attack

ವಾಯುನೆಲೆಯಲ್ಲಿ ಡ್ರೋಣ್ ಸ್ಫೋಟ ಪ್ರಕರಣ: ಎನ್‌ಎಸ್‌ಜಿಯ ವಿಶೇಷ ಬಾಂಬ್ ತಪಾಸಣಾ ತಂಡದಿಂದ ತನಿಖೆ ಆರಂಭ
ಭಾರತೀಯ ವಾಯುಪಡೆ ಕೇಂದ್ರದ ಮೇಲಿನ ಡ್ರೋಣ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ರಾಷ್ಟ್ರೀಯ ಭದ್ರತಾ ಸಿಬ್ಬಂದಿಯ (ಎನ್ ಎಸ್ ಜಿ) ವಿಶೇಷ ಬಾಂಬ್ ತಪಾಸಣಾ ತಂಡ ತನಿಖೆ ಆರಂಭಿಸಿದೆ ಎಂದು ಮೂಲಗಳಿಂದ ಮಂಗಳವಾರ ತಿಳಿದುಬಂದಿದೆ.

ಉಗ್ರರ ಮತ್ತೊಂದು ಸಂಚು ವಿಫಲ: ಸೇನಾ ಕೇಂದ್ರದ ಬಳಿ ಡ್ರೋಣ್ ಪತ್ತೆ, ಭದ್ರತಾ ಪಡೆಗಳಿಂದ ಗುಂಡಿನ ದಾಳಿ
ಮತ್ತೊಮ್ಮೆ ಡ್ರೋಣ್ ದಾಳಿಗೆ ಮುಂದಾಗಿದ್ದ ಉಗ್ರರ ಸಂಚನ್ನು ಭಾರತೀಯ ಸೇನಾಪಡೆ ಸೋಮವಾರ ವಿಫಲಗೊಳ್ಳುವಂತೆ ಮಾಡಿದೆ. ಸೇನಾ ಕೇಂದ್ರದ ಬಳಿ ಪತ್ತೆಯಾದ ಡ್ರೋಣ್'ವೊಂದರ ಮೇಲೆ ಭಾರತೀಯ ಸೇನಾಪಡೆ ಗುಂಡಿನ ದಾಳಿ ನಡೆಸಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಜಮ್ಮು-ಕಾಶ್ಮೀರ: ಮನೆಗೆ ನುಗ್ಗಿ ಮಾಜಿ ಪೊಲೀಸ್ ವಿಶೇಷಾಧಿಕಾರಿ, ಪತ್ನಿ, ಪುತ್ರಿ ಹತ್ಯೆಗೈದ ಉಗ್ರರು!
ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಮಾಜಿ ಪೊಲೀಸ್ ವಿಶೇಷಾಧಿಕಾರಿಯೊಬ್ಬರ ಮನೆಗೆ ನುಗ್ಗಿದ ಉಗ್ರರು, ಅಧಿಕಾರಿ ಮತ್ತು ಅವರ ಪತ್ನಿ, ಪುತ್ರಿಯನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ.

ಮಡಿಕೇರಿ ಆರ್ಮಿ ಕ್ಯಾಂಟೀನ್ ಹೊರಗೆ ಗ್ರಾಹಕರ ಸಾಲು: ವರದಿ ಮಾಡಲು ತೆರಳಿದ್ದ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿಗಾರ್ತಿ ಮೇಲೆ ಹಲ್ಲೆ ಆರೋಪ
ಮಡಿಕೇರಿಯ ಆರ್ಮಿ ಕ್ಯಾಂಟೀನ್ ಎದುರು ಸಾಮಾನುಗಳ ಖರೀದಿಗೆ ಗ್ರಾಹಕರ ಉದ್ದದ ಸಾಲನ್ನು ಕಂಡು ಅದನ್ನು ವರದಿ ಮಾಡಲು ಸ್ಥಳಕ್ಕೆ ತೆರಳಿದ್ದ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ವರದಿಗಾರ್ತಿ ಮೇಲೆ ಹಲ್ಲೆ ನಡೆಸಿದ ಪ್ರಕರಣ ಶುಕ್ರವಾರ ನಡೆದಿದೆ.

ಮೈಸೂರು: ಕೊರೋನಾ ಸೋಂಕಿತ ಯುವಕನ ಮೇಲೆ ಗ್ರಾಮಸ್ಥರಿಂದ ಕಲ್ಲು ತೂರಾಟ!
ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಯುವಕನ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಮೈಸೂರಿನ ಕರಪುರ ಗ್ರಾಮದಲ್ಲಿ ನಡೆದಿದೆ.

ಜನರಿಂದ ಸಹಾನುಭೂತಿ ಪಡೆಯಲು ಮಮತಾ ಪ್ರಯತ್ನ: ಅಧೀರ್ ರಂಜನ್ ಚೌಧರಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತನ್ನ ಮೇಲೆ ಕೊಲೆ ಯತ್ನ, ಪಿತೂರಿ, ಹಲ್ಲೆಯಂತಹ ಘಟನೆಗಳು ನಡೆದಿವೆ ಎಂದು ಹೇಳುವ ಮೂಲಕ ಜನರಿಂದ ಸಹಾನುಭೂತಿ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಲೋಕಸಭೆಯಲ್ಲಿನ ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ತಿಳಿಸಿದ್ದಾರೆ.

ನಡ್ಡಾ ಬೆಂಗಾವಲು ಪಡೆ ಮೇಲೆ ದಾಳಿ: ಪಶ್ಚಿಮ ಬಂಗಾಳ ಡಿಜಿಪಿ, ಮುಖ್ಯ ಕಾರ್ಯದರ್ಶಿಗೆ ಕೇಂದ್ರ ಗೃಹ ಸಚಿವಾಲಯ ಸಮನ್ಸ್!
ಪಶ್ಚಿಮ ಬಂಗಾಳ ರಾಜ್ಯದಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ರಾಜ್ಯಪಾಲರಿಂದ ವರದಿ ಪಡೆದಿರುವ ಕೇಂದ್ರ ಗೃಹ ಸಚಿವಾಲಯ, ಆ ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಹಾಗೂ ಮುಖ್ಯ ಕಾರ್ಯದರ್ಶಿಗೆ ಸಮನ್ಸ್ ನೀಡಿದೆ.

ನೈಜೀರಿಯಾದಲ್ಲಿ ನರಮೇಧ: ಉಗ್ರಗಾಮಿಗಳಿಂದ ಸುಮಾರು 110 ರೈತರ ಹತ್ಯೆ
ಈಶಾನ್ಯ ನೈಜೀರಿಯಾದಲ್ಲಿ ನಡೆದ ಘೋರ ಹತ್ಯಾಕಾಂಡದಲ್ಲಿ ಬಹುತೇಕ ರೈತರು ಸೇರಿದಂತೆ 110 ಜನರು ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ವರದಿ ಮಾಡಿದ್ದಾರೆ.

ಎಚ್.ಡಿ. ಕೋಟೆ: ಕಾಡಾನೆ ದಾಳಿಗೆ ವೃದ್ಧ ಸಾವು, ಎರಡು ಮನೆ ಜಖಂ
ಬೆಳ್ಳಂಬೆಳಗ್ಗೆ ಮನೆಯೊಂದರ ಮೇಲೆ ಕಾಡಾನೆಯೊಂದು ದಾಳಿ ಮಾಡಿದ ಪರಿಣಾಮ ವೃದ್ಧನೋರ್ವ ಮೃತಪಟ್ಟಿರುವ ಘಟನೆ ಜಿಲ್ಲೆಯ ಎಚ್.ಡಿ.ಜೋಟೆ ತಾಲೂಕಿನ ನೆಟ್ಟಕಲ್ಲಹುಂಡಿ ಗ್ರಾಮದಲ್ಲಿ ನಡೆದಿದೆ.

