ATS

ಪುಣೆ ಸ್ಫೋಟ ಪ್ರಕರಣ: ಭಟ್ಕಳದ ಯುವಕನ ಮನೆಗೆ ನೋಟಿಸ್ ಅಂಟಿಸಿದ ಮಹಾರಾಷ್ಟ್ರ ATS!
ಮಹಾರಾಷ್ಟ್ರದ ಪುಣೆಯಲ್ಲಿ ನಡೆಸಿದ ಉಗ್ರ ಚಟುವಟಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಭಟ್ಕಳ ನವಾಯತ ಕಾಲೋನಿಯ ಯುವಕನಿಗೆ ವಿಚಾರಣೆಗೆ ಹಾಜರಾಗುವಂತೆ ಮುಂಬೈ ಎಟಿಎಸ್ ತಂಡ ಆತನ ಮನೆಗೆ ನೋಟೀಸ್ ಅಂಟಿಸಿದೆ ಎಂದು ತಿಳಿದುಬಂದಿದೆ.

ಅಯೋಧ್ಯೆ ಮೇಲೆ ಉಗ್ರರ ಕರಿನೆರಳು: 3 ಅನುಮಾನಾಸ್ಪದ ವ್ಯಕ್ತಿಗಳ ಬಂಧನ
ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆಗೆ ಸಿದ್ಧತೆಗಳು ಭರದಿಂದ ಸಾಗಿದ್ದು, ಈ ನಡುವಲ್ಲೇ ಭಯೋತ್ಪಾದಕ ನಿಗ್ರಹ ದಳ ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ಬಂಧನಕ್ಕೊಳಪಡಿಸಿದೆ ಎಂದು ಶುಕ್ರವಾರ ತಿಳಿದುಬಂದಿದೆ.

ಡಿಆರ್ ಡಿಒ ಬೇಹುಗಾರಿಕೆ ಪ್ರಕರಣ: ಮಹಿಳಾ ಪಾಕ್ ಏಜೆಂಟ್ ನ್ನು ಆರೋಪಿಯನ್ನಾಗಿಸಿದ ಎಟಿಎಸ್
ಡಿಆರ್ ಡಿಒ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ ಮಹಿಳಾ ಪಾಕ್ ಏಜೆಂಟ್ ಳನ್ನು ಆರೋಪಿಯನ್ನಾಗಿಸಿದೆ.

ಗುಜರಾತ್: ಅಂತರಾಷ್ಟ್ರೀಯ ಉಗ್ರ ಸಂಘಟನೆಗಳೊಂದಿಗೆ ನಂಟು, ಎಟಿಎಸ್ ನಿಂದ ನಾಲ್ವರ ಬಂಧನ
ಅಂತರರಾಷ್ಟ್ರೀಯ ಭಯೋತ್ಪಾದಕ ಸಂಘಟನೆಯೊಂದಿಗೆ ನಂಟು ಹೊಂದಿದ್ದ ವಿದೇಶಿ ಪ್ರಜೆ ಸೇರಿದಂತೆ ನಾಲ್ವರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್)ದ ಅಧಿಕಾರಿಗಳು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ.

ಗುಜರಾತ್: ಪಾಕಿಸ್ತಾನದ ದೋಣಿಯಿಂದ 360 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ವಶ
ಕರಾವಳಿ ಪಡೆ ಮತ್ತು ಗುಜರಾತ್ ಭಯೋತ್ಪಾದನಾ ನಿಗ್ರಹ ದಳವು ರಾಜ್ಯದ ಕರಾವಳಿಯಲ್ಲಿ ಪಾಕಿಸ್ತಾನದ ದೋಣಿಯಿಂದ 360 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ಅನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ದೇಶದಾದ್ಯಂತ ಪಿಎಫ್‌ಐ ಸಂಘಟನೆ ಮೇಲೆ ಮತ್ತೆ ದಾಳಿ: 100ಕ್ಕೂ ಅಧಿಕ ಮಂದಿ ವಶಕ್ಕೆ
ದೇಶದಾದ್ಯಂತ ಪಿಎಫ್‌ಐ ಸಂಘಟನೆ ಮೇಲೆ ಮತ್ತೆ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ದಾಳಿ ನಡೆಸಿದ್ದು, ನೂರಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಗುಜರಾತ್ ಭಯೋತ್ಪಾದನಾ ನಿಗ್ರಹ ದಳದಿಂದ ಸಾಮಾಜಿಕ ಕಾರ್ಯಕರ್ತೆ ತೀಸ್ಟಾ ಸೆಟಲ್ವಾಡ್ ಬಂಧನ
ಸಾಮಾಜಿಕ ಕಾರ್ಯಕರ್ತೆ ತೀಸ್ಟಾ ಸೆಟಲ್ವಾಡ್ ಅವರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಶನಿವಾರ ಬಂಧಿಸಿದೆ.

ಗುಜರಾತ್: 250 ಕೋಟಿ ರೂ. ಮೌಲ್ಯದ ಡ್ರಗ್ಸ್ ನೊಂದಿಗೆ ಇರಾನಿಯನ್ ಬೋಟ್ ಎಟಿಎಸ್ ವಶಕ್ಕೆ
ಗುಜರಾತ್ ಕರಾವಳಿ ಗಾರ್ಡ್ ಮತ್ತು ರಾಜ್ಯ ಭಯೋತ್ಪಾದನಾ ನಿಗ್ರಹ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯೊಂದರಲ್ಲಿ ಗುಜರಾತ್ ಕರಾವಳಿಯ ಭಾರತೀಯ ಸಮುದ್ರದಲ್ಲಿ ಏಳು ಸಿಬ್ಬಂದಿ ಮತ್ತು ಭಾರೀ ಪ್ರಮಾಣದ ಹೆರಾಯಿನ್ ಹೊಂದಿದ್ದ ಇರಾನಿಯನ್ ದೋಣಿಯೊಂದನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಗುಜರಾತ್: ನಕಲಿ ಪಾಸ್‌ಪೋರ್ಟ್, ವೀಸಾ ಬಳಸಿ ಜನರನ್ನು ವಿದೇಶಕ್ಕೆ ಕಳುಹಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಎಟಿಎಸ್
ನಕಲಿ ಪಾಸ್‌ಪೋರ್ಟ್ ಮತ್ತು ವೀಸಾ ಸೃಷ್ಟಿಸಿ ಹಲವಾರು ಜನರನ್ನು ವಿದೇಶಕ್ಕೆ ಕಳುಹಿಸಿದ ಆರೋಪದ ಮೇಲೆ 45 ವರ್ಷದ ವ್ಯಕ್ತಿಯನ್ನು ಸೂರತ್ ನಲ್ಲಿ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್) ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

