Ayodhya

ಶ್ರೀರಾಮ ಜನ್ಮಭೂಮಿ ದೇವಾಲಯವನ್ನು ಬಿಂಬಿಸುವ ಫೋಟೋಗಳು!
ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ಶ್ರೀರಾಮ ಜನ್ಮಭೂಮಿ ದೇವಾಲಯವನ್ನು ಬಿಂಬಿಸುವ ಚಿತ್ರಗಳು.

ಮೋದಿ ನಮ್ಮ ರೇಡಾರ್ನಲ್ಲಿದ್ದಾರೆ; ಅಯೋಧ್ಯೆ, ಮಥುರಾದಲ್ಲಿ ಬಾಂಬ್ ದಾಳಿ ನಡೆಸ್ತೀವಿ: PFIನಿಂದ ಪ್ರತೀಕರಾದ ಎಚ್ಚರಿಕೆ
ಪಿಎಫ್ಐ ನಿಷೇಧದಿಂದ ಪತರಗುಟ್ಟಿ ಹೋಗಿರುವ ಅದರ ಸದಸ್ಯನೊಬ್ಬ ಪ್ರಧಾನಿ ನರೇಂದ್ರ ಮೋದಿ ನಮ್ಮ ರೇಡಾರ್ನಲ್ಲಿದ್ದಾರೆ. ಅಲ್ಲದೆ ಅಯೋಧ್ಯೆ ಮತ್ತು ಮಥುರಾದಲ್ಲಿ ಆತ್ಮಾಹುತಿ ದಾಳಿ ಮಾಡುವುದಾಗಿ ಬೆದರಿಕೆ ಪತ್ರ ಕಳುಹಿಸಿದ್ದಾನೆ ಎಂದು ಮಹಾರಾಷ್ಟ್ರ ಬಿಜೆಪಿ ಶಾಸಕ ವಿಜಯ್ ದೇಶಮುಖ್ ಆರೋಪಿಸಿದ್ದಾರೆ.

ಅಯೋಧ್ಯೆ: ಕಾರ್ಯಕ್ರಮವೊಂದರಲ್ಲಿ ರಾವಣನ ಪಾತ್ರ ನಿರ್ವಹಿಸುತ್ತಿದ್ದ ಕಲಾವಿದನಿಗೆ ಹೃದಯ ಸ್ತಂಭನ, ಸಾವು
ಉತ್ತರ ಪ್ರದೇಶದ ಅಯೋಧ್ಯೆ ಜಿಲ್ಲೆಯಲ್ಲಿ ನಡೆಯುತ್ತಿದ್ದ ರಾಮಲೀಲಾ ಕಾರ್ಯಕ್ರಮದಲ್ಲಿ 'ರಾವಣ'ನ ಪಾತ್ರವನ್ನು ನಿರ್ವಹಿಸುತ್ತಿದ್ದ ಕಲಾವಿದರೊಬ್ಬರು ಹೃದಯ ಸ್ತಂಭನದಿಂದಾಗಿ ವೇದಿಕೆಯಲ್ಲೇ ಮೃತಪಟ್ಟಿದ್ದಾರೆ.

ರಾಮ ಮಂದಿರದಿಂದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಭರ್ಜರಿ ಬೇಡಿಕೆ: ಅಯೋಧ್ಯೆಯಲ್ಲಿ ಬಂಡವಾಳ ಹೂಡಿಕೆಗೆ ವಿದೇಶಿಯರ ಆಸಕ್ತಿ
ಅಯೋಧ್ಯೆಯಲ್ಲಿ ಐತಿಹಾಸಿಕ ರಾಮಮಂದಿರ ನಿರ್ಮಾಣ ಕಾರ್ಯಾರಂಭ ಆಗಿದ್ದೇ ಆಗಿದ್ದು, ಜಿಲ್ಲೆ ಹಾಗೂ ಸುತ್ತ ಮುತ್ತಲ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಭರ್ಜರಿ ಬೇಡಿಕೆ ಬಂದಿದೆ.

ಈ ಊರಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥರಿಗೆ ದೇವಾಲಯ, ದಿನವೂ ನಡೆಯಲಿದೆ ಪೂಜೆ, ಮಂಗಳಾರತಿ!
ಉತ್ತರ ಪ್ರದೇಶದ ಅಯೋಧ್ಯ ಸಮೀಪವಿರುವ ಸ್ಥಳವೊಂದರಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ದೇವರಂತೆ ಪೂಜಿಸುತ್ತಾರೆ. ಅವರ ರೂಪದ ಮೂರ್ತಿ ನಿರ್ಮಾಣ ಮಾಡಿ ಪ್ರತಿದಿನ ಪೂಜೆ, ಮಂಗಳಾರತಿ ಸೇರಿದಂತೆ ದೇವರಿಗೆ ಕೈಗೊಳ್ಳುವಂತೆ ಪೂಜೆ ಪುನಸ್ಕಾರಗಳನ್ನು ಮಾಡುತ್ತಾರೆ. ಹೌದು ಆ ಊರೇ ಭರತಕುಂಡ್.

ರಾಮ ಮಂದಿರ ಉದ್ಘಾಟನೆಗೆ ಮುನ್ನ 'ರಥ ಯಾತ್ರೆ' ಕೈಗೊಳ್ಳಬೇಕು: ಉಡುಪಿ ಪೇಜಾವರ ಮಠಾಧೀಶ ಒತ್ತಾಯ
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೂ ಮುನ್ನ ರಾಮೇಶ್ವರಂನಿಂದ ಕಾಶ್ಮೀರದವರೆಗೆ ‘ರಥಯಾತ್ರೆ’ ನಡೆಸಬೇಕೆಂದು ಉಡುಪಿ ಪೇಜಾವರ ಮಠದ ಪೀಠಾಧಿಪತಿ ಹಾಗೂ ರಾಮಜನ್ಮಭೂಮಿ ಟ್ರಸ್ಟ್ನ ಸದಸ್ಯ ಸ್ವಾಮಿ ವಿಶ್ವಪ್ರಸನ್ನ ತೀರ್ಥರು ಪ್ರಸ್ತಾವನೆ ಮುಂದಿಟ್ಟಿದ್ದಾರೆ.

ಅಯೋಧ್ಯೆ: 2024ರ ಮಕರಸಂಕ್ರಾಂತಿಯಂದು ಹೊಸ ದೇವಾಲಯದ ಗರ್ಭಗುಡಿಯಲ್ಲಿ ರಾಮನ ವಿಗ್ರಹ ಪ್ರತಿಷ್ಠಾಪನೆ
ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಗರ್ಭಗುಡಿಯಲ್ಲಿ ಜನವರಿ 14, 2024ರ ಮಕರಸಂಕ್ರಾಂತಿಯಂದು ರಾಮನ ವಿಗ್ರಹವನ್ನು ಪ್ರತಿಷ್ಠಾಪಿಸಲಾಗುವುದು ಎಂದು ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್...

ನೀಲಿಮಿಶ್ರಿತ ಶ್ವೇತ ಶಿಲೆಯ ರಾಮನ ವಿಗ್ರಹ ಪ್ರತಿಷ್ಠಾಪನೆ: ಅಯೋಧ್ಯೆ ಟ್ರಸ್ಟ್ ನಿರ್ಣಯ
ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರದಲ್ಲಿ ನೀಲಿ ಮಿಶ್ರಿತ ಶ್ವೇತ ಶಿಲೆಯಲ್ಲಿ ಶಿಲ್ಪಶಾಸ್ತ್ರೋಕ್ತ ರೀತಿಯಲ್ಲಿ ಶ್ರೀರಾಮನ ವಿಗ್ರಹ ನಿರ್ಮಿಸಿ ಪ್ರತಿಷ್ಠಾಪಿಸಲಾಗುವುದೆಂದು ಭಾನುವಾರ ಅಯೋಧ್ಯೆಯ ಪ್ರವಾಸಿ ಮಂದಿರದಲ್ಲಿ ನಡೆದ ಟ್ರಸ್ಟ್ ಸಭೆಯಲ್ಲಿ ನಿರ್ಣಯಿಸಲಾಗಿದೆ .

ಅಯೋಧ್ಯೆಯಲ್ಲಿ ಅಕ್ರಮ ನಿವೇಶನ ಮಾರಾಟ: ಬಿಜೆಪಿ ಶಾಸಕ ಸೇರಿದಂತೆ 40 ಮಂದಿ ಹೆಸರು ಪ್ರಕಟ
ಅಯೋಧ್ಯೆಯ ಮೇಯರ್, ಸ್ಥಳೀಯ ಬಿಜೆಪಿ ಶಾಸಕ ಮತ್ತು ಬಿಜೆಪಿ ಪಕ್ಷದ ಮಾಜಿ ಶಾಸಕ ಸೇರಿದಂತೆ 40 ಜನರು ಅಯೋಧ್ಯೆಯಲ್ಲಿ ನಿವೇಶನಗಳನ್ನು ಅಕ್ರಮವಾಗಿ ಮಾರಾಟ ಮಾಡಿದ್ದು, ಅಲ್ಲಿ ಮೂಲಭೂತ ಸೌಕರ್ಯಗಳನ್ನು ನಿರ್ಮಿಸಿದ್ದಾರೆ ಎಂದು ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರ ಆರೋಪಿಸಿದೆ.

