bail

ಬಿಜೆಪಿ ಟಿಕೆಟ್ ವಂಚನೆ ಪ್ರಕರಣ: ಜಾಮೀನು ಕೋರಿ 'ಹೈ' ಮೆಟ್ಟಿಲೇರಿದ ಅಭಿನವ ಹಾಲಶ್ರೀ ಸ್ವಾಮೀಜಿ
ದಕ್ಷಿಣ ಕನ್ನಡ ಜಿಲ್ಲೆಯ ಬೈಂದೂರಿನ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆ ಹಿರೇಹಡಗಲಿ ಹಾಲಸ್ವಾಮಿ ಮಠದ ಜಿ ಎಂ ಅಭಿನವ ಶ್ರೀ ಹಾಲವೀರಜ್ಜ ಅಲಿಯಾಸ್ ಅಭಿನವ ಹಾಲಶ್ರೀ ಸ್ವಾಮೀಜಿ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಅತ್ಯಾಚಾರ ಪ್ರಕರಣ: ಆರೋಪಿ ಜಾಮೀನು ಅರ್ಜಿ ವಿಚಾರಣೆಗೂ ಮುನ್ನ ಸಂತ್ರಸ್ತರಿಗೆ ಮಾಹಿತಿ ನೀಡಬೇಕು; ಹೈಕೋರ್ಟ್
ಅತ್ಯಾಚಾರ ಆರೋಪಿಯು ಐಪಿಸಿ ಅಥವಾ ಪೋಕ್ಸೊ ಕಾಯಿದೆ ಅಡಿ ಸಾಮಾನ್ಯ ಅಥವಾ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದಾಗ ಅಧೀನ ನ್ಯಾಯಾಲಯದ ರಿಜಿಸ್ಟ್ರಿಯು ಪ್ರಕರಣದ ಮಾಹಿತಿದಾರ/ಸಂತ್ರಸ್ತರು ಅಥವಾ ಅವರ ವಕೀಲರಿಗೆ ಕಾನೂನಿನ ಅನ್ವಯ ಮಾಹಿತಿ ನೀಡಬೇಕು...

ಟಿಕೆಟ್ ವಂಚನೆ ಪ್ರಕರಣ: ಹಾಲಶ್ರೀ ಜಾಮೀನು ಆದೇಶವನ್ನು ಅ.16ಕ್ಕೆ ಕಾಯ್ದಿರಿಸಿದ ನ್ಯಾಯಾಲಯ
ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆ ಹಿರೇಹಡಗಲಿ ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ ಸ್ವಾಮೀಜಿ ಸಲ್ಲಿಸಿರುವ ಜಾಮೀನು ಅರ್ಜಿಯ ಆದೇಶವನ್ನು ಅಕ್ಟೋಬರ್ 16ಕ್ಕೆ ಪ್ರಕಟಿಸುವುದಾಗಿ ನ್ಯಾಯಾಲಯ ಬುಧವಾರ ಹೇಳಿದೆ.

ಉದ್ಯೋಗಕ್ಕಾಗಿ ಭೂ ಹಗರಣ: ಲಾಲು ಪ್ರಸಾದ್ ಯಾದವ್, ರಾಬ್ರಿ ದೇವಿ, ತೇಜಸ್ವಿ ಯಾದವ್‌ಗೆ ಜಾಮೀನು ಮಂಜೂರು
ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದಂತೆ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಅವರ ಪತ್ನಿ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಮತ್ತು ಅವರ ಪುತ್ರ, ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಪ್ರಸಾದ್ ಯಾದವ್ ಮತ್ತು ಪುತ್ರಿ ಆರ್‌ಜೆಡಿ ಸಂಸದೆ ಮಿಸಾ ಭಾರ್ತಿ ಅವರಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ.

ಪಿಎಸ್ಐ ನೇಮಕಾತಿ ಹಗರಣ: ಐಪಿಎಸ್ ಅಧಿಕಾರಿ ಅಮೃತ್ ಪಾಲ್ಗೆ ಷರತ್ತು ಬದ್ದ ಜಾಮೀನು
ಪಿಎಸ್ಐ ನೇಮಕಾತಿ ಹಗರಣ ಸಂಬಂಧ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರಿಗೆ ಕರ್ನಾಟಕ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಇಸ್ಲಾಮಾಬಾದ್ ಹೈಕೋರ್ಟ್ ಜಾಮೀನು
ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಬಿಡುಗಡೆ ಮಾಡುವಂತೆ ಮಂಗಳವಾರ ಆದೇಶಿಸಿರುವ ಇಸ್ಲಾಮಾಬಾದ್ ಹೈಕೋರ್ಟ್ ಆಗಸ್ಟ್ 5 ರಂದು ವಿಚಾರಣಾ ನ್ಯಾಯಾಲಯ ನೀಡಿದ್ದ ಹಿಂದಿನ ತೀರ್ಪನ್ನು ಅಮಾನತುಗೊಳಿಸಿದೆ.

ಎಲ್ಗಾರ್ ಪರಿಷತ್ ಪ್ರಕರಣ: ವೆರ್ನಾನ್ ಗೊನ್ಸಾಲ್ವೆಸ್, ಅರುಣ್ ಫೆರೇರಾಗೆ ಸುಪ್ರೀಂ ಕೋರ್ಟ್ ಜಾಮೀನು
ಎಲ್ಗಾರ್ ಪರಿಷತ್ -ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ಕಳೆದ ಐದು ವರ್ಷಗಳಿಂದ ಬಂಧನದಲ್ಲಿದ್ದ ವೆರ್ನಾನ್ ಗೊನ್ಸಾಲ್ವೆಸ್ ಮತ್ತು ಅರುಣ್ ಫೆರಾರೆ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ನೀಡಿದೆ.

ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಸಿಂಗ್ ಗೆ ಷರತ್ತುಬದ್ಧ ಜಾಮೀನು
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಕುಸ್ತಿ ಫೆಡರೇಶನ್ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಜಾಮೀನು ಸಿಕ್ಕಿದೆ.

ದೇಶದ್ರೋಹದಂತಹ ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಿಗೆ ಜಾಮೀನಿನ ಕರುಣೆ ತೋರಲಾಗದು: ಹೈಕೋರ್ಟ್
2020 ರಲ್ಲಿ ನಡೆದ ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆಯಲ್ಲಿ ಭಾಗಿಯಾಗಿರುವ ಆರೋಪಿ ಇಮ್ರಾನ್ ಅಹ್ಮದ್ ಸಲ್ಲಿಸಿದ್ದ ಮೇಲ್ಮನವಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ. ನ್ಯಾಯಮೂರ್ತಿಗಳಾದ ಕೃಷ್ಣ ಎಸ್ ದೀಕ್ಷಿತ್ ಮತ್ತು ಪ್ರದೀಪ್ ಸಿಂಗ್ ಯೆರೂರ್ ಅವರ ವಿಭಾಗೀಯ ಪೀಠವು ಮನವಿಯನ್ನು ಅರ್ಹವಲ್ಲದ ಕಾರಣ ವಜಾಗೊಳಿಸಿದೆ.

