ರಾಜ್ಯಸಾಹಿತಿ, ಚಿಂತಕರಿಗೆ ಭದ್ರತೆ ಒದಗಿಸಲು ಸರ್ಕಾರ ಸಿದ್ಧ: ಗೃಹ ಸಚಿವ ಡಾ.ಜಿ. ಪರಮೇಶ್ವರ್
ಬೆದರಿಕೆ ಎದುರಿಸುತ್ತಿರುವ ಸಾಹಿತಿಗಳು ಮತ್ತು ಚಿಂತಕರಿಗೆ ಅಗತ್ಯ ಭದ್ರತೆ ಒದಗಿಸಲು ರಾಜ್ಯ ಸರ್ಕಾರ ಸಿದ್ಧವಿದೆ. ಸಾಹಿತಿಗಳು ಬಯಸಿದರೆ ರಕ್ಷಣೆ ಒದಗಿಸಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರು ಮಂಗಳವಾರ ಹೇಳಿದರು.