Bajrang Dal

ನಾನೊಬ್ಬ ಬಜರಂಗಿ, ನನ್ನನ್ನೂ ಬ್ಯಾನ್ ಮಾಡಿ: ಕಾಂಗ್ರೆಸ್ ವಿರುದ್ಧ ಸಿಡಿದೆದ್ದ ಬಿಜೆಪಿ ನಾಯಕರು
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಈ ನಡುವಲ್ಲೇ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ರಾಜ್ಯ ಕಾಂಗ್ರೆಸ್, ಅಧಿಕಾರಕ್ಕೆ ಬಂದರೆ ಬಜರಂಗದಳವನ್ನು ನಿಷೇಧಿಸುವುದಾಗಿ ಹೇಳಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ: ಸಂಘಟನೆಯನ್ನು ನಿಷೇಧಿಸುವ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಬಜರಂಗ ದಳ ಪ್ರತಿಭಟನೆ
ಬಜರಂಗ ದಳದ ಕಾರ್ಯಕರ್ತರು ಕಾಂಗ್ರೆಸ್ ಕಚೇರಿ ಬಳಿ ಪ್ರತಿಭಟನೆ ನಡೆಸಿ, ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಡುಗಡೆ ಮಾಡಿರುವ ಪಕ್ಷದ ಪ್ರಣಾಳಿಕೆಯನ್ನು ಸುಟ್ಟು ಹಾಕಿದರು.

ಭಜರಂಗ ದಳ ನಿಷೇಧಿಸುವ ಕಾಂಗ್ರೆಸ್‌ನ ಭರವಸೆ ಮುಸ್ಲಿಮರ ಓಲೈಕೆಗಾಗಿ: ಬಿಜೆಪಿ ನಾಯಕ ವಿ ಸುನೀಲ್‌ಕುಮಾರ್
ತಾವು ಅಧಿಕಾರಕ್ಕೆ ಬಂದರೆ ಬಜರಂಗ ದಳವನ್ನು ನಿಷೇಧಿಸಲಾಗುವುದು ಎಂಬ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿನ ಭರವಸೆಯನ್ನು ಖಂಡಿಸಿದ ಇಂಧನ ಸಚಿವ ವಿ ಸುನೀಲ್ ಕುಮಾರ್, ಇದು ಮುಸ್ಲಿಮರನ್ನು ಓಲೈಸುವ ಕ್ರಮವಾಗಿದೆ ಎಂದು ಹೇಳಿದರು.

ಬಜರಂಗ ದಳದೊಂದಿಗೆ ಹನುಮಂತನ ಹೋಲಿಕೆ, ಮೋದಿ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ
ಪ್ರಧಾನಿ ನರೇಂದ್ರ ಮೋದಿ ಬಜರಂಗ ದಳದೊಂದಿಗೆ ಹನುಮಂತನನ್ನು ಹೋಲಿಸುವ ಮೂಲಕ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ಅವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದೆ.

ಆಜಾನ್ ವಿವಾದ: ಡಿಸಿ ಕಚೇರಿಗೆ ಬಜರಂಗದಳ, ವಿಎಚ್‌ಪಿ ಕಾರ್ಯಕರ್ತರಿಂದ ಗೋಮೂತ್ರ ಸಿಂಪಡಣೆ
ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲ ಮೇಲೆ ಆಜಾನ್ ಕೂಗಿದ್ದ ಸ್ಥಳವನ್ನು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗ ದಳದ ಕಾರ್ಯಕರ್ತರು ಸೋಮವಾರ ಗೋಮೂತ್ರ ಸಿಂಪಡಿಸಿ ಶುದ್ಧೀಕರಣ ಮಾಡಿದರು.

ಶಿವಮೊಗ್ಗ: ತಡರಾತ್ರಿ ಮಹಿಳೆಯರ ಪಾರ್ಟಿ ತಡೆದ ಭಜರಂಗದಳ ಕಾರ್ಯಕರ್ತರು
ಶಿವಮೊಗ್ಗ ನಗರದಲ್ಲಿ ಶುಕ್ರವಾರ ಸಂಜೆ ಹೋಟೆಲ್‌ನಲ್ಲಿ ಆಯೋಜಿಸಲಾಗಿದ್ದ ‘ಲೇಟ್ ನೈಟ್ ಲೇಡಿಸ್ ಪಾರ್ಟಿ’ಯನ್ನು ಬಜರಂಗದಳದ ಕಾರ್ಯಕರ್ತರು ತಡೆದ ಘಟನೆ ಶುಕ್ರವಾರ ನಡೆದಿದೆ.

ಕಾರಿನಲ್ಲಿ ಇಬ್ಬರು ಸಜೀವ ದಹನ: ಕೃತ್ಯದ ಹಿಂದೆ ಭಜರಂಗದಳದ ಕೈವಾಡ, ಆರೋಪ ನಿರಾಕರಿಸಿದ ಆರೋಪಿಗಳು
ರಾಜಸ್ಥಾನದ ಭಾರತ್ ಪುರ ಜಿಲ್ಲೆಯಿಂದ ಅಪಹರಿಸಲಾದ ಇಬ್ಬರು ವ್ಯಕ್ತಿಗಳು ಹರಿಯಾಣದ ಬಿವಾನಿ ಜಿಲ್ಲೆಯಲ್ಲಿ ಕಾರೊಂದರಲ್ಲಿ ಸುಟ್ಟ ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಜನವರಿ 17 ರಿಂದ ಬಜರಂಗ ದಳ 2 ದಿನಗಳ ರಾಷ್ಟ್ರವ್ಯಾಪಿ ಪ್ರತಿಭಟನೆ
ಬಜರಂಗ ದಳವು ಭಯೋತ್ಪಾದನೆಯನ್ನು ಸೃಷ್ಟಿಸಲು ಹಿಂದೂಗಳನ್ನು ಗುರಿಯಾಗಿಸುವ ಮೂಲಭೂತವಾದಿಗಳ ವಿರುದ್ಧ ಜನವರಿ 17 ರಿಂದ ಎರಡು ದಿನಗಳ ರಾಷ್ಟ್ರವ್ಯಾಪಿ ಪ್ರತಿಭಟನೆಗಳನ್ನು ನಡೆಸಲಿದೆ ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಸೋಮವಾರ ಪ್ರಕಟಿಸಿದೆ.

ಮಂಗಳೂರು: ನೇತ್ರಾವತಿ ನದಿಯಲ್ಲಿ ಬಜರಂಗ ದಳದ ಕಾರ್ಯಕರ್ತ ಶವವಾಗಿ ಪತ್ತೆ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನೇತ್ರಾವತಿ ನದಿಯಲ್ಲಿ ಗುರುವಾರ ಬಜರಂಗ ದಳದ ಕಾರ್ಯಕರ್ತನ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

