August

ಪೆಗಾಸಸ್ ವಿವಾದ: ಆಗಸ್ಟ್ 5 ರಂದು ಸುಪ್ರೀಂಕೋರ್ಟ್ ವಿಚಾರಣೆ
ಪೆಗಾಸಸ್ ಗೂಢಚರ್ಯೆಯನ್ನು ಸುಪ್ರೀಂ ಕೋರ್ಟ್‌ನ ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸ್ವತಂತ್ರ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಹಿರಿಯ ಪತ್ರಕರ್ತರಾದ ಎನ್.ರಾಮ್ ಮತ್ತು ಶಶಿ ಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಆಗಸ್ಟ್ 5 ರಂದು ವಿಚಾರಣೆ ನಡೆಸಲಿದೆ ಎಂದು ತಿಳಿದುಬಂದಿದೆ.

ಆಗಸ್ಟ್ 17ಕ್ಕೆ ಜಮ್ಮು-ಕಾಶ್ಮೀರ, ಲಡಾಖ್'ಗೆ ಸಂಸದೀಯ ಸ್ಥಾಯಿ ಸಮಿತಿ ಭೇಟಿ
ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯು ಆಗಸ್ಟ್ 17 ರಿಂದ 22 ರವರೆಗೆ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ಗೆ ಭೇಟಿ ನೀಡುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಆಗಸ್ಟ್ 3 ರಿಂದ 'ಶಬರಿ ಸೆರ್ಚಿಂಗ್ ಫಾರ್ ರಾವಣ' ಶೂಟಿಂಗ್
ಡಿಂಪಲ್ ಕ್ವೀನ್ ರಚಿತಾ ರಾಮ್ ನಟನೆಯ ಶಬರಿ ಸೆರ್ಚಿಂಗ್ ಫಾರ್ ರಾವಣ ಸಿನಿಮಾ ಶೂಟಿಂಗ್ ಆಗಸ್ಟ್ 3 ರಿಂದ ಆರಂಭವಾಗಲಿದೆ.

ಆಗಸ್ಟ್ ವೇಳೆಗೆ ರಾಜ್ಯದಲ್ಲಿ ಕಾಲೇಜುಗಳ ಆರಂಭಕ್ಕೆ ಚಿಂತನೆ: ಡಿಸಿಎಂ ಅಶ್ವತ್ ನಾರಾಯಣ್
ರಾಜ್ಯದ ಕಾಲೇಜುಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಆಫ್‌ಲೈನ್ ತರಗತಿಗಳನ್ನು ಆಗಸ್ಟ್ ವೇಳೆಗೆ ಪುನರಾರಂಭಿಸಲು, ಜುಲೈ ಅಂತ್ಯಕ್ಕೂ ಮೊದಲು ಕಾಲೇಜಿಗೆ ಹೋಗುವ ಎಲ್ಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಕನಿಷ್ಠ ಒಂದು ಡೋಸ್ ಕೋವಿಡ್ ಲಸಿಕೆ ನೀಡುವ ಉದ್ದೇಶವನ್ನು ರಾಜ್ಯ ಸರ್ಕಾರ ಹೊಂದಿದೆ...

ಆಗಸ್ಟ್ ತಿಂಗಳಲ್ಲಿ ಬೆಂಗಳೂರು ದಕ್ಷಿಣ ಝೋನ್ ಕೋವಿಡ್ ಮರಣ ಪ್ರಮಾಣ ಏರಿಕೆ
ಆಗಸ್ಟ್ ತಿಂಗಳಲ್ಲಿ ಬೆಂಗಳೂರು ದಕ್ಷಿಣ ಝೋನ್ ಕೋವಿಡ್-19 ಮರಣ ಪ್ರಮಾಣ ಏರಿಕೆ ಕಂಡಿದೆ.

ಆಗಸ್ಟ್ ತಿಂಗಳಲ್ಲಿ 86,449 ಕೋಟಿ ರೂ. ಜಿಎಸ್ ಟಿ ಸಂಗ್ರಹ
ದೇಶಾದ್ಯಂತ ಕೊರೋನಾ ವೈರಸ್ ಮತ್ತು ಲಾಕ್ ಡೌನ್ ನಿಂದಾಗಿ ಬಹುತೇಕ ಉದ್ಯಮ ಚಟುವಟಿಕೆ ಸ್ಥಗಿತವಾಗಿದ್ದರಿಂದ ಜಿಎಸ್ ಟಿ ಆದಾಯದಲ್ಲಿ ಇಳಿಕೆಯಾಗಿದ್ದು, ಆಗಸ್ಟ್ ತಿಂಗಳಲ್ಲಿ 86,449 ಕೋಟಿ ರೂ.ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಮಂಗಳವಾರ ತಿಳಿಸಿದೆ.

ಆಗಸ್ಟ್ ನಲ್ಲಿ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟ: ಸುರೇಶ್ ಕುಮಾರ್
ಜುಲೈ 4ರಂದು ಮುಕ್ತಾಯಗೊಳ್ಳಲಿರುವ ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ಹೇಳಿದ್ದಾರೆ.

ಶಾಲೆ-ಕಾಲೇಜುಗಳ ಪುನಾರಂಭ ವದಂತಿ; ಅಗಸ್ಟ್ ನಂತರವೇ ಪುನರಾರಂಭ: ಕೇಂದ್ರ ಮಾನವ ಸಂಪನ್ಮೂಲ ಸಚಿವರ ಸ್ಪಷ್ಟನೆ
ದೇಶದಾದ್ಯಂತ ಕೊರೊನಾ ವೈರಸ್ ಸೋಂಕು ಹರಡುತ್ತಿರುವ ನಡುವಲ್ಲೇ ಶಾಲೆಗಳ ಆರಂಭದ ಕುರಿತು ಗೊಂದಲಗಳು ಏರ್ಪಟ್ಟಿದೆ. ಈ ನಡುವಲ್ಲೇ ಶಾಲೆ, ಕಾಲೇಜುಗಳು ಅಗಸ್ಟ್ ಬಳಿಕಷ್ಟೇ ಪುನರಾರಂಭಗೊಳ್ಳಲಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ನಿಶಾಂಕ್ ಪೋಖ್ರಿಯಾಲ್ ಸ್ಪಷ್ಟಪಡಿಸಿದ್ದಾರೆ.

ಪ್ರಮುಖ ಕೈಗಾರಿಕೆ ವಲಯದ ಉತ್ಪಾದನೆ ತೀವ್ರ ಕುಸಿತ
ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ ಎಂಟು ಪ್ರಮುಖ ಕೈಗಾರಿಕೆಗಳು ಜುಲೈನಲ್ಲಿನ ಶೇ .2.7ಕ್ಕೆ ಹೋಲಿಸಿದರೆ ಈ ವರ್ಷ ಆಗಸ್ಟ್‌ನಲ್ಲಿ ನಕಾರಾತ್ಮಕವಾಗಿದ್ದು ಶೇ .0.5 ಕ್ಕೆ ಕುಸಿದಿದೆ.

