Ayodhya Verdict

ಅಯೋಧ್ಯೆ ತೀರ್ಪು ಹಿನ್ನೆಲೆ ಶಾಂತಿ, ಸಾಮರಸ್ಯ ಕಾಪಾಡಲು ಪ್ರಧಾನಿ ಮೋದಿ ಮನವಿ
ಅಯೋಧ್ಯೆ ಭೂ ವಿವಾದಕ್ಕೆ ಸಂಬಂಧಿಸಿದ ಸುಪ್ರೀಂಕೋರ್ಟ್‌ನಲ್ಲಿ ನಾಳೆ ತೀರ್ಪ ಪ್ರಕಟಗೊಳ್ಳುವ ಹಿನ್ನೆಲೆಯಲ್ಲಿ ದೇಶವಾಸಿಗಳು ಶಾಂತಿ ಕಾಪಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

ನ.9 ಅಯೋಧ್ಯೆ ತೀರ್ಪು: ಬೆಂಗಳೂರಿನಲ್ಲಿ ನಿಷೇಧಾಜ್ಞೆ, ಮದ್ಯ ಮಾರಾಟ ನಿಷೇಧ!
ನವೆಂಬರ್ 9ರಂದು ಅಯೋಧ್ಯೆ ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ 144 ನಿಷೇಧಾಜ್ಞೆ, ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

ನಾಳೆ ಅಯೋಧ್ಯೆ ತೀರ್ಪು: ಕರ್ನಾಟಕದಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!
ಶತಮಾನದ ಹಳೆಯ ವಿವಾದ ಅಯೋಧ್ಯೆ ರಾಮಜನ್ಮಭೂಮಿ ಮತ್ತು ಬಾಬರಿ ಮಸೀದಿ ಪ್ರಕರಣ ಸಂಬಂಧ ಐತಿಹಾಸಿಕ ತೀರ್ಪು ನಾಳೆ ಸುಪ್ರೀಂ ಕೋರ್ಟ್ ಪ್ರಕಟಿಸಲಿರುವುದರಿಂದ ಮುಂಜಾಗೃತ ಕ್ರಮವಾಗಿ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಶತಮಾನದ ವಿವಾದಕ್ಕೆ ನಾಳೆ ತೆರೆ: ಅಯೋಧ್ಯೆ ರಾಮಜನ್ಮಭೂಮಿ ಪ್ರಕರಣದ 'ಸುಪ್ರೀಂ' ತೀರ್ಪು ಪ್ರಕಟ!
ಶತಮಾನದ ಹಳೆಯ ವಿವಾದ ಅಯೋಧ್ಯೆ ರಾಮಜನ್ಮಭೂಮಿ ಮತ್ತು ಬಾಬರಿ ಮಸೀದಿ ಪ್ರಕರಣ ಸಂಬಂಧ ತೀರ್ಪು ನಾಳೆ ಸುಪ್ರೀಂ ಕೋರ್ಟ್ ಪ್ರಕಟಿಸಲಿದೆ.

ಅಯೋಧ್ಯ ತೀರ್ಪು: ಅಹಿತಕರ ಘಟನೆಗೆ ಆಸ್ಪದವಿಲ್ಲ, ರಾಜ್ಯಾದ್ಯಂತ ಕಟ್ಟೆಚ್ಚರ - ಬಸವರಾಜ ಬೊಮ್ಮಾಯಿ
ಅಯೋಧ್ಯೆಯ ರಾಮಜನ್ಮಭೂಮಿ ಬಾಬ್ರಿ ಮಸೀದಿ ವಿವಾದ ಕುರಿತು ಸುಪ್ರೀಂ ಕೋರ್ಟ್ ತೀರ್ಪು ನೀಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದ್ದು, ಅಹಿತಕರ ಘಟನೆಗಳಿಗೆ ಆಸ್ಪದ ನೀಡುವುದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅಯೋಧ್ಯೆ: ಸುಪ್ರೀಂ ತೀರ್ಪನ್ನು ಶಾಂತಿಯುತವಾಗಿ ಸ್ವೀಕರಿಸೋಣ- ಪೇಜಾವರ ಶ್ರೀ ಮನವಿ
ಅಯೋಧ್ಯೆ ಕುರಿತಂತೆ ಸುಪ್ರೀಂಕೋರ್ಟ್ ತೀರ್ಪು ಹೊರಬರುವ ಹಿನ್ನೆಲೆಯಲ್ಲಿ ಸಮಾಜದಲ್ಲಿ ಸಾಮರಸ್ಯ ಕಾಪಾಡಿಕೊಂಡು, ಜನರ ಭಾವನೆಗಳಿಗೆ ಧಕ್ಕೆ ತರುವಂತಹ ಸಂಭ್ರಮಾಚರಣೆಯ ಮೆರವಣಿಗೆಗಳನ್ನು ನಡೆಸದಂತೆ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮಿಜೀ ಜನರಿಗೆ ಮನವಿ ಮಾಡಿದ್ದಾರೆ.

ಉ.ಪ್ರ: ಅಯೋಧ್ಯೆ ತೀರ್ಪು ಹಿನ್ನೆಲೆ, ಮುಖ್ಯ ಕಾರ್ಯದರ್ಶಿ, ಡಿಜಿಪಿಯೊಂದಿಗೆ ಸಿಜೆಐ ಮಾತುಕತೆ
ಮುಂದಿನ ವಾರ ಅಯೋಧ್ಯೆ ವಿವಾದಿತ ತೀರ್ಪು ಹೊರಬೀಳಲಿರುವ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುರಿತಂತೆ ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಮಹಾನಿರ್ದೇಶಕರೊಂದಿಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ರಂಜನ್ ಗೋಗೊಯ್ ಮಾತುಕತೆ ನಡೆಸುವ ಸಾಧ್ಯತೆ ಇದೆ.

ಅಯೋಧ್ಯ ತೀರ್ಪಿನ ನಂತರ ರಾಜ್ಯದಲ್ಲಿ ಶಾಂತಿ-ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕು-ಯೋಗಿ ಆದಿತ್ಯನಾಥ್
ಅಯೋಧ್ಯೆ ವಿಷಯ ಕುರಿತು ಸುಪ್ರೀಂ ಕೋರ್ಟ್ ತೀರ್ಪು ಯಾವುದೇ ದಿನ ಹೊರಬೀಳಲಿರುವ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಜಿಲ್ಲಾ ಅಧಿಕಾರಿಗಳಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚಿಸಿದ್ದಾರೆ.

ಅಯೋಧ್ಯೆ ತೀರ್ಪಿಗೆ ದಿನಗಣನೆ: ಮೊದಲ ಬಾರಿ ಶಿಲಾ ಕೆತ್ತನೆ ಕೆಲಸ ಸ್ಥಗಿತಗೊಳಿಸಿದ ವಿಎಚ್ ಪಿ
ರಾಮ ಜನ್ಮಭೂಮಿ - ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ತೀರ್ಪಿಗೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್(ವಿಎಚ್ ಪಿ) ಇದೇ ಮೊದಲ ಬಾರಿಗೆ ಅಯೋಧ್ಯೆಯಲ್ಲಿ....

