ರಾಜ್ಯಹುಬ್ಬಳ್ಳಿ ಕಿಮ್ಸ್ ನಲ್ಲಿ ಹೆಣ್ಣು ಶಿಶು ಅಪಹರಣ ಪ್ರಕರಣ: ಹೆತ್ತ ತಾಯಿಯನ್ನೇ ಬಂಧಿಸಿದ ಪೊಲೀಸರು!
40 ದಿನದ ಹೆಣ್ಣು ಶಿಶು ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಆದರೆ, ವಿಚಿತ್ರವೆಂದರೆ, ಈ ಪ್ರಕರಣದಲ್ಲಿ ಹೆತ್ತ ತಾಯಿಯೇ ಪ್ರಮುಖ ಆರೋಪಿಯಾಗಿದ್ದು, ಇದೀಗ ನ್ಯಾಯಾಂಗ ಬಂಧನದಲ್ಲಿದ್ದಾರೆ. ಶಿಶುವಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.