bail

ಹಂಪಿ ಸ್ಮಾರಕದ ಮೇಲೆ ನೃತ್ಯದ ರೀಲ್ಸ್ ಮಾಡಿ ಬಂಧನಕ್ಕೊಳಗಾಗಿದ್ದ ದೀಪಕ್ ಗೌಡಗೆ ಜಾಮೀನು
ರೀಲ್ಸ್ಗಾಗಿ ಹಂಪಿಯ 14ನೇ ಶತಮಾನದ ಸ್ಮಾರಕವನ್ನೇರಿ ನೃತ್ಯ ಮಾಡಿ ಬಂಧನಕ್ಕೊಳಗಾಗಿದ್ದ ಇನ್ ಸ್ಟಾಗ್ರಾಂ ಖ್ಯಾತಿಯ ದೀಪಕ್ ಗೌಡಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ನಿಧಿ ದುರುಪಯೋಗ ಪ್ರಕರಣ: ಸಾಕೇತ್ ಗೋಖಲೆ ಜಾಮೀನು ಅರ್ಜಿ ಕುರಿತು ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ
ಕ್ರೌಡ್ ಫಂಡಿಂಗ್ ಮೂಲಕ ಸಂಗ್ರಹಿಸಿದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಪ್ರಕರಣದಲ್ಲಿ ಜಾಮೀನು ಕೋರಿ ತೃಣಮೂಲ ಕಾಂಗ್ರೆಸ್ ವಕ್ತಾರ ಸಾಕೇತ್ ಗೋಖಲೆ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಗುಜರಾತ್ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ.

ಮಾರ್ಚ್ 17ರವರೆಗೆ ಪವನ್ ಖೇರಾ ಮಧ್ಯಂತರ ಜಾಮೀನು ವಿಸ್ತರಿಸಿದ ಸುಪ್ರೀಂ ಕೋರ್ಟ್
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನನ್ನು ಮಾರ್ಚ್ 17ರವರೆಗೂ ಸುಪ್ರೀಂ ಕೋರ್ಟ್ ವಿಸ್ತರಿಸಿದೆ. ಈ ಪ್ರಕರಣದಲ್ಲಿ ಅಸ್ಸಾಂ ಪೊಲೀಸರು ಪವನ್ ಖೇರಾ ಅವರನ್ನು ಬಂಧಿಸಿದ್ದರು.

ಪ್ರಧಾನಿ ವಿರುದ್ಧದ ಹೇಳಿಕೆ ಪ್ರಕರಣ: ಮಧ್ಯಂತರ ಜಾಮೀನು ಆಧಾರದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಬಿಡುಗಡೆಗೆ ಸುಪ್ರೀಂ ಆದೇಶ
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮಾತನಾಡಿ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ನಾಯಕ ಪವನ್ ಖೇರಾಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ವರದಕ್ಷಿಣೆ ಕಿರುಕುಳ ಪ್ರಕರಣ ನಟಿ ಅಭಿನಯಾಗೆ ತಾತ್ಕಾಲಿಕ ರಿಲೀಫ್: ಸುಪ್ರೀಂ ಕೋರ್ಟ್ ಜಾಮೀನು
ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿ ರುವ ನಟಿ ಅಭಿನಯಾ, ತಾಯಿ ಹಾಗೂ ಸಹೋದರನಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ನೀಡಿದೆ.

ಎನ್ಎಸ್ಇ ಫೋನ್ ಕದ್ದಾಲಿಕೆ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಚಿತ್ರಾ ರಾಮಕೃಷ್ಣಗೆ ಜಾಮೀನು
ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್ (ಎನ್‌ಎಸ್‌ಇ) ಉದ್ಯೋಗಿಗಳ ಅಕ್ರಮ ಫೋನ್ ಕದ್ದಾಲಿಕೆ ಆರೋಪಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಗುರುವಾರ ಚಿತ್ರಾ ರಾಮಕೃಷ್ಣ ಅವರಿಗೆ ಜಾಮೀನು ಮಂಜೂರು ಮಾಡಿದೆ.

ಪಿಎಸ್‌ಐ ನೇಮಕಾತಿ ಹಗರಣ; ಆರೋಪಿ ಹರೀಶ್‌ಗೆ ಜಾಮೀನು ನಿರಾಕರಿಸಿದ ಕರ್ನಾಟಕ ಹೈಕೋರ್ಟ್
ಪಿಎಸ್‌ಐ ನೇಮಕಾತಿ ಹಗರಣದ ಆರೋಪಿ ಬ್ಯಾಡರಹಳ್ಳಿಯ ಕೆ.ಹರೀಶ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವುದರಿಂದ ಸಮಾಜಕ್ಕೆ ತಪ್ಪು ಸೂಚನೆ ನೀಡಿದಂತಾಗುತ್ತದೆ ಎಂದಿರುವ ಕರ್ನಾಟಕ ಹೈಕೋರ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಪೋಕ್ಸೋ ಪ್ರಕರಣ: ಮುರುಘಾ ಮಠದ ಶಿವಮೂರ್ತಿ ಸ್ವಾಮಿ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್
ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣದ ಜಾಮೀನು ಅರ್ಜಿಯನ್ನು ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಬಿ.ಕೆ.ಕೋಮಲಾ ಮಂಗಳವಾರ ತಿರಸ್ಕರಿಸಿದ್ದಾರೆ.

ಎರಡು ವರ್ಷಗಳ ಬಳಿಕ ಕೇರಳ ಪತ್ರಕರ್ತ ಸಿದ್ದಿಕಿ ಕಪ್ಪನ್ ಜೈಲಿನಿಂದ ಬಿಡುಗಡೆ
ಕೇರಳ ಪತ್ರಕರ್ತ ಸಿದ್ದಿಕಿ ಕಪ್ಪನ್ ಜಾಮೀನಿನ ಮೇರೆಗೆ ಉತ್ತರ ಪ್ರದೇಶ ಜೈಲಿನಿಂದ ಹೊರಗೆ ಬಂದಿದ್ದಾರೆ. ನಿಷೇಧಿತ ಸಂಘಟನೆಯೊಂದಿಗೆ ನಂಟು ಮತ್ತು ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆಯಡಿ ಅವರನ್ನು 2020ರಲ್ಲಿ ಬಂಧಿಸಲಾಗಿತ್ತು. ಎರಡು ವರ್ಷಗಳ ನಂತರ ಇದೀಗ ಅವರು ಜೈಲಿನಿಂದ ಹೊರಗೆ ಬಂದಿದ್ದಾರೆ.

