ರಾಜಕೀಯಸಿಎಂ ಆಯ್ಕೆ ಮಾಡೋದು, ಕೆಳಗೆ ಇಳಿಸೋದು ಗೊತ್ತು; ಯಾರ ಬಳಿಯೂ ಭಿಕ್ಷೆ ಬೇಡಲ್ಲ; ಸಮುದಾಯಕ್ಕೆ ನೀವು ಕೊಟ್ಟಿದ್ದೇನು?: ಸಿಎಂ ಮೇಲೆ ಬಿ ಕೆ ಹರಿಪ್ರಸಾದ್ ಅಸಮಾಧಾನ
ಕಾಂಗ್ರೆಸ್ ಹಿರಿಯ ನಾಯಕ ವಿಧಾನ ಪರಿಷತ್ ಸದಸ್ಯ ಕರಾವಳಿ ಮೂಲದ ಬಿ ಕೆ ಹರಿಪ್ರಸಾದ್ (B K Hariprasad) ಮತ್ತೆ ಸುದ್ದಿಯಾಗಿದ್ದಾರೆ. ಈ ಬಾರಿ ಕೂಡ ಅವರು ಪಕ್ಷದಲ್ಲಿ ಸೂಕ್ತ ಸ್ಥಾನಮಾನ ತಮಗೆ ಸಿಕ್ಕಿಲ್ಲ ಎಂದು ಬಹಿರಂಗವಾಗಿಯೇ ಸಿಎಂ ಸಿದ್ದರಾಮಯ್ಯ ಮೇಲೆ ತಮ್ಮ ಅಸಮಾಧಾನ ತೋಡಿಕೊಂಡಿದ್ದಾರೆ.