ರಾಜ್ಯ'ವರ್ಕ್ ಫ್ರಮ್ ಆಫೀಸ್' ನಿಯಮ: ಐಟಿ ಕ್ಷೇತ್ರದಲ್ಲಿ ಉದ್ಯೋಗ ತೊರೆಯುವ ಮಹಿಳೆಯರ ಸಂಖ್ಯೆ ಹೆಚ್ಚಳ!
ಕೋವಿಡ್ ಸಾಂಕ್ರಾಮಿಕದಿಂದಾಗಿ ಕಳೆದ ಮೂರು ವರ್ಷಗಳ ಕಾಲ ಮನೆಯಿಂದಲೇ ಕೆಲಸ ಮಾಡುವ ಸೌಲಭ್ಯ ನೀಡಿದ್ದ ಅನೇಕ ಐಟಿ ಕಂಪನಿಗಳು ಈಗ ತಮ್ಮ ಉದ್ಯೋಗಿಗಳನ್ನು ವಾರಕ್ಕೆ ಕನಿಷ್ಠ ಮೂರು ದಿನ ಕಚೇರಿಗೆ ಬಂದು ಕೆಲಸ ಮಾಡಬೇಕೆಂದು ನಿಯಮ ತಂದಿದೆ. ಇದು ಮಹಿಳಾ ಉದ್ಯೋಗಿಗಳಿಗೆ ಸಮಸ್ಯೆಯಾಗುತ್ತಿದ್ದು, ಕೆಲಸ ತೊರೆಯುವ ಮಹಿಳೆಯರ ಸಂಖ್ಯೆ(Attrition rate) ಇತ್ತೀಚೆಗೆ ಹೆಚ್ಚಾಗುತ್ತಿದೆ.