ಕ್ರಿಕೆಟ್T20 World Cup 2024: ಸ್ಕಾಟ್ಲೆಂಡ್ ವಿರುದ್ಧ ಗೆದ್ದ ಆಸ್ಟ್ರೇಲಿಯಾ; ಸೂಪರ್ 8 ಗೆ ಇಂಗ್ಲೆಂಡ್ ಪ್ರವೇಶ
ಟಿ20 ವಿಶ್ವಕಪ್ನಲ್ಲಿ ಸೂಪರ್ 8 ಹಂತಕ್ಕೆ ಪ್ರವೇಶಿಸುವ ಸ್ಕಾಟ್ಲೆಂಡ್ ತಂಡದ ಕನಸು ಭಗ್ನವಾಗಿದ್ದು, ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳು ಬಿ ಗುಂಪಿನಿಂದ ಸೂಪರ್ 8 ಹಂತಕ್ಕೆ ಪ್ರವೇಶ ಪಡೆದಿವೆ. ಸೆಂಟ್ ಲೂಸಿಯಾದಲ್ಲಿ ನಡೆದ ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾ ಐದು ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ, ಇಂಗ್ಲೆಂಡ್ ಸೂಪರ್ 8 ಹಂತಕ್ಕೆ ತಲುಪಲು ಸಹಾಯ ಮಾಡಿತು.