟ ತೊಡಬಹುದಾದರೆ ಶಾಲೆಯಲ್ಲಿ ಹಿಜಾಬ್ ಯಾಕೆ ಬೇಡ?: ವಕೀಲರು
ಶಾಲೆಗಳಲ್ಲಿ ಹಿಜಾಬ್ ಧರಿಸುವ ಸಂಬಂಧದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮುಂದುವರೆಸಿದೆ. ಹಿರಿಯ ಸಾಹಿತಿ ಚೆನ್ನವೀರ ಕಣವಿ (93) ಇಂದು ವಿಧಿವಶ.
ಶಾಲೆ ಬಿಡ್ತೀವಿ ಹಿಜಾಬ್ ಬಿಡಲ್ಲ ಎಂದ ವಿದ್ಯಾರ್ಥಿನಿಯರು, ಅಧಿವೇಶನ ಆರಂಭ, ಈಶ್ವರಪ್ಪ ಹೇಳಿಕೆಗೆ ಖಂಡನೆ, ಕಪ್ಪು ಪಟ್ಟಿ ಧರಿಸಿ ಕಾಂಗ್ರೆಸ್ ಪ್ರತಿಭಟನೆ
ಹಿಜಾಬ್ ವಿವಾದದ ನಂತರ ಇಂದಿನಿಂದ ಶಾಲೆಗಳು ಪುನಾರಂಭಗೊಂಡಿವೆ. ಹೈಕೋರ್ಟ್ ಸೂಚನೆಯನ್ನೂ ಮೀರಿ ಕೆಲವೆಡೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರು ಅಷ್ಟೇ ಅಲ್ಲದೇ ಶಾಲೆ ಬಿಡ್ತೀವಿ ಹಿಜಾಬ್ ಬಿಡಲ್ಲ ಎಂದು ಪರೀಕ್ಷೆ ಬರೆಯದೇ ಹೊರನಡೆದಿದ್ದಾರೆ.

ಬೆಳಗಾವಿ: ಅಧಿವೇಶನಕ್ಕೆ ಆಗಮಿಸಿರುವವರಿಗೆ 2 ಡೋಸ್ ಲಸಿಕೆ, ಆರ್'ಟಿ-ಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ!
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ಆಗಮಿಸುವವರಿಗೆ ಎರಡು ಡೋಸ್ ಕೋವಿಡ್ ಲಸಿಕೆ ಪಡೆದಿರುವುದು ಹಾಗೂ 72 ಗಂಟೆಯೊಳಗಿನ ಆರ್'ಟಿ-ಪಿಸಿಆರ್ ನೆಗೆಟಿವ್ ಕಡ್ಡಾಯಗೊಳಿಸಲಾಗಿದೆ.

ಡಿಸೆಂಬರ್ 13-24 ರವರೆಗೆ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ವಿಧಾನಸಭೆ ಅಧಿವೇಶನ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ
ಡಿಸೆಂಬರ್ 13 ರಿಂದ 24ರವರೆಗೆ ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನಸಭಾ ಅಧಿವೇಶನ ನಡೆಯಲಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ವಿಧಾನಸಭೆ ಅಧಿವೇಶನದ ನಂತರ ಮೈಷುಗರ್ ಸಕ್ಕರೆ ಕಾರ್ಖಾನೆ ಕುರಿತು ನಿರ್ಧಾರ: ಸಚಿವ ಮುರುಗೇಶ್ ನಿರಾಣಿ
ಮಂಡ್ಯದ ಮೈಷುಗರ್ ಸಕ್ಕರೆ ಕಾರ್ಖಾನೆಯನ್ನು ಸರ್ಕಾರವೇ ನಡೆಸಬೇಕೆ ಅಥವಾ ಖಾಸಗಿಗೆ ವಹಿಸಬೇಕೆ ಎಂಬ ಬಗ್ಗೆ ವಿಧಾನ ಮಂಡಲ ಅಧಿವೇಶನ ಮುಗಿದ ಬಳಿಕ ನಿರ್ಧಾರ ತೆಗೆದುಕೊಳ್ಳುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿಯವರು ಮಂಗಳವಾರ ಹೇಳಿದ್ದಾರೆ.

ಅಗಲಿದ ಗಣ್ಯರಿಗೆ ಸಂತಾಪ, ಕಲಾಪ ನಾಳೆಗೆ ಮುಂದೂಡಿಕೆ
ಇತ್ತೀಚಿಗೆ ಅಗಲಿದ ಗಣ್ಯರಿಗೆ ವಿಧಾನಸಭೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿ ನಂತರ ಕಲಾಪವನ್ನು ನಾಳೆಗೆ ಮುಂದೂಡಲಾಯಿತು.

ವಿಧಾನಸಭೆ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳನ್ನು ಕಾಂಗ್ರೆಸ್ ಎತ್ತಿ ತೋರಿಸಲಿದೆ: ಸಿದ್ದರಾಮಯ್ಯ
10 ದಿನಗಳ ವಿಧಾನಮಂಡಲ ಅಧಿವೇಶನ ಸೋಮವಾರದಿಂದ ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ, ಕಾನೂನು ಸುವ್ಯವಸ್ಥೆ ಕುಸಿತ, ಕೋವಿಡ್ ನಿರ್ವಹಣೆಯಲ್ಲಿ ವಿಫಲತೆ, ರಾಷ್ಟ್ರೀಯ ಶಿಕ್ಷಣ ನೀತಿ ಸೇರಿದಂತೆ ಹಲವು ವಿಚಾರಗಳ ಹಿಡಿದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್ ತಂತ್ರ ರೂಪಿಸುತ್ತಿದೆ.

ಬೆಲೆ ಏರಿಕೆ, ಕಾನೂನು ಸುವ್ಯವಸ್ಥೆ ಕುಸಿತ ವಿಚಾರ ಹಿಡಿದು ಸದನದಲ್ಲಿ ಬಿಜೆಪಿ ಹಣಿಯಲು ಕಾಂಗ್ರೆಸ್ ತಂತ್ರ!
ಜನರನ್ನು ತತ್ತರಿಗೊಳಿಸಿರುವ ಬೆಲೆ ಏರಿಕೆ, ಕುಸಿದಿರುವ ಕಾನೂನು ಸುವ್ಯವಸ್ಥೆ ಹಾಗೂ ತರಾತುರಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಸೇರಿದಂತೆ ಹಲವು ವಿಚಾರಗಳನ್ನು ಅಸ್ತ್ರವಾಗಿಟ್ಟುಕೊಂಡು ಸೆ.13ರಿಂದ ಆರಂಭವಾಗುವ ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ಹೋರಾಟ ನಡೆಸಲು ಪ್ರತಿಪಕ್ಷ ಕಾಂಗ್ರೆಸ್ ನಿರ್ಧರಿಸಿದೆ.

