bail

ಸ್ಯಾಂಡಲ್'ವುಡ್ ಡ್ರಗ್ಸ್ ಕೇಸ್: ಆರೋಪಿಗಳು ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ, ಜಾಮೀನು ನೀಡಲು ಕೋರ್ಟ್ ನಿರಾಕರಣೆ
ಸ್ಯಾಂಡಲ್'ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಆರೋಪಿಗಳ ವಿರುದ್ಧ ಅಧಿಕಾರಿಗಳು ಬಲವಾದ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿದ್ದು, ಈ ಹಂತದಲ್ಲಿ ಆರೋಪಿಗಳಿಗೆ ಜಾಮೀನು ನೀಡುವುದರಿಂದ ಸಾಕ್ಷ್ಯಾಧಾರಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿದ್ದು ಜಾಮೀನು ನೀಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ ಎಂದು ತಿಳಿದುಬಂದಿದೆ.

ನೌಕಾಪಡೆ ನಿವೃತ್ತ ಅಧಿಕಾರಿ ಮೇಲೆ ಹಲ್ಲೆ :ಶಿವಸೇನಾ ನಾಯಕ ಕಮಲೇಶ್ ಕದಮ್ ಸೇರಿ 6 ಮಂದಿಗೆ ಜಾಮೀನು
ನೌಕಾ ಪಡೆ ನಿವೃತ್ತ ಅಧಿಕಾರಿ ಮೇಲೆ ಮುಂಬೈಯಲ್ಲಿ ಹಲ್ಲೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಶಿವಸೇನಾ ನಾಯಕ ಕಮಲೇಶ್ ಕದಮ್ ಮತ್ತು ಇತರ ಐವರಿಗೆ ಜಾಮೀನು ಸಿಕ್ಕಿದೆ. ಮುಂಬೈಯ ಸಮ್ತಾ ಬಗರ್ ಪೊಲೀಸ್ ಠಾಣೆಯಲ್ಲಿ ಆರು ಮಂದಿಗೂ ಜಾಮೀನು ಸಿಕ್ಕಿದೆ.

8 ತಿಂಗಳ ನಂತರ ಕಡೆಗೂ ಜಾಮೀನು ಪಡೆದ ಡಾ. ಕಫೀಲ್ ಖಾನ್
ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧನಕ್ಕೊಳಗಾಗಿ ಜೈಲಿನಲ್ಲಿದ್ದ ಡಾ. ಕಫೀಲ್ ಖಾನ್ ಗೆ ಅಲಹಾಬಾದ್ ಹೈಕೋರ್ಟ್ ಕಡೆಗೂ ಷರತ್ತು ಬದ್ಧ ಜಾಮೀನನ್ನು ಇಂದು ಮಂಜೂರು ಮಾಡಿದೆ.

ಆರ್ ಎಸ್ ಎಸ್ ಕಾರ್ಯಕರ್ತರ ಮೇಲೆ ಹಲ್ಲೆ: ನಾಲ್ವರು ಆರೋಪಿಗಳಿಗೆ ಜಾಮೀನು
ಸಿಎಎ ಮತ್ತು ಎನ್ ಆರ್ ಸಿ ಕಾಯ್ದೆ ಬೆಂಬಲಿಸಿ ಟೌನ್ ಹಾಲ್ ಮುಂದೆ ಕೈಗೊಂಡಿದ್ದ ರ್ಯಾಲಿಯಲ್ಲಿ ಆರ್ ಎಸ್ ಎಸ್ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ.

ವಿಕಾಸ್ ದುಬೆಯಂತಹ ಪಾತಕಿ ಜಾಮೀನು ಪಡೆದಿರುವುದು ನ್ಯಾಯಾಂಗ ವ್ಯವಸ್ಥೆಯ ವೈಫಲ್ಯ: ಸುಪ್ರೀಂ
ಇತ್ತೀಚಿಗೆ ಕಾನ್ಪುರದಲ್ಲಿ ನಡೆದ ಪೊಲೀಸ್ ಎನ್‍ಕೌಂಟರ್ ನಲ್ಲಿ ಸಾವನ್ನಪ್ಪಿದ ಪಾತಕಿ ವಿಕಾಸ್ ದುಬೆ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದರೂ ಆರೋಪಿ ಜಾಮೀನಿನ ಮೇಲೆ ಹೊರಗಿದ್ದದ್ದು ನ್ಯಾಯಾಂಗ ವ್ಯವಸ್ಥೆಯ ವೈಫಲ್ಯ ಎಂದು ಸುಪ್ರೀಂ ಕೋರ್ಟ್ ಸೋಮವಾರ ಅಭಿಪ್ರಾಯಪಟ್ಟಿದೆ.

ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋದ ಕ್ರಾಂತಿಕಾರಿ ಕವಿ ವರವರ ರಾವ್
ಕೋವಿಡ್-19 ಸಾಂಕ್ರಾಮಿಕ ರೋಗದ ವ್ಯಾಪಕ ಹರಡುವಿಕೆ ಹಾಗೂ ಆರೋಗ್ಯ ಕ್ಷೀಣಿಸುತ್ತಿರುವುದರಿಂದ ತಾತ್ಕಾಲಿಕವಾಗಿ ಜಾಮೀನು ನೀಡುವಂತೆ ಎಲ್ಗರ್ ಪರಿಷತ್- ಮಾವೋವಾದಿ ನಂಟಿನ ಪ್ರಕರಣದಲ್ಲಿ ಆರೋಪಕ್ಕೆ ಗುರಿಯಾಗಿರುವ ಕವಿ ಹಾಗೂ ಹೋರಾಟಗಾರ ವರವರ ರಾವ್ ಬಾಂಬೆ ಹೈಕೋರ್ಟ್ ನಲ್ಲಿ ಮನವಿ ಸಲ್ಲಿಸಿದ್ದಾರೆ.

82 ಬಾಂಗ್ಲಾದೇಶಿ ತಬ್ಲಿಘಿಗಳಿಗೆ ಕೋರ್ಟ್ ನಿಂದ ಜಾಮೀನು!
82 ಬಾಂಗ್ಲಾದೇಶಿ ತಬ್ಲಿಘಿ ಜಮಾತ್ ನ ಸದಸ್ಯರಿಗೆ ದೆಹಲಿ ಕೋರ್ಟ್ ಜು.10 ರಂದು ಜಾಮೀನು ಮಂಜೂರು ಮಾಡಿದೆ.

ಮರ್ಕಜ್ ನಿಜಾಮುದ್ದೀನ್ ಗೆ ತೆರಳಿದ್ದ 122 ಮಲೇಷಿಯನ್ನರಿಗೆ ಜಾಮೀನು!
ಕೋವಿಡ್-19 ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ವಿಧಿಸಿದ್ದ ನಿರ್ಬಂಧಗಳನ್ನು ಉಲ್ಲಂಘನೆ ಮಾಡಿ ನಿಜಾಮುದ್ದೀನ್ ಮರ್ಕಜ್ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿದ್ದ 122 ಮಲೇಷಿಯನ್ನರಿಗೆ ಜಾಮೀನು ಮಂಜೂರು ಮಾಡಲಾಗಿದೆ.

ದೇಶದ್ರೋಹ ಪ್ರಕರಣ: ವಿದ್ಯಾರ್ಥಿನಿ ಅಮೂಲ್ಯ ಲಿಯೋನಾ ಜೈಲಿನಿಂದ ಬಿಡುಗಡೆ
ಪಾಕಿಸ್ತಾನ ಜಿಂದಾಬಾದ್' ಎಂದು ಘೋಷಣೆ ಕೂಗಿ ದೇಶದ್ರೋಹದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ವಿದ್ಯಾರ್ಥಿನಿ ಅಮೂಲ್ಯ ಲಿಯೊನಾ ನರೋನಾ ಪರಪ್ಪನ ಅಗ್ರಹಾರ ಜೈಲಿನಿಂದ ಶುಕ್ರವಾರ ಬಿಡುಗಡೆಯಾಗಿದ್ದಾರೆ.

