assembly

ವಿಧಾನಸೌಧ, ಶಾಸಕರ ಭವನ, ಕುಮಾರಕೃಪಾದಲ್ಲಿ ವರ್ಗಾವಣೆ ದಂಧೆ: ಮೇಲಧಿಕಾರಿಗಳಿಂದ ಹಫ್ತಾ ವಸೂಲಿಗೆ ಕಿರುಕುಳ; ಪೇದೆ ಆತ್ಮಹತ್ಯೆ ಯತ್ನ!
ವರ್ಗಾವಣೆ ದಂಧೆ ತಾರಕಕ್ಕೇರಿದೆ. ಶಾಸಕರ ಭವನ, ಕುಮಾರಕೃಪಾ ಮತ್ತು ಇತರ ಕಡೆಗಳಲ್ಲಿ ಹಗಲು ರಾತ್ರಿ ಎನ್ನದೇ ವರ್ಗಾವಣೆ ಮಾಡಿಸಿಕೊಳ್ಳಲು ಜನಜಂಗುಳಿ ಇರುತ್ತದೆ. ಕೇವಲ ಒಂದು ತಿಂಗಳಲ್ಲೇ ಸಿದ್ದರಾಮಯ್ಯ ಸರ್ಕಾರ ಅಪಖ್ಯಾತಿಗೆ ಒಳಗಾಗಿದೆ.

ವಿಧಾನಸಭೆಯಲ್ಲಿ ಬಜೆಟ್ ಮಂಡನೆ ವೇಳೆ ಭದ್ರತಾ ಲೋಪ: ಶಾಸಕರ ಕುರ್ಚಿಯಲ್ಲಿ ಅನಾಮಿಕ ವ್ಯಕ್ತಿ!
ಸಿಎಂ ಸಿದ್ದರಾಮಯ್ಯ ಅವರ 14ನೇ ಬಜೆಟ್ ಮಂಡನೆ ವೇಳೆ ವಿಧಾನಸಭೆಯಲ್ಲಿ ಭದ್ರತಾ ಲೋಪವಾಗಿರುವುದು ಇದೀಗ ಬೆಳಕಿಗೆ ಬಂದಿದೆ. ಇಂದು ವಿಧಾನಸಭೆ ಪ್ರವೇಶ ಮಾಡಿರುವ ಅನಾಮಿಕ ವ್ಯಕ್ತಿ ಸುಮಾರು ಹದಿನೈದು ನಿಮಿಷಗಳ ಕಾಲ ಸದನದಲ್ಲಿ ಕುಳಿತುಕೊಂಡಿದ್ದಾರೆ.

ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ, ಬರ ಪರಿಸ್ಥಿತಿ ಕುರಿತು ವಿಧಾನಸಭೆಯಲ್ಲಿ ಚರ್ಚೆ
ರಾಜ್ಯದ ಕೆಲವು ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಮತ್ತು ಬರಗಾಲದ ಬಗ್ಗೆ ಗುರುವಾರ ವಿಧಾನಸಭೆಯಲ್ಲಿ ಶಾಸಕರು ಪಕ್ಷಾತೀತವಾಗಿ ಪ್ರಸ್ತಾಪಿಸಿದರು. ರಾಜ್ಯವನ್ನು ಬರಪೀಡಿತ ಎಂದು ರಾಜ್ಯ ಸರ್ಕಾರ ಘೋಷಿಸಬೇಕು ಎಂದು ಒತ್ತಾಯಿಸಿದರು.

ಸ್ಪೀಕರ್ ಒಪ್ಪಿದರೆ ಸದನದಲ್ಲೇ ಪೆನ್ಡ್ರೈವ್ ಪ್ರದರ್ಶನ, ಇಲ್ಲೇ ಆಡಿಯೋ ಹಾಕಿಸುತ್ತೇನೆ: ಎಚ್ಡಿ ಕುಮಾರಸ್ವಾಮಿ
ರಾಜ್ಯ ಸರ್ಕಾರದ ಭ್ರಷ್ಟಾಚಾರದ ಪುರಾವೆ ಇರುವ ಪೆನ್ ಡ್ರೈವ್ ತಮ್ಮ ಜೇಬಿನಲ್ಲಿದೆ ಎಂದಿದ್ದ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಸ್ಪೀಕರ್ ಯುಟಿ ಖಾದರ್ ಅವರು ಒಪ್ಪಿದರೆ ಸದನದಲ್ಲೇ ಪೆನ್ಡ್ರೈವ್...

ವಿಧಾನಸಭೆ ಉಪಸಭಾಧ್ಯಕ್ಷರಾಗಿ ರುದ್ರಪ್ಪ ಲಮಾಣಿ ಅವಿರೋಧವಾಗಿ ಆಯ್ಕೆ
ವಿಧಾನಸಭೆಯ 25ನೇ ಉಪಸಭಾಧ್ಯಕ್ಷರಾಗಿ ರುದ್ರಪ್ಪ ಮಾನಪ್ಪ ಲಮಾಣಿ, ಗುರುವಾರ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾದರು.

ವಿಧಾನಸಭೆ ಕಲಾಪದಲ್ಲಿ ಮಾಧ್ಯಮ ನಿರ್ಬಂಧ ಮುಂದುವರಿಕೆ ಸಾಧ್ಯತೆ!
ಬಿಜೆಪಿ ಸರ್ಕಾರದ ಅವಧಿಯಲ್ಲಿದ್ದ ಜಾರಿಯಾಗಿದ್ದ ವಿಧಾನಸಭೆ ಕಲಾಪದ ನಡಾವಳಿಗಳನ್ನು ಮಾಧ್ಯಮಗಳು ವಿಡಿಯೊ ಮತ್ತು ಛಾಯಾ ಚಿತ್ರ ತೆಗೆಯಲು ನಿರ್ಬಂಧ ಮುಂದುವರಿಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಪುಟ್ಟರಂಗಶೆಟ್ಟಿ ಯೂ ಟರ್ನ್: ಕಾಂಗ್ರೆಸ್ ವರಿಷ್ಠರ ಸೂಚನೆ ಮೇರೆಗೆ ಉಪಸಭಾಧ್ಯಕ್ಷ ಸ್ಥಾನಕ್ಕೆ ಒಪ್ಪಿಗೆ
ಕಾಂಗ್ರೆಸ್ ಹೈಕಮಾಂಡ್ ಮತ್ತು ಸಿದ್ದರಾಮಯ್ಯನಯವರ ಸೂಚನೆ ಮೇರೆಗೆ ಉಪಸಭಾಧ್ಯಕ್ಷ ಸ್ಥಾನ ಒಪ್ಪಿಕೊಂಡಿದ್ದೇನೆ ಎಂದು ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುರುವಾರ ಹೇಳಿದರು.

ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ, ಕಟ್ಟು ನಿಟ್ಟಾಗಿ ತಟಸ್ಥನಾಗಿರುವೆ: ಯು.ಟಿ ಖಾದರ್ (ಸಂದರ್ಶನ)
ಐದು ಬಾರಿ ಶಾಸಕರಾಗಿರುವ ಯು.ಟಿ ಖಾದರ್ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹುದ್ದೆಯನ್ನು ಅಲಂಕರಿಸಿದ ಮೊದಲ ಮುಸ್ಲಿಂ ಸಮುದಾಯದ ಸದಸ್ಯರಾಗಿದ್ದಾರೆ.

ರಾಜಕೀಯ ಜೀವನ ಅಂತ್ಯವಾಗುವ ಆತಂಕ; ಸ್ಪೀಕರ್ ಹುದ್ದೆಗೆ ಮುಂದೆ ಬಾರದ ನಾಯಕರು, ಕಾಂಗ್ರೆಸ್ಸಿಗರನ್ನು ಕಾಡುತ್ತಿದೆ ಅದೊಂದು ಭಯ!
ಕರ್ನಾಟಕದ ಹಿರಿಯ ಕಾಂಗ್ರೆಸ್ ನಾಯಕರು ತಮಗೆ ನೀಡಲಾಗುತ್ತಿರುವ ಸ್ಪೀಕರ್ ಸ್ಥಾನದ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಸಿದ್ಧರಿಲ್ಲ. ಬಹುತೇಕ ಎಲ್ಲಾ ನಾಯಕರಿಗೆ ಸ್ಪೀಕರ್ ಹುದ್ದೆಯು ದುರದೃಷ್ಟವನ್ನು ತರುವ ಹುದ್ದೆಯಾಗಲಿದೆ ಎನ್ನುವ ಭಯ ಕಾಡುತ್ತಿದೆ ಎಂದು ಮೂಲಗಳು ತಿಳಿಸಿವೆ.

