ದೇಶನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್ ಕುಂದ್ರಾಗೆ ಸೇರಿದ 98 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ
ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ರಾಜ್ ಕುಂದ್ರಾ ಅವರ ಪುಣೆಯ ಬಂಗಲೆ ಮತ್ತು ಈಕ್ವಿಟಿ ಷೇರುಗಳು ಸೇರಿದಂತೆ 98 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಗುರುವಾರ ತಿಳಿಸಿದೆ.