assembly

ನಿರ್ವಹಣೆ ಕೊರತೆ; ರಾಜ್ಯದಲ್ಲಿನ ಬಹುತೇಕ ಶೌಚಾಲಯಗಳು ಬಳಕೆಗೆ ಯೋಗ್ಯವಾಗಿಲ್ಲ: ಸಿಎಂ ಬೊಮ್ಮಾಯಿ
ನಿರ್ವಹಣೆ ಕೊರತೆಯಿಂದ ರಾಜ್ಯದಲ್ಲಿ ಹಲವು ಸಾರ್ವಜನಿಕ ಶೌಚಾಲಯಗಳು ಬಳಕೆಗೆ ಯೋಗ್ಯವಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದರು.

ಧಮ್ಮಿದ್ರೆ, ತಾಕತ್ತಿದ್ದರೆ ನನ್ನನ್ನು ಮುಗಿಸಿ, ಹೊಡೆದು ಹಾಕಿ; ಕೊಲೆ ಮಾಡುವಂತೆ ಯಾವ ಧರ್ಮವೂ ಹೇಳಲ್ಲ: ಗೃಹ ಸಚಿವಗೆ ಸಿದ್ದರಾಮಯ್ಯ ಸವಾಲು
ಧಮ್ಮಿದ್ರೆ, ತಾಕತ್ತಿದ್ದರೆ ನನ್ನನ್ನು ಮುಗಿಸಿ, ಹೊಡೆದು ಹಾಕಿ ಎಂದು ಸದನದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರಗೆ ಮಾಜಿ ಸಿಎಂ ಸಿದ್ದರಾಮಯ್ಯ ಸವಾಲೆಸೆದಿದ್ದಾರೆ.

ಕೆಂಪಣ್ಣ ಆಯೋಗ ರಚಿಸಿ ವರದಿ ಪಡೆದರೂ ವಿಧಾನಮಂಡಲದಲ್ಲೇಕೆ ಮಂಡಿಸಲಿಲ್ಲ: ಸಿದ್ದರಾಮಯ್ಯಗೆ ಜಗದೀಶ್ ಶೆಟ್ಟರ್ ತಿರುಗೇಟು
ಅರ್ಕಾವತಿ ಡಿನೋಟಿಫಿಕೇಷನ್ ವಿಚಾರ ಸೋಮವಾರ ವಿಧಾನಸಭೆಯಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ಸರ್ಕಾರದ ವಿರುದ್ಧ ಹರಿಹಾಯುತ್ತಿದ್ದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ನ್ಯಾಯಮೂರ್ತಿ ಕೆಂಪಣ್ಣ ಆಯೋಗದ ವರದಿ ಕೈಸಿದ್ದರೂ ಅದನ್ನು ವಿಧಾನಮಂಡಲದಲ್ಲಿ ಏಕೆ ಮಂಡಿಸಲಿಲ್ಲ...

ಕಲ್ಲು ಗಣಿಗಾರಿಕೆಗೆ ಶೀಘ್ರವೇ ಎನ್ ಒಸಿ; ವಾಣಿಜ್ಯ ಉದ್ದೇಶಗಳಿಗಾಗಿ ಭೂಪರಿವರ್ತನೆ ನಿಯಮ ಸರಳ: ಆರ್.ಅಶೋಕ್
ರಾಜ್ಯದಲ್ಲಿ ಕಲ್ಲುಗಣಿಗಾರಿಕೆಗೆ ಎನ್‌ಒಸಿ ಕೋರಿ 188 ಅರ್ಜಿಗಳು ಬಾಕಿ ಉಳಿದಿದ್ದು, ಶೀಘ್ರ ಇತ್ಯರ್ಥಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

ವಿಐಎಸ್ಎಲ್ ನಮ್ಮ ಪ್ರತಿಷ್ಠೆ, ನಾವು ಅದನ್ನು ಉಳಿಸಬೇಕು: ಸದನದಲ್ಲಿ ಶಾಸಕರ ಒಕ್ಕೊರಲ ಬೇಡಿಕೆ
ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಸ್ಥಾವರ (ವಿಐಎಸ್‌ಎಲ್) ಮುಚ್ಚುವುದನ್ನು ತಡೆಯಲು ರಾಜ್ಯ ಸರ್ಕಾರ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಶಾಸಕರು ಬುಧವಾರ ಪಕ್ಷಾತೀತವಾಗಿ ಒತ್ತಾಯಿಸಿದರು.

ನಾಳೆಯಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ, ಎಲ್ಲರೂ ಕಡ್ಡಾಯವಾಗಿ ಭಾಗವಹಿಸಿ: ಶಾಸಕರಿಗೆ ಸ್ಪೀಕರ್ ಕಾಗೇರಿ ಮನವಿ
ರಾಜ್ಯದಲ್ಲಿ ಬಜೆಟ್ ಮಂಡನೆ ಇರುವುದರಿಂದ ಶುಕ್ರವಾರ (ಫೆ. 10)ದಿಂದ ಅಧಿವೇಶನ ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅಧಿವೇಶನದಲ್ಲಿ ಎಲ್ಲರೂ ಕಡ್ಡಾಯವಾಗಿ ಭಾಗವಹಿಸಬೇಕೆಂದು ಶಾಸಕರಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಗುರುವಾರ ಮನವಿ ಮಾಡಿಕೊಂಡಿದ್ದಾರೆ.

ಮಹಾರಾಷ್ಟ್ರ: ಪ್ರಿಸೈಡಿಂಗ್ ಆಫೀಸರ್ ಜೊತೆ ಅನುಚಿತ ವರ್ತನೆ; 12 ಬಿಜೆಪಿ ಶಾಸಕರಿಗೆ ಒಂದು ವರ್ಷ ಅಮಾನತು ಶಿಕ್ಷೆ!
ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್ ಕಚೇರಿಯಲ್ಲಿ ಪ್ರಿಸೈಂಡಿಂಗ್ ಆಫೀಸರ್ ಭಾಸ್ಕರ್ ಜಾದವ್ ಜೊತೆಗೆ ಅನುಚಿತವಾಗಿ ವರ್ತಿಸಿದ 12 ಬಿಜೆಪಿ ಶಾಸಕರನ್ನು ಒಂದು ವರ್ಷದವರೆಗೂ ಸೋಮವಾರ ಅಮಾನತು ಮಾಡಲಾಗಿದೆ.

ವಿಶೇಷ ಹೂಡಿಕೆ ಪ್ರದೇಶ ಮಸೂದೆಗೆ ವಿಧಾನಸಭೆಯಲ್ಲಿ ಅಂಗೀಕಾರ
ರಾಜ್ಯದಲ್ಲಿ ಕೈಗಾರಿಕೋದ್ಯಮಿಗಳು ಮತ್ತು ಹೂಡಿಕೆದಾರರಿಗೆ ಹಾದಿ ಸುಗಮ ಮಾಡಿಕೊಡಲು ಹಾಗೂ ಕೈಗಾರಿಕಾ ಸ್ಥಾಪನೆಗೆ ಎದುರಾಗುವ ತಾಂತ್ರಿಕ, ಕಾನೂನಾತ್ಮಕ ಅಡೆತಡೆಗಳಿಗೆ ಪರಿಹಾರ ಕಂಡುಕೊಳ್ಳಲು ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ಮಸೂದೆ-2022 ಅನ್ನು ಮಂಗಳವಾರ ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು.

ಮಂಗಳೂರು ಸ್ಫೋಟ ಪ್ರಕರಣ: ವಿಧಾನಸಭೆಯಲ್ಲಿ ಸಿಟಿ ರವಿ-ಡಿಕೆ ಶಿವಕುಮಾರ್ ನಡುವೆ ಮಾತಿನ ಚಕಮಕಿ
ಮಂಗಳೂರನಲ್ಲಿ ಸಂಭವಿಸಿದ ಕುಕ್ಕಲ್ ಸ್ಫೋಟ ಪ್ರಕರಣವು ಮಂಗಳವಾರ ಸದನದಲ್ಲಿ ಪ್ರತಿಧ್ವನಿಸಿದ್ದು, ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ನಡುವೆ ಮಾತಿನ ಸಮರಕ್ಕೆ ಕಾರಣವಾಗಿತ್ತು.

