Ayodhya

ರಾಮಮಂದಿರವು ರಾಮರಾಜ್ಯದ ಆದರ್ಶಗಳನ್ನು ಆಧರಿಸಿ ಆಧುನಿಕ ಭಾರತದ ಸಂಕೇತವಾಗಲಿದೆ: ರಾಷ್ಟ್ರಪತಿ ಕೋವಿಂದ್
ಐತಿಹಾಸಿಕ ರಾಮಮಂದಿರ ದೇಗುಲ ನಿರ್ಮಾಣ ಕಾರ್ಯಕ್ಕೆ ಪ್ರಧಾನಿ ಮೋದಿ ಶಿಲಾನ್ಯಾಸ ನೆರವೇರಿಸಿದ ಬೆನ್ನಲ್ಲೇ ಅತ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕೇಂದ್ರ ಸರ್ಕಾರವನ್ನು ಅಭಿನಂದಿಸಿದ್ದಾರೆ.

ಕನಸಿನ ಐತಿಹಾಸಿಕ ಕ್ಷಣ ನನಸು: ರಾಮಮಂದಿರಕ್ಕೆ ಭೂಮಿ ಪೂಜೆ ನೆರವೇರಿಸಿದ ಪ್ರಧಾನಿ ಮೋದಿ
ಹಿಂದೂ ಧರ್ಮೀಯರ ದಶಕಗಳ ಕನಸು ನನಸಾಗಿದ್ದು, ಐತಿಹಾಸಿಕ ಶ್ರೀರಾಮಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯುಕ್ತವಾಗಿ ಭೂಮಿ ಪೂಜೆ ನೆರವೇರಿಸಿದರು.

ರಾಮಲಲ್ಲಾಗೆ ತಾತ್ಕಾಲಿಕ ದೇಗುಲದಿಂದ ಮುಕ್ತಿ: 500 ವರ್ಷಗಳ ಬಳಿಕ ಜನ್ಮಸ್ಥಾನಕ್ಕೆ ಶ್ರೀರಾಮ, ರಾಜ್ಯದಲ್ಲೂ ಶ್ರೀರಾಮನ ಜಪ
ಅಯೋಧ್ಯೆಯಲ್ಲಿ ರಾಮಮಂದಿರಕ್ಕೆ ಭೂಮಿ ನೆರವೇರುವುದರೊಂದಿಗೆ ಶ್ರೀರಾಮನಿಗೆ ಕೊನೆಗೂ ತಾತ್ಕಾಲಿಕ ಜಾಗದಿಂದ ಮುಕ್ತಿ ಸಿಗುವ ಕಾಲ ಹತ್ತಿರಕ್ಕೆ ಬಂದಿದೆ. ದಶರಥ ಪುತ್ರ, ಅಯೋಧ್ಯಾಧೀಶ ಶ್ರೀರಾಮನ ಭವ್ಯ ಮಂದಿರ ನಿರ್ಮಾಣ ಕುರಿತ ಕೋಟ್ಯಾಂತರ ಭಾರತೀಯರ ಕನಸು ನನಗಾಸುವ ಕ್ಷಣ ಹತ್ತಿರ ಬಂದಿದ್ದು...

ರಾಮಮಂದಿರ ನಿರ್ಮಾಣ ರಾಷ್ಟ್ರೀಯ ಏಕತೆಯ ಪ್ರತಿಬಿಂಬವಾಗಲಿ: ಕುಮಾರಸ್ವಾಮಿ
ರಾಮಮಂದಿರ ನಿರ್ಮಾಣ ಸಾಂಸ್ಕೃತಿಕ ಪರಂಪರೆಯ ಬೆಸುಗೆ ಹಾಗೂ ರಾಷ್ಟ್ರೀಯ ಏಕತೆಯ ಪ್ರತಿಬಿಂಬವಾಗಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಶಯ ವ್ಯಕ್ತಪಡಿಸಿದ್ದಾರೆ.

ರಾಮ ಮಂದಿರ ಶಿಲಾನ್ಯಾಸ: ಹನುಮಾನ್ ಗಡಿಯಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ ಸಲ್ಲಿಕೆ
ಶ್ರೀರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮದ ನಿಮಿತ್ತ ಆಯೋಧ್ಯೆಗೆ ತೆರಳಿರುವ ಪ್ರಧಾನಿ ಮೋದಿ ಭೂಮಿ ಪೂಜೆಗೂ ಮುನ್ನ ಹನುಮಾನ್ ಗಡಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಕೆ ಮಾಡಿದರು.

ಲಖನೌಗೆ ಬಂದಿಳಿದ ಪ್ರಧಾನಿ ಮೋದಿ, ವಿಶೇಷ ಹೆಲಿಕಾಪ್ಟರ್ ನಲ್ಲಿ ಆಯೋಧ್ಯೆಯತ್ತ ಪಯಣ
ಅಯೋಧ್ಯೆ ಶ್ರೀರಾಮಮಂದಿರದ ಭೂಮಿ ಪೂಜೆಗೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು ಪ್ರಧಾನಿ ನರೇಂದ್ರ ಮೋದಿ ಅವರು ಲಖನೌ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

ಅಯೋಧ್ಯೆಯಲ್ಲಿ ಶತಮಾನಗಳ ನಂತರ ಮತ್ತೆ ಶ್ರೀರಾಮ ಪಟ್ಟಾಭಿಷೇಕ: ಮುಖ್ಯಮಂತ್ರಿ ಯಡಿಯೂರಪ್ಪ
ಅಗಣಿತ ಸಾಧು-ಸಂತರ, ಶ್ರದ್ಧಾಳುಗಳ ತಪಸ್ಸು, ಪರಿಶ್ರಮ, ಬಲಿದಾನ, ಪ್ರಾರ್ಥನೆಗಳು ಸಾಕಾರಗೊಳ್ಳುವ ಸಮಯ ಬಂದಿದೆ. ಜನಾಂದೋಲನಗಳಲ್ಲಿ ಪಾಲ್ಗೊಂಡು, ಅನೇಕ ರೀತಿಯ ಸವಾಲುಗಳನ್ನು ಎದುರಿಸಿ, ಹೋರಾಟಗಳನ್ನು ಮಾಡಿದ ಪಕ್ಷದ ಎಲ್ಲ ನಾಯಕರು, ಕಾರ್ಯಕರ್ತರ ಪ್ರಯತ್ನಗಳನ್ನು ಸ್ಮರಿಸುತ್ತಾ,

ರಾಮ ಮಂದಿರ ಭೂಮಿ ಪೂಜೆ ಮಹೋತ್ಸವಕ್ಕೆ ಅಯೋಧ್ಯೆಗೆ ಅಲಂಕಾರ: ಐತಿಹಾಸಿಕ ಕ್ಷಣ ಕಣ್ತುಂಬಿಕೊಳ್ಳಲು ಭಕ್ತರ ಕಾತುರ
ರಾಮ ಮಂದಿರ ಭೂಮಿ ಪೂಜೆಯನ್ನು ಒಂದು ಮಹೋತ್ಸವದ ರೀತಿಯಲ್ಲಿ ದೇಶದ ಜನ ಸಂಭ್ರಮಿಸುತ್ತಿದ್ದು, ರಾಮ ಹುಟ್ಟಿದ ನಾಡು ಅಯೋಧ್ಯೆ ನಗರ ಅಲಂಕಾರದಿಂದ ಕಂಗೊಳಿಸುತ್ತಿದೆ.

ನಾಳೆ ರಾಮಮಂದಿರ ಭೂಮಿ ಪೂಜೆ: ಪ್ರತಿ ಮನೆಯಲ್ಲಿ ಪೂಜೆ ಸಲ್ಲಿಸಲು ಬಿಎಸ್ ಯಡಿಯೂರಪ್ಪ ಮನವಿ
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಾಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಮಮಂದಿರಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದು ರಾಜ್ಯದ ಜನತೆ ರಾಜ್ಯದ ಎಲ್ಲ ದೇವಾಲಯಗಳಲ್ಲಿ ಮತ್ತು ಪ್ರತಿ ಮನೆಗಳಲ್ಲಿ ಇಷ್ಟದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ.

