bail

ದೆಹಲಿ ಅಬಕಾರಿ ಹಗರಣ: ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ತಿರಸ್ಕೃತ
ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಪ್ರಕರಣದಲ್ಲಿ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ದೆಹಲಿ ಹೈಕೋರ್ಟ್ ಮಂಗಳವಾರ ಜಾಮೀನು ನಿರಾಕರಿಸಿದೆ.

ಸಾತನೂರಿನಲ್ಲಿ ಜಾನುವಾರು ವ್ಯಾಪಾರಿ ಹತ್ಯೆ ಪ್ರಕರಣ; ಪುನೀತ್ ಕೆರೆಹಳ್ಳಿ ಸೇರಿ ಐವರಿಗೆ ಜಾಮೀನು ನೀಡಿದ ಹೈಕೋರ್ಟ್
ರಾಮನಗರ ಜಿಲ್ಲೆಯ ಕನಕಪುರ ಸಮೀಪದ ಸಾತನೂರಿನಲ್ಲಿ ಜಾನುವಾರು ವ್ಯಾಪಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಲಪಂಥೀಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಹಾಗೂ ಇತರ ನಾಲ್ವರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಟೀ ಅಂಗಡಿಯಿಂದ 1,200 ರೂಪಾಯಿ ಕದ್ದ ವ್ಯಕ್ತಿ, 20,000 ರೂಪಾಯಿ ಬಾಂಡ್ ಮೇಲೆ ಆರೋಪಿಗೆ ಜಾಮೀನು
ಟೀ ಅಂಗಡಿಯ ಬೀಗ ಮುರಿದು 1200 ರೂ.ಗಳನ್ನು ಕದ್ದ ಆರೋಪದ ಮೇಲೆ ಬಂಧಿಸಲ್ಪಟ್ಟ ವ್ಯಕ್ತಿಯೊಬ್ಬನಿಗೆ ದೆಹಲಿ ನ್ಯಾಯಾಲಯವು 20,000 ರೂ.ಗಳ ವೈಯಕ್ತಿಕ ಬಾಂಡ್‌ನೊಂದಿಗೆ ಇದೇ ಮೊತ್ತದ ಓರ್ವನ ಶ್ಯೂರಿಟಿಯ ಮೇಲೆ ಜಾಮೀನು ನೀಡಿತು.

ಲಂಚ ಪ್ರಕರಣ: ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್‌ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು
ಗುತ್ತಿಗೆದಾರರಿಂದ 40 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತರಿಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಬೆಂಗಳೂರು ಜಲಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ಪ್ರಧಾನ ಲೆಕ್ಕಾಧಿಕಾರಿ ಪ್ರಶಾಂತ್ ಮಾಡಾಳ್ ಅವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಜಾಮೀನು ಷರತ್ತಿನಲ್ಲಿ ಸಡಿಲಿಕೆ ಕೋರಿ ಗಾಲಿ ಜನಾರ್ದನ ರೆಡ್ಡಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜಾಮೀನು ಷರತ್ತು ಸಡಿಲಿಸುವಂತೆ ಕೋರಿ ಗಾಲಿ ಜನಾರ್ದನರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ತಿರಸ್ಕರಿಸಿದೆ.

ಲಂಚ ಪ್ರಕರಣ: ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಗೆ ಜಾಮೀನು ನಿರಾಕರಿಸಿದ ನ್ಯಾಯಾಲಯ
ಜಾಮೀನು ನೀಡಿದರೆ ತನಿಖೆ ವೇಳೆ ಅಧಿಕಾರಿಗಳಿಗೆ ಸಹಕಾರ ನೀಡಬಹುದು ಎಂಬ ಯಾವುದೇ ವಿಶ್ವಾಸ ಇಲ್ಲದಿರುವುದರಿಂದ ಬಿಡಬ್ಲ್ಯುಎಸ್ ಎಸ್ ಬಿ ಹಣಕಾಸು ಸಲಹೆಗಾರ ಮತ್ತು ಮುಖ್ಯ ಲೆಕ್ಕಾಧಿಕಾರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರ ಪುತ್ರ ಎಂ ವಿ ಪ್ರಶಾಂತ್ ಕುಮಾರ್ ಗೆ ಜಾಮೀನು ನೀಡಲು ವಿಶೇಷ ನ್ಯಾಯಾಲಯ ನಿರಾಕರಿಸಿದೆ.

ಹಿಂದುತ್ವ ವಿರೋಧಿ ಪೋಸ್ಟ್: ನಟ ಚೇತನ್'ಗೆ ಜಾಮೀನು ಮಂಜೂರು
ಹಿಂದುತ್ವದ ವಿರುದ್ಧ ಪೋಸ್ಟ್ ಮಾಡಿ ಬಂಧನಕ್ಕೊಳಗಾಗಿದ್ದ ನಟ ಚೇತನ್'ಗೆ 32ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

'ಕಳ್ಳರ ಹೆಸರೆಲ್ಲ ಮೋದಿ ಎಂದೇ ಇರುತ್ತದೆ ಏಕೆ' ಎಂದಿದ್ದ ರಾಹುಲ್ ಗಾಂಧಿ ದೋಷಿ; ಸೂರತ್ ನ್ಯಾಯಾಲಯ ತೀರ್ಪು, 2 ವರ್ಷ ಜೈಲು ಶಿಕ್ಷೆ
ಕಳ್ಳರ ಹೆಸರೆಲ್ಲ ಮೋದಿ ಎಂದೇ ಇರುತ್ತದೆ ಏಕೆ ಎಂದು ಪ್ರಶ್ನಿಸಿ ಪರೋಕ್ಷವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಅವಹೇಳನ ಮಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ದೋಷಿ ಎಂದು ಗುಜರಾತ್ನ ಸೂರತ್ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ.

ಎಟಿಎಂ ಸ್ಕಿಮ್ಮಿಂಗ್ ಪ್ರಕರಣ: ದಕ್ಷಿಣ ಆಫ್ರಿಕಾದ ಇಬ್ಬರು ವ್ಯಕ್ತಿಗಳಿಗೆ ಜಾಮೀನು ನಿರಾಕರಿಸಿದ ಕರ್ನಾಟಕ ಹೈಕೋರ್ಟ್
ಎಟಿಎಂ ಸ್ಕಿಮ್ಮಿಂಗ್ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಲ್ಲಿ ಸುಮಾರು ಎರಡು ವರ್ಷಗಳಿಂದ ನ್ಯಾಯಾಂಗ ಬಂಧನದಲ್ಲಿರುವ ಇಬ್ಬರು ದಕ್ಷಿಣ ಆಫ್ರಿಕಾದ ಪ್ರಜೆಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನಿರಾಕರಿಸಿದೆ.

