ರಾಜ್ಯಬೆಂಗಳೂರಿನ ಅತ್ತಿಬೆಲೆಯಲ್ಲಿ ಪಟಾಕಿ ದುರಂತ; ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ಎನ್ಜಿಟಿ
ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಅತ್ತಿಬೆಲೆಯಲ್ಲಿನ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 14 ಮಂದಿ ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು (ಎನ್ಜಿಟಿ) ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ರಾಜ್ಯ ಸರ್ಕಾರದಿಂದ ಸಮಗ್ರ ಮಾಹಿತಿ ಕೇಳಿದೆ.