bail

ಶಾಸಕ ವಿಶ್ವನಾಥ್ ಕೊಲೆ ಸ್ಕೆಚ್ ಪ್ರಕರಣ: ಶರಣಾದ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣಗೆ ಜಾಮೀನು
ಯಲಹಂಕ ಬಿಜೆಪಿ ಶಾಸಕ ಎಸ್‌ಆರ್ ವಿಶ್ವನಾಥ್ ಅವರ ರಾಜಕೀಯ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಗೋಪಾಲಕೃಷ್ಣ, ಶಾಸಕರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು ಎಂದು ಆರೋಪಿಸಲಾಗಿದ್ದು, ಶುಕ್ರವಾರ ನ್ಯಾಯಾಲಯಕ್ಕೆ ಶರಣಾಗಿದ್ದು, ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ ಫೋನ್ ಪರಿಶೀಲನೆಗೆ ಮುಂದಾದ ಪೊಲೀಸರು
ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರಗೆ ಬಂದಿರುವ ಹ್ಯಾಕರ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ಮತ್ತೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾನಾ ಎಂಬುದರ ಕುರಿತು ಪರಿಶೀಲನೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.

ಅಪಹರಣ, ಹಲ್ಲೆ ಪ್ರಕರಣ: ಮಹಾರಾಷ್ಟ್ರ ಸಚಿವರಿಗೆ ಜಾಮೀನು
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಕಾರಣಕ್ಕೆ ವ್ಯಕ್ತಿಯೋರ್ವನನ್ನು ಅಪಹರಿಸಿ, ತನ್ನ ಬಂಗಲೆಯಲ್ಲಿಟ್ಟು ಹಲ್ಲೆ ಮಾಡಿದ ಆರೋಪದಲ್ಲಿ ಮಹಾರಾಷ್ಟ್ರ ಸಚಿವರೊಬ್ಬರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಸಚಿವರಿಗೆ ಜಾಮೀನು ದೊರೆತಿದೆ.

ದ್ವೇಷ ಭಾಷಣ: ಜಂತರ್ ಮಂತರ್ ರ್ಯಾಲಿ ಆಯೋಜಕ ಪ್ರೀತ್ ಸಿಂಗ್ ಗೆ ಜಾಮೀನು
ಕಳೆದ ತಿಂಗಳು ಜಂತರ್ ಮಂತರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ದ್ವೇಷ ಭಾಷಣ‘ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಕಾರ್ಯಕ್ರಮದ ಆಯೋಜಕರೊಬ್ಬರಲ್ಲಾದ ಪ್ರೀತ್ ಸಿಂಗ್ ಅವರಿಗೆ ದೆಹಲಿ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದೆ.

ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣದಲ್ಲಿ ಜಾಮೀನು: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಜೈಲಿನಿಂದ ಬಿಡುಗಡೆ
ಅಶ್ಲೀಲ ಚಿತ್ರಗಳ ನಿರ್ಮಾಣ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಉದ್ಯಮಿ ರಾಜ್ ಕುಂದ್ರಾಗೆ ಜಾಮೀನು ಸಿಕ್ಕಿದ ಹಿನ್ನೆಲೆಯಲ್ಲಿ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.

'ವಿಐಪಿ' ರೋಗಿಯಂತೆ ನೋಡಲಾಗದು: ಸಜ್ಜನ್ ಕುಮಾರ್ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
1984 ರ ಸಿಖ್ ವಿರೋಧಿ ಗಲಭೆಯ ಅಪರಾಧಿಯಾಗಿ ಜೀವಿತಾವಧಿ ಶಿಕ್ಷೆ ಅನುಭವಿಸುತ್ತಿರುವ, ಮಾಜಿ ಸಂಸದ ಸಜ್ಜನ್ ಕುಮಾರ್‌ನ ಮಧ್ಯಂತರ ಜಾಮೀನು ಅರ್ಜಿ ತಿರಸ್ಕಾರ ಮಾಡಿರುವ ಸುಪ್ರೀಂ ಕೋರ್ಟ್, "ನಿಮ್ಮನ್ನು ವಿಐಪಿ ರೋಗಿಯಂತೆ ನೋಡಲಾಗದು" ಎಂದು ಹೇಳಿದೆ.

ಯೋಗೀಶ್ ಗೌಡ ಹತ್ಯೆ ಕೇಸು: ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು, ಇಂದೇ ಬಿಡುಗಡೆ ಭಾಗ್ಯ?
ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಯೋಗೀಶ್ ಗೌಡ ಹತ್ಯೆ ಕೇಸಿನಲ್ಲಿ ಜಾಮೀನು ಸಿಕ್ಕಿದ್ದು ವರಮಹಾಲಕ್ಷ್ಮಿ ದಿನ ಶುಕ್ರವಾರವೇ ಬೆಳಗಾವಿಯ ಹಿಂಡಲಗ ಜೈಲಿನಿಂದ ಬಿಡುಗಡೆ ಭಾಗ್ಯ ಅವರಿಗೆ ಸಿಗಲಿದೆಯೇ ಎಂಬ ಮಾತುಗಳು ಕೇಳಿಬರುತ್ತಿದೆ.

ಬೇಲ್ ಮೇಲೆ ಹೊರಬಂದಿದ್ದ ವ್ಯಕ್ತಿಯಿಂದ ಪತ್ನಿಯ ಕೊಲೆ: ಮೂವರು ಅಧಿಕಾರಿಗಳು ಅಮಾನತು
ಆರೋಪಿ ನಂದಾ ನಾಯಕ್ ಎಂಬಾತನ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಆತನ ಪತ್ನಿಯೇ ಪ್ರಮುಖ ಸಾಕ್ಷಿಯಾಗಿದ್ದಳು. ಬೇಲ್ ಪಡೆದು ಹೊರಬಂದ ನಂದಾ ತನ್ನ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹಿಂಪಡೆಯುವಂತೆ ಪತ್ನಿಯ ಮೇಲೆ ಒತ್ತಡ ಹಾಕಿದ್ದ.

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: 'ಪೀಟರ್ ಪ್ಯಾನ್ ಸಿಂಡ್ರೋಮ್' ನಿಂದ ಬಳಲುತ್ತಿದ್ದ ಮುಂಬೈ ವ್ಯಕ್ತಿಗೆ ಜಾಮೀನು!
14 ವರ್ಷದ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೀಟರ್ ಪ್ಯಾನ್ ಸಿಂಡ್ರೋಮ್ ನಿಂದ ಬಳಲುತ್ತಿದ್ದ ವ್ಯಕ್ತಿಗೆ ಮುಂಬಯಿ ಕೋರ್ಟ್ ಜಾಮೀನು ನೀಡಿದೆ

